ಬಿಜೆಪಿಯಿಂದ ಚುನಾವಣೆಗಾಗಿ ಶ್ರೀರಾಮ, ಹಿಂದುತ್ವ ಬಳಕೆ: ಸಚಿವ ರಾಮಲಿಂಗರೆಡ್ಡಿ

By Kannadaprabha News  |  First Published Jan 9, 2024, 1:50 PM IST

ನಾವು ಎಂದಿಗೂ ರಾಜಕಾರಣಕ್ಕಾಗಿ ಹಿಂದುತ್ವ ಮತ್ತು ಶ್ರೀರಾಮನನ್ನು ತೆಗೆದುಕೊಂಡಿಲ್ಲ. ದೇಶದಲ್ಲಿ ಲಕ್ಷಾಂತರ ಶ್ರೀರಾಮನ ದೇವಸ್ಥಾನಗಳಿವೆ. ಬಿಜೆಪಿಯವರು ಮತಕ್ಕಾಗಿ ಶ್ರೀರಾಮನನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಏನೂ ಬಂಡವಾಳ ಇಲ್ಲ. ಬರಿ ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಅಷ್ಟೇ: ಸಾರಿಗೆ ಸಚಿವ ರಾಮಲಿಂಗರೆಡ್ಡಿ 


ಹುಬ್ಬಳ್ಳಿ(ಜ.09):  ನಾವೆಲ್ಲರೂ ಶ್ರೀರಾಮನನ್ನು ಶ್ರದ್ಧಾ-ಭಕ್ತಿಯಿಂದ ಪೂಜಿಸುತ್ತೇವೆ. ಆದರೆ, ಬಿಜೆಪಿಯವರು ಹಾಗಲ್ಲ ಚುನಾವಣೆಗಾಗಿ ಶ್ರೀರಾಮ ಹಾಗೂ ಹಿಂದುತ್ವವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದರು.

ಅವರು ಸೋಮವಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಎಂದಿಗೂ ರಾಜಕಾರಣಕ್ಕಾಗಿ ಹಿಂದುತ್ವ ಮತ್ತು ಶ್ರೀರಾಮನನ್ನು ತೆಗೆದುಕೊಂಡಿಲ್ಲ. ದೇಶದಲ್ಲಿ ಲಕ್ಷಾಂತರ ಶ್ರೀರಾಮನ ದೇವಸ್ಥಾನಗಳಿವೆ. ಬಿಜೆಪಿಯವರು ಮತಕ್ಕಾಗಿ ಶ್ರೀರಾಮನನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಏನೂ ಬಂಡವಾಳ ಇಲ್ಲ. ಬರಿ ಜನರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಅಷ್ಟೇ ಎಂದರು.

Tap to resize

Latest Videos

ಪ್ರಲ್ಹಾದ್‌ ಜೋಶಿಗೆ ಸರಿಸಾಟಿ ‘ಕೈ’ ಅಭ್ಯರ್ಥಿ ಯಾರು?: ಲಾಡ್‌, ಶೆಟ್ಟರ್‌ ಹೆಸರು ಮುಂಚೂಣಿಗೆ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಿಮಿಕ್ ಮಾಡುತ್ತಿದ್ದಾರೆ. ಕೇವಲ ರಾಜಕಾರಣಕ್ಕಾಗಿ ಮಾತನಾಡುವ ಬಿಜೆಪಿಯವರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಬಿಜೆಪಿಯವರು ಪುಗ್ಸೆಟ್ಟೆ ಅಧಿಕಾರಕ್ಕೆ ಬಂದರು. ಆದರೆ, ಪುಕ್ಸಟ್ಟೆಯಾಗಿ ಏನೂ ಕೊಡಲಿಲ್ಲ. ಅವರು ಕೆಲಸ ಮಾಡಲ್ಲ, ಮಾಡುವವರಿಗೂ ಬಿಡುವುದಿಲ್ಲ. ಆಗುವುದಕ್ಕೆ ಹರಕತ್ತು, ಆಗದಿರುವುದಕ್ಕೆ ಕುಮ್ಮಕ್ಕು ಎನ್ನುವುದು ಬಿಜೆಪಿಯವರ ಕಥೆ. ಅವರ ಮಾತಿಗೆ ಕಿಮ್ಮತ್ತಿಲ್ಲ. ಜನರೇ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

60 ಲಕ್ಷ ಮಹಿಳೆಯರು:

ಶಕ್ತಿ ಯೋಜನೆ ಜಾರಿಯಾದ ಮೇಲೆ ಪ್ರತಿದಿನ ಮಹಿಳೆಯರು ನಿರೀಕ್ಷೆ ಮೀರಿ ಸಂಚರಿಸುತ್ತಿದ್ದಾರೆ. ರಾಜ್ಯದಲ್ಲಿ ನಿತ್ಯವೂ 60 ಲಕ್ಷ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ ಎಂದರು. ಹಲವು ಹಿರಿಯ ಶಾಸಕರು 3 ಉಪಮುಖ್ಯಮಂತ್ರಿಗಳ ಬೇಡಿಕೆ ಇಟ್ಟಿರುವುದು ಗಮನಕ್ಕೆ ಬಂದಿದೆ. ಇದರಲ್ಲಿ ತಪ್ಪಿಲ್ಲ. ಈ ಕುರಿತು ನಿರ್ಣಯ ಕೈಗೊಳ್ಳಬೇಕಿರುವುದು ಹೈಕಮಾಂಡ್ ಎಂದರು.

click me!