ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ತನಿಖೆಯಲ್ಲಿ ನಿರ್ದೋಷಿ ಎಂಬುದು ಸಾಬೀತಾದರೆ ಮತ್ತೆ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬಹುದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಚಿಕ್ಕಮಗಳೂರು (ಮೇ.31) :ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ತನಿಖೆಯಲ್ಲಿ ನಿರ್ದೋಷಿ ಎಂಬುದು ಸಾಬೀತಾದರೆ ಮತ್ತೆ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬಹುದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದೆ ನನ್ನ ಮೇಲೆ ಭ್ರಷ್ಟಾಚಾರದ ಆಪಾದನೆ ಬಂದಾಗ ದೆಹಲಿಗೆ ಕರೆ ಮಾಡಿ ನಾನು ರಾಜೀನಾಮೆ ಕೊಡುತ್ತೇನೆ ಅನುಮತಿ ಕೊಡಿ ಎಂದು ಕೇಳಿದ್ದೆ. ತಕ್ಷಣ ಬೇಡ ಅಂದರು. ಇದರಿಂದ ಸಮಾಧಾನ ಆಗದಿದ್ದಾಗ ಮೋದಿ ಅವರಿಗೆ ವಾಟ್ಸಪ್ ಮೆಸೇಜ್ ಮಾಡಿ ರಾಜೀನಾಮೆ ಕೊಡಲು ಅನುಮತಿ ಕೊಡಿ ಎಂದೆ, 2 ದಿನ ತಡೆಯಿರಿ ಅಂತ ಉತ್ತರ ಬಂತು, 2 ದಿನದ ನಂತರ ಅನುಮತಿ ನೀಡಿದರು, ಆಗ ಸಿದ್ದರಾಮಯ್ಯ, ಡಿಕೆಶಿ ನನ್ನ ರಾಜೀನಾಮೆಗೆ ಹೋರಾಟ ಮಾಡಿದ್ದರು. ಈಗ ಡಬಲ್ ಸ್ಟ್ಯಾಂಡರ್ಡ್ ತೋರಿಸುತ್ತಿದ್ದಾರೆ. ಈ ವಿಷಯದಲ್ಲಿ ಭಂಡತನದ ರಾಜಕಾರಣ ಮಾಡಬಾರದು. ನೈತಿಕತೆ ಇದ್ದರೆ ಸಚಿವರಿಂದ ರಾಜೀನಾಮೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
undefined
ನಮ್ಮ ಸರ್ಕಾರ ಬಂದಮೇಲೆ ಪರೀಕ್ಷಾ ಪಾವಿತ್ರ್ಯ ಕಾಪಾಡಿದ್ದೇವೆ: ಮಧು ಬಂಗಾರಪ್ಪ
ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಈಶ್ವರಪ್ಪ(KS Eshwarappa), ಉಚ್ಛಾಟನೆಗೆ ಬಿಜೆಪಿಯಲ್ಲಿ ಏನೂ ಬೆಲೆ ಇಲ್ಲ. ಜಗದೀಶ್ ಶೆಟ್ಟರ್(Jagdish shettar) ಅವರು ಕಾಂಗ್ರೆಸ್ ಪಕ್ಷದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾಗ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರನ್ನು ಮತ್ತೆ ಪಕ್ಷಕ್ಕೆ ಕರೆದುಕೊಂಡು ಬಂದು ಟಿಕೆಟ್ ಕೊಟ್ಟರು. ಕಾಂಗ್ರೆಸ್ ನ ಸಂಸ್ಕೃತಿ ಬಿಜೆಪಿಯಲ್ಲೂ ಪಾಲನೆ ಆಗ್ತಾ ಇದೆ. ಪಕ್ಷವನ್ನು ಶುದ್ಧೀಕರಣ ಮಾಡುವ ಉದ್ದೇಶ ಹೊಂದಿದ್ದೇವೆ. ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಗೆಲ್ಲಲಿದ್ದಾರೆ ಎಂದರು.