ಪರಶುರಾಮ ಪ್ರತಿಮೆ ವಿಚಾರದಲ್ಲಿ ಕಾಂಗ್ರೆಸ್‌ ಸುಳ್ಳು ಬಯಲು: ಸುನೀಲ್ ಕುಮಾರ್

Kannadaprabha News   | Kannada Prabha
Published : Jul 16, 2025, 06:25 AM IST
V Sunil Kumar

ಸಾರಾಂಶ

ಬೈಲೂರು ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದ ಆರೋಪಗಳು ಸುಳ್ಳು ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಕಾರ್ಕಳ (ಜು.16): ಬೈಲೂರು ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದ ಆರೋಪಗಳು ಸುಳ್ಳು ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಕಾರ್ಕಳದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಹತಾಶ ಪ್ರಯತ್ನಗಳೆಲ್ಲಾ ವಿಫಲವಾಗಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಪಕ್ಷಗಳ ವಿರುದ್ಧ ನಿರಂತರವಾಗಿ ತನಿಖೆಗಳನ್ನು ನಡೆಸುವ ಪ್ರವೃತ್ತಿ ಬೆಳೆಯುತ್ತಿದೆ.

ಇದು ಫೈಬರ್ ಪ್ರತಿಮೆ ಎಂಬಂತೆ ಕಪೋಲಕಲ್ಪಿತ ಕಥೆಗಳ ಮೂಲಕ ಅಪಪ್ರಚಾರ ನಡೆಸಿದ್ದು, ಈಗ ಅದು ಸುಳ್ಳೆಂಬುದು ಬಯಲಾಗಿದೆ ಎಂದು ಹೇಳಿದರು. ಪರಶುರಾಮ ಥೀಂ ಪಾರ್ಕ್ ನನ್ನ ಕನಸಿನ ಯೋಜನೆ ಆಗಿದ್ದು, ಇದನ್ನು ದಕ್ಷಿಣ ಭಾರತದ ಶ್ರೇಷ್ಠ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಗುರಿ ಇತ್ತು. ಆದರೆ, ಕಾಂಗ್ರೆಸ್ ನಾಯಕರ ಅಸೂಯೆ ಮತ್ತು ರಾಜಕೀಯ ಲಾಭ ಈ ಯೋಜನೆಗೆ ಅಡ್ಡಿಯಾಯಿತು. ಪ್ರತಿಮೆ ಫೈಬರ್‌ನದು ಎಂಬ ತಪ್ಪು ಮಾಹಿತಿ ಹರಡಿದ ಕಾಂಗ್ರೆಸ್ ನಾಯಕರು ಈಗ ಸಾರ್ವಜನಿಕರಿಗೆ ಉತ್ತರ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಪ್ರಾರಂಭದಿಂದಲೂ ಪರಶುರಾಮ ಪ್ರತಿಮೆಯ ನಿರ್ಮಾಣ ಸಂಬಂಧ ಯಾರಾದರೂ ದೋಷಿಯಾಗಿದ್ದರೆ ತನಿಖೆ ನಡೆಸಿ, ಆದರೆ, ಕಳಪೆ ಪ್ರಚಾರ ಬೇಡವೆಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಆದರೆ, ಈ ವಿಷಯವನ್ನು ಮುಂದಿನ ಚುನಾವಣೆವರೆಗೆ ಜೀವಂತವಿಡುವಂತೆ ಉಪಮುಖ್ಯಮಂತ್ರಿ ಹೇಳಿದ್ದರ ಅರ್ಥವೇನು?. ಇದು ನನ್ನ ವಿರುದ್ಧವಷ್ಟೇ ಅಲ್ಲ, ಬಿಜೆಪಿ ವಿರುದ್ಧ ರೂಪಿಸಲಾದ ಷಡ್ಯಂತ್ರ ಎಂದು ಅವರು ಆರೋಪಿಸಿದರು. ಈ ಥೀಂ ಪಾರ್ಕ್ ಅಭಿವೃದ್ಧಿಗೆ ಸಹಕರಿಸಲು ಸರ್ಕಾರಕ್ಕೆ ಮನಸ್ಸಿಲ್ಲದಿದ್ದರೆ, ಭಿಕ್ಷೆ ಬೇಡಿಯಾದರೂ ಇದನ್ನು ಅಭಿವೃದ್ಧಿಪಡಿಸಲು ನಾನು ಸಿದ್ಧನಿದ್ದೇನೆ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ