ಪ್ರಚಾರ ಸಮಿತಿಯಿಂದ ಕೊಕ್‌, 'ನಾನು ಹರಿಯೋ ನೀರು..' ಎನ್ನುವ ಮೂಲಕ ಗುಡ್‌ಬೈ ಸೂಚನೆ ನೀಡಿದ ಸೋಮಣ್ಣ!

Published : Mar 10, 2023, 12:00 PM ISTUpdated : Mar 10, 2023, 12:04 PM IST
ಪ್ರಚಾರ ಸಮಿತಿಯಿಂದ ಕೊಕ್‌, 'ನಾನು ಹರಿಯೋ ನೀರು..' ಎನ್ನುವ ಮೂಲಕ ಗುಡ್‌ಬೈ ಸೂಚನೆ ನೀಡಿದ ಸೋಮಣ್ಣ!

ಸಾರಾಂಶ

ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಘೋಷಣೆಯಾಗಿದ್ದು, ನಿರೀಕ್ಷೆಯಂತೆ ಪಕ್ಷದಿಂದ ಒಂದು ಕಾಲು ಆಚೆ ಇಟ್ಟಿರುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಸತಿ ಸಚಿವ ವೀರಣ್ಣ ಸೋಮಣ್ಣರಿಗೆ ಕೊಕ್‌ ನೀಡಲಾಗಿದೆ.   

ಬೆಂಗಳೂರು (ಮಾ.10): ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ,  ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿಗಳನ್ನು ನೇಮಿಸಿ ಪ್ರಕಟಣೆ ಹೊರಡಿಸಿದೆ. ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಬಹುದು ಎನ್ನುವ ಸುದ್ದಿಗಳು ಈ ಹಿಂದೆ ಬಂದಿದ್ದವು. ಆದರೆ, ಇದೆಲ್ಲದಕ್ಕೂ ತೆರೆ ಎಳೆದಿರುವ ಬಿಜೆಪಿ, ಬೊಮ್ಮಾಯಿಗೆ ಅಧ್ಯಕ್ಷ ಸ್ಥಾನ ನೀಡಿದ್ದರೆ, ಬಿಎಸ್‌ವೈ ಅವರನ್ನು ಸದಸ್ಯರನ್ನಾಗಿ ಉಳಿಸಿಕೊಂಡಿದೆ. 25 ಸದಸ್ಯರ ತಂಡವನ್ನು ರಚನೆ ಮಾಡಿದ್ದು, ರಮೇಶ್‌ ಜಾರಕಿಹೊಳಿಗೂ ಅವಕಾಶ ನೀಡಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಸಮಿತಿಗಳನ್ನು ರಚನೆ ಮಾಡಿದ್ದಾರೆ. ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ 25 ಸದಸ್ಯರು ನೇಮಕ ಮಾಡಿದ್ದು, ಸದಸ್ಯ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರಿಗೂ ಅವಕಾಶ ನೀಡಲಾಗಿದೆ.

ಚುನಾವಣಾ ನಿರ್ವಹಣಾ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ ಮಾಡಲಾಗಿದೆ. ಚುನಾವಣಾ ನಿವರ್ಹಣಾ ಸಮಿತಿಯಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ 14 ಮಂದಿಯನ್ನು ನೇಮಕ ಮಾಡಲಾಗಿದೆ.

ಚುನಾವಣೆಗೆ ಬಿಎಸ್‌ವೈ, ಸೋಮಣ್ಣ ಒಟ್ಟಾಗಿ ಹೋಗಬೇಕು: ಮುಖಂಡರು, ಕಾರ್ಯಕರ್ತರ ಅಭಿಮತ

ನಾನು ಹರಿಯೋ ನೀರು ಎಂದ ಸೋಮಣ್ಣ: ಪ್ರಚಾರ ಸಮಿತಿಯಲ್ಲಿ ಗೋವಿಂದರಾಜನಗರ ಶಾಸಕ ಹಾಗೂ ವಸತಿ ಸಚಿವ ಸೋಮಣ್ಣ ಹೆಸರು ಪ್ರಮುಖವಾಗಿ ಮಿಸ್‌ ಆಗಿದೆ. ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಹೆಚ್ಚಿರುವ ಕಾರಣ, ಇದರಿಂದ ಪಕ್ಷಕ್ಕೆ ಮುಜುಗರವಾಗಬಾರದು ಎನ್ನುವ ದೃಷ್ಟಿಯಲ್ಲಿ ಬಿಜೆಪಿ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.

ನಡ್ಡಾ ಕಾರ್ಯಕ್ರಮಕ್ಕೇ ಸಚಿವ ಸೋಮಣ್ಣ ಗೈರು..!

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸೋಮಣ್ಣ, 'ನಾನು ನಿಂತ ನೀರಲ್ಲ. ಹರಿಯೋ ನೀರು. ಮನೆ ಮಗನಾಗಿ ಕ್ಷೇತ್ರದ ಜನರು ನೋಡಿದ್ದಾರೆ. ನಾನು ಯಾರ ಬಗ್ಗೆಯೂ ಒಂದು ಅಕ್ಷರವೂ ಮಾತನಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ಜೊತೆ ಕೆಲವು ವಿಷಯಗಳ ಬಗ್ಗೆ ಮಾತಾಡಿದ್ದೇನೆ. ಕ್ಷೇತ್ರದ ಜನರು ನನ್ನನ್ನ ಮನೆ ಮಗನಾಗಿ ನೋಡಿಕೊಂಡಿದ್ದಾರೆ. ನನಗೆ ಇವಾಗ 72 ವರ್ಷ, ಇವಾಗ ನನಗೆ ಆಗಬೇಕಿದ್ದು ಏನು ಇಲ್ಲ. ಆದರೆ ಸೋಮಣ್ಣ ಮಾತ್ರ ಹರಿಯೋ ನೀರು ಅನ್ನೋದರ ಬಗ್ಗೆ ಎಚ್ಚರಿಕೆಯಿರಬೇಕು' ಎಂದು ಹೇಳುವ ಮೂಲಕ ತಾವು ಕಾಂಗ್ರೆಸ್‌ಗೆ ಸೇರುವ ಸುಳಿವು ನೀಡಿದ್ದಾರೆ. ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ,  ಈ ಬಗ್ಗೆ ನಾನು ಏನು ಮಾತಾಡೋದಿಲ್ಲ  ಎಂದು ಹೇಳಿದ್ದಾರೆ.'

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್