
ಬೆಂಗಳೂರು (ಮೇ 19): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ನಾಳೆ (ಮೇ 20ರ ಶನಿವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿದೆ.
ಕಂಠೀರವ ಸ್ಟೇಡಿಯಂ ಸುತ್ತಾ ಮುತ್ತಾ ಸಂಚಾರ ದಟ್ಟಣೆ ಸಾದ್ಯತೆ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಸಂಪರ್ಕವಾಗಿವ ಎಲ್ಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬದಲಾವಣೆ ಮಾಡಲಾಗಿದೆ. ಸಂಚಾರಿ ಪೊಲೀಸರಿಂದ ಮಾರ್ಗಸೂಚಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಸಂಚರಿಸದಂತೆ ಸೂಚನೆ ನೀಡಲಾಗಿದೆ.
ಯಾವ ರಸ್ತೆಗಳು ನಿರ್ಬಂಧ, ಪರ್ಯಾಯ ಮಾರ್ಗಗಳು ಯಾವುವು?:
ಕಾರ್ಯಕ್ರಮಕ್ಕೆ ಬರೋ ವಿವಿಐಪಿ, ವಿಐಪಿಗಳ ವಾಹನಗಳಿಗೆ ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳು, ಸಿಬ್ಬಂದಿಗೆ ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗೂ ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ: ಆರ್.ಆರ್.ಎಂ.ಆರ್ ರಸ್ತೆ, ಕಸ್ತೂರಿಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲ ಮಾದರಿಯ ವಾಹನಗಳ ನಿಲುಗಡೆಗೆ ನಿರ್ಬಂಧ ವಿಧಿಸಲಾಗಿದೆ.
ಕಾರ್ಯಕ್ರಮಕ್ಕೆ ಬರೋರಿಗೆ ಎಂಟ್ರಿ ಹೇಗೆ..? : ವಿವಿಐಪಿ, ವಿವಿಐಪಿಗಳಿಗೆ ವಾಹನದಿಂದ ಇಳಿದ ನಂತರ ಕೆ.ಬಿ. ರಸ್ತೆ, ತಮ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್ ಗಳ ಮೂಲಕ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ಹಾಗೂ ಜನಸಾಮಾನ್ಯರು ಕೆ.ಜಿ. ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ ಅಥವಾ ಕ್ವಿನ್ಸ್ ಸರ್ಕಲ್ ಬಳಿ ಕ್ರೀಡಾಂಗಣ ಪ್ರವೇಶಕ್ಕೆ ಅನುಕೂಲ ಮಾಡಲಾಗಿದೆ.
ವಿಶೇಷ ಸೂಚನೆಗಳು:
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು, ಬೆಂಕಿಪಟ್ಟಣ, ಲೈಟರ್‌ಗಳು ತರದಂತೆ ಸೂಚನೆ ನೀಡಲಾಗಿದೆ. ಮುಖ್ಯ ಕೆಲಸಗಳು, ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.