ವಾಲ್ಮೀಕಿ ನಿಗಮದಲ್ಲಿ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

By Kannadaprabha News  |  First Published Jul 12, 2024, 9:51 PM IST

ಇಂತಹ ಪ್ರಕರಣ ನಡೆಯಬಾರದಿತ್ತು, ನಡೆದು ಹೋಗಿದೆ. ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. 


ತಿಪಟೂರು (ಜು.12): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇಂತಹ ಪ್ರಕರಣ ನಡೆಯಬಾರದಿತ್ತು, ನಡೆದು ಹೋಗಿದೆ. ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಗುರುಕರಿರುಷಭ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು. 

ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿದೆ. ಈ ಕೇಸ್‌ಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ನೀಡಿ ತನಿಖೆ ನಡೆಸಲಾಗುತ್ತಿದೆ. ನಾವು ಆಂತರಿಕವಾಗಿಯೂ ಎಲ್ಲಾ ರೀತಿಯಲ್ಲಿ ತನಿಖೆ ಮಾಡಿದ್ದೇವೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಈ ಹಿಂದೆ ಬಿಜೆಪಿ ಕಾಲದಲ್ಲಿಯೂ ಇಂತಹ ಪ್ರಕರಣ ನಡೆದಿರೋ ಉದಾಹರಣೆಗಳು ಇವೆ ಎಂದರು. ಈ ಪ್ರಕರಣದಲ್ಲಿ ನಮ್ಮ ಶಾಸಕ, ಸಚಿವರದ್ದಾಗಲೀ ಯಾವುದೇ ಕೈವಾಡ ಇಲ್ಲ ಎಂಬುದನ್ನ ಅವರು ನಮಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. 

Tap to resize

Latest Videos

ವಾಲ್ಮೀಕಿ ಪ್ರಕರಣದಲ್ಲಿ ಮಂತ್ರಿಗಳು-ಶಾಸಕರು ಭಾಗಿಯಾಗಿದ್ದರೆ ಅದು ಖಂಡಿತ ಕಳಂಕ: ಸಚಿವ ಸತೀಶ್‌ ಜಾರಕಿಹೊಳಿ

ಈ ನಡುವೆ ಎಸ್‌ಐಟಿ ತನಿಖೆ ನಡೆಸುತ್ತಿರುವುದರಿಂದ ಇ.ಡಿ ಅವರ ಅವಶ್ಯಕತೆ ಇರಲಿಲ್ಲ. ದೊಡ್ಡ ಮೊತ್ತ ಅಂದ ಮೇಲೆ ಬ್ಯಾಂಕ್‌ನವರು ತನಿಖೆ ನಡೆಸಲು ಪವರ್ ಇದೆ. ಇ.ಡಿ ಬರುವಂತಹ ಅವಶ್ಯಕತೆ ಇರಲಿಲ್ಲ. ಆದರೆ ಬಂದಿದ್ದಾರೆ. ಇ.ಡಿ ದಾಳಿ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ ಎಂದು ತಿಳಿಸಿದರು ಈ ಪ್ರಕರಣದಲ್ಲಿ ನಾಗೇಂದ್ರ ಅವರದ್ದು ಯಾವುದೇ ರೀತಿಯ ತಪ್ಪಿಲ್ಲ. ಅವರು ಏನೇ ಕೇಳಿದರೂ ಉತ್ತರ ಕೊಡಲು ಸಿದ್ದರಿದ್ದಾರೆ. ಇ.ಡಿ ಅವರು ಏನ್ ಬೇಕಾದ್ರು ತನಿಖೆ ಮಾಡಲಿ. ಅವರದ್ದು ಯಾವುದೇ ತರಹದ ತಪ್ಪಿಲ್ಲ. ಅವರು ಕ್ಲೀನ್ ಚಿಟ್ ಪಡೆದು ಹೊರ ಬರುತ್ತಾರೆ ಅನ್ನೋ ನಂಬಿಕೆ ನನಗೆ ಇದೆ ಎಂದರು.

ಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ಸಿಸಿಟಿವಿ ಅವಳವಡಿಕೆ: ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪ್ರತಿ ವಿದ್ಯುತ್‌ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಪ್ರತಿ ವಿದ್ಯುತ್ ಕಂಬಕ್ಕೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. 

ಸಿಎಂ ಪತ್ನಿ ಪಡೆದಿರುವ 14 ಸೈಟುಗಳು ಅಕ್ರಮವಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ

ಈಗಾಗಲೇ ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು. ನಗರದಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದರು.

click me!