
ಹರಿಹರ(ಮಾ.26): ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ದೊರಕದಿದ್ದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಾ ಗುವುದು ಎಂದು ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆಯೇ ಬಿಜೆಪಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ, ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಟಿಕೆಟ್ ಕೋರಲಾಗಿತ್ತು. ಆದರೂ ನಮ್ಮ ಕೋರಿಕೆಗೆ ಮನ್ನಣೆ ನೀಡಿಲ್ಲ. ಕಾಂಗ್ರೆಸ್ 2, ಬಿಜೆಪಿ 1 ಕ್ಷೇತ್ರದಲ್ಲಿ ಮಾತ್ರ ಸಮುದಾಯದವರಿಗೆ ಮನ್ನಣೆ ನೀಡಿದೆ. ಈ ಮೂಲಕ ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹಾಗೂ 15 ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಿರುವ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದರು.
ಲೋಕಸಭೆ ಚುನಾವಣೆ 2024: ಬಿಜೆಪಿ ಜತೆ ಮೈತ್ರಿ ಯಶಸ್ಸಿಗೆ ಜೆಡಿಎಸ್ ಅಷ್ಟಸೂತ್ರ..!
ನಮ್ಮ ಮತ ಬಿಜೆಪಿಗೆ ಎಂಬ ಭ್ರಮೆ ಬೇಡ, ನಮ್ಮ ಸಮುದಾಯವನ್ನು ವ್ಯವಸ್ಥಿತವಾಗಿ ಹತ್ತಿಕ್ಕುತ್ತಿರುವುದು ನೋಡಿಯೂ ನಾವು ಸುಮ್ಮನಿರಲ್ಲ, ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತೇವೆ, ಮುಖಂಡರೊಂದಿಗೆ ಚರ್ಚಿಸುತ್ತೇವೆ. ಮೊದಲ ವಾರದಲ್ಲಿ ಪ್ರಮುಖರ ಸಭೆ ನಡೆಸಿ ಅನ್ಯಾಯ ಮಾಡಿದವರಿಗೆ ಸೂಕ್ತ ಉತ್ತರ ನೀಡಲು ನಿರ್ಣಯಿಸುತ್ತೇವೆ ಎಂದರು.
ರಾಜ್ಯದ ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ಕಲಬುರಗಿ, ಉತ್ತರ ಕನ್ನಡ, ಚಿಕ್ಕೋಡಿ ಸೇರಿ ಹಲವು ಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಮತದಾರರೇ ನಿರ್ಣಾಯಕ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.