ಬಿಜೆಪಿಯಿಂದ ಜಾತಿ ಎತ್ತಿ ಕಟ್ಟುವ ಕೆಲಸ: ಸಿದ್ದರಾಮಯ್ಯ

Published : May 07, 2023, 02:30 AM IST
ಬಿಜೆಪಿಯಿಂದ ಜಾತಿ ಎತ್ತಿ ಕಟ್ಟುವ ಕೆಲಸ: ಸಿದ್ದರಾಮಯ್ಯ

ಸಾರಾಂಶ

ದ್ವೇಷದ ವಾತಾವರಣ ಸೃಷ್ಟಿ, ಅಲ್ಪಸಂಖ್ಯಾತರು ಭಯದಲ್ಲಿ ಬದುಕುವಂತಾಗಿದೆ, ವರುಣ ಕ್ಷೇತ್ರದಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇನೆ, ಇದೇ ಕೊನೆ ಚುನಾವಣೆ: ಸಿದ್ದರಾಮಯ್ಯ

ಮೈಸೂರು(ಮೇ.07):  ಬಿಜೆಪಿಯಿಂದ ಜಾತಿ ಎತ್ತಿಕಟ್ಟುವ ಕೆಲಸವಾಗುತ್ತಿದೆ. ಜಾತಿ-ಧರ್ಮಗಳ ನಡುವೆ ದ್ವೇಷದ ವಾತಾವರಣ ಹುಟ್ಟು ಹಾಕುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ವರುಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಶನಿವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಹೈಕಮಾಂಡ್‌ ಹೇಳಿದ್ದರಿಂದ ವರುಣದಿಂದ ಸ್ಪರ್ಧಿಸಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾದ್ದರಿಂದ ಹುಟ್ಟೂರಿನಲ್ಲೇ ಚುನಾವಣಾ ರಾಜಕೀಯ ನಿಲ್ಲಿಸಲು ಇಲ್ಲಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ಮತದಾರರು ಎಂದೂ ಜಾತಿವಾದ ಮಾಡಲಿಲ್ಲ. ಆದರೆ, ಬಿಜೆಪಿಯವರು ಜಾತಿ, ಜಾತಿ ನಡುವೆ ವಿಷ ಹಾಕುವ ಕೆಲಸ ಮಾಡುತ್ತಿದ್ದಾರೆ. ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಆದರೆ, ಈ ಷಡ್ಯಂತ್ರವನ್ನು ಮೆಟ್ಟಿಜನರು ನನಗೆ ಆಶೀರ್ವಾದ ಮಾಡುತ್ತಾರೆ. ಬಹಳ ದೊಡ್ಡ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

ಬಿಜೆಪಿಯವರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಸ್ಥಳೀಯ ನಾಯಕರಿಗೆ ಮತ ಕೇಳುವ ಮುಖ ಇಲ್ಲ. ಆದ್ದರಿಂದ ಮೋದಿ ಬಂದರೆ ಅನುಕೂಲ ಆಗಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅವರು ಎಷ್ಟುಬಾರಿ ಬಂದರೂ ಮತದಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾ ತಿನ್ನಲ್ಲ, ತಿನ್ನಲು ಬಿಡಲ್ಲ ಎನ್ನುವ ಪ್ರಧಾನಿಗೆ ಬದ್ಧತೆ ಇಲ್ಲ. ರಾಜ್ಯದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 40% ಕಮಿಷನ್‌ ಆರೋಪ ಹೊತ್ತಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದವರು ಬರೆದಿರುವ ಪತ್ರ ಇದೆ. ಎಸ್‌ಐ ನೇಮಕಾತಿಯಲ್ಲಿ ಜೈಲಿಗೆ ಹೋಗಿರುವುದು ಸಾಕ್ಷಿ ಅಲ್ಲವೇ? ಮಾಡಾಳ್‌ ವಿರೂಪಾಕ್ಷಪ್ಪನ ಹಗರಣಕ್ಕಿಂತಲೂ ಸಾಕ್ಷಿ ಬೇಕೆ?. ಈ ಬಗ್ಗೆ ಮೋದಿಯೇಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಧಾನಿ ಆಗಮನದಿಂದ ನೀಟ್‌ ವಿದ್ಯಾರ್ಥಿಗಳಿಗೆ ತೊಂದರೆ:

ರಾಜ್ಯದಲ್ಲಿ ಸುಮಾರು 50 ಸಾವಿರ ಮಂದಿ ವಿದ್ಯಾರ್ಥಿಗಳು ಭಾನುವಾರ ನೀಟ್‌ ಪರೀಕ್ಷೆ ಬರೆಯುತ್ತಿದ್ದಾರೆ. ಮೋದಿ ಆಗಮನದಿಂದ ಅವರಿಗೆ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಕ್ಕೆ ಯಾರು ಹೊಣೆ? ಮುಂಚಿತವಾಗಿ ಹೋಗಿ ಉಳಿದುಕೊಳ್ಳಿ ಎನ್ನುವುದು ಬೇಜವಾಬ್ದಾರಿ ಹೇಳಿಕೆ. ರೋಡ್‌ ಶೋ ಮುಂದಕ್ಕೆ ಹಾಕಬಹುದು? ಪರೀಕ್ಷೆ ಮುಂದೆ ಹಾಕಲಾದೀತೇ?. ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಹೊಸಪೇಟೆಗೆ ಹೋಗುತ್ತಿದ್ದರು. ಆಗ ನಾನು ಚುನಾವಣಾ ಪ್ರಚಾರಕ್ಕಾಗಿ ಗಂಗಾವತಿಗೆ ಹೋಗಬೇಕಿತ್ತು. ಆದರೆ ನನಗೆ ಅಲ್ಲಿಗೆ ಹೋಗಲು ಅನುಮತಿಯನ್ನೇ ನೀಡಲಿಲ್ಲ. ಒಬ್ಬ ಪ್ರಧಾನಿ ಪದೇ ಪದೇ ಭೇಟಿ ನೀಡಿದರೆ ಅನುಕೂಲಕ್ಕಿಂತ, ಸಾರ್ವಜನಿಕರಿಗೆ ಅನಾನುಕೂಲವೇ ಹೆಚ್ಚು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ