ಸೋನಿಯಾ ಗಾಂಧಿ ವಿರುದ್ಧ ಮಂಗಳೂರಲ್ಲಿ ಕೇಸ್! FIR ದಾಖಲಿಸದಿದ್ದರೆ ಹೈಕೋರ್ಟ್‌ಗೆ ಹೋಗುವ ಎಚ್ಚರಿಕೆ

Published : Aug 16, 2026, 07:46 PM IST
Sonia Gandhi assets India

ಸಾರಾಂಶ

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ಆರೋಪದ ಮೇಲೆ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿ ದೂರು ನೀಡಲಾಗಿದೆ. ಪೊಲೀಸರು ಎಫ್‌ಐಆರ್ ದಾಖಲಿಸದಿದ್ದರೆ ಹೈಕೋರ್ಟ್ ಮೂಲಕ ಕಾನೂನು ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಚ್ಚರಿಸಿದ್ದಾರೆ.

ಮಂಗಳೂರು: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ 'ವಂದೇ ಮಾತರಂ'ಗೆ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ಬಿಜೆಪಿ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು ದಾಖಲಾಗಿದೆ.

ಏನಿದು ಘಟನೆ?

ಆಗಸ್ಟ್ 15ರಂದು ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ವಂದೇ ಮಾತರಂ ಗೀತೆಯನ್ನು ಹಾಡಲಾಗುತ್ತಿತ್ತು. ಈ ವೇಳೆ ಸೋನಿಯಾ ಗಾಂಧಿ ಅವರು ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಸನ್ನೆ ಮಾಡಿದ್ದರು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ರಾಷ್ಟ್ರಗೀತೆಗೆ ಮಾಡಿದ ಅಪಮಾನ ಎಂದು ಬಿಜೆಪಿ ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 195 ಮತ್ತು 352 ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ವಿಕಾಸ್ ಪುತ್ತೂರು ನೀಡಿದ ಎಚ್ಚರಿಕೆ

ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಕಾಸ್ ಪುತ್ತೂರು, ವಂದೇ ಮಾತರಂ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ನೀಡಿದ ಗೀತೆ. ಇದನ್ನು ಪೂರ್ಣವಾಗಿ ಹಾಡಲು ಬಿಡದೆ ಅರ್ಧಕ್ಕೆ ನಿಲ್ಲಿಸುವುದು 140 ಕೋಟಿ ಭಾರತೀಯರಿಗೆ ಮಾಡಿದ ಅಪಮಾನ. ಒಂದು ವೇಳೆ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಎಫ್‌ಐಆರ್ ದಾಖಲಿಸದಿದ್ದರೆ, ನಾವು ಹೈಕೋರ್ಟ್ ಮೊರೆ ಹೋಗುತ್ತೇವೆ ಅಥವಾ ಖಾಸಗಿ ದೂರನ್ನು ದಾಖಲಿಸಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ವಂದೇ ಮಾತರಂಗೆ 'ಜನಗಣಮನ'ದಷ್ಟೇ ಗೌರವವಿದೆ. ರಾಷ್ಟ್ರೀಯ ಗೌರವಕ್ಕೆ ಚ್ಯುತಿ ಬರುವಂತೆ ವರ್ತಿಸುವುದು ಶಿಕ್ಷಾರ್ಹ ಅಪರಾಧ. ಕಾಂಗ್ರೆಸ್ ಪಕ್ಷಕ್ಕೆ ಮೊದಲಿನಿಂದಲೂ ವಂದೇ ಮಾತರಂ ಬಗ್ಗೆ ವಿರೋಧವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ರಾಷ್ಟ್ರದ ಸ್ವಾತಂತ್ರ್ಯದ ಅಮೃತ ಕಾಲದ ಈ ಸಂಭ್ರಮದಲ್ಲಿ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ ಎಂದು ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಈಗ ಪೊಲೀಸರು ಈ ದೂರಿನ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಮುಹೂರ್ತ ನಿಗಧಿ - ಸಿಎಂ ಶಿವಕುಮಾರ್ ಮಹತ್ವದ ಘೋಷಣೆ
Actor Trisha Krishnan: ರಾಜಕೀಯವಾಗಿ ತ್ರಿಶಾರನ್ನು ಆಕ್ಟಿವ್ ಮಾಡಿದ್ರಾ? ತಮಿಳುನಾಡು ಸಿಎಂ ವಿಜಯ್‌ಗೆ ಹೊಸ ತಲೆನೋವು ಶುರುವಾಯ್ತು!