
ಯಲ್ಲಾಪುರ (ಏ.27): ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಷ್ಟೇ ಅಲ್ಲದೇ, ಖುದ್ದು ವೈದ್ಯೋಪಚಾರವನ್ನೂ ನೀಡುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.
ಹಳಿಯಾಳದಲ್ಲಿ ಪ್ರಚಾರ ಕಾರ್ಯ ಮುಗಿಸಿ ರಾತ್ರಿ ಶಿರಸಿಗೆ ತೆರಳುವ ಸಂದರ್ಭದಲ್ಲಿ ಯಲ್ಲಾಪುರ- ಶಿರಸಿ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ವಿನಾಯಕ ಶೆಟ್ಟರ್ ಎಂಬವರು ರಸ್ತೆಯಲ್ಲೇ ಗಾಯದ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದ. ರಸ್ತೆ ಬದಿಯಲ್ಲಿ ವ್ಯಕ್ತಿ ಬಿದ್ದಿರುವುದನ್ನ ಕಂಡು ಕಾರು ನಿಲ್ಲಿಸಿದ ಡಾ.ಅಂಜಲಿ, ಗಾಯಾಳುವನ್ನ ಪರೀಕ್ಷಿಸಿ ತಕ್ಷಣ ತಮ್ಮದೇ ಕಾರಿನಲ್ಲಿ ಶಿರಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಗೆ ಗಾಯಾಳುವನ್ನ ದಾಖಲಿಸಿದ ಡಾ.ಅಂಜಲಿ, ಖುದ್ದು ವೈದ್ಯರಾಗಿ ವೈದ್ಯೋಪಚಾರವನ್ನೂ ನೀಡಿದ್ದಾರೆ.
ಬೈಕ್ ಸವಾರನ ಕೈ ಹಾಗೂ ಕಾಲಿಗೆ ಗಂಭೀರ ಗಾಯಳಾಗಿದ್ದು, ಗಾಯಾಳುವಿಗೆ ಧೈರ್ಯ ತುಂಬಿ ವೈದ್ಯಕೀಯ ತಂಡದೊಂದಿಗೆ ತಾವೂ ತುರ್ತು ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದು ಬೈಕ್ ಸವಾರನ ಜೀವ ಉಳಿಸುವಲ್ಲಿ ನೆರವಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.