
ಜೈಪುರ್(ಆ.21): ಚುನಾವಣೆಗೆ ಸ್ಪರ್ಧೆಗೆ ಟಿಕೆಟ್ ನೀಡಲು ಮೊದಲು ಗೆಲುವೇ ಮಾನದಂಡವಾಗಿದೆ. ಕರ್ನಾಟಕದಲ್ಲಿ 90 ವರ್ಷದ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿಲ್ಲವೇ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಇಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಗೆಹ್ಲೋಟ್ ಪಕ್ಷದ ಟಿಕೆಟ್ ಹಂಚಿಕೆ ಕುರಿತು ಮಾತನಾಡಿ ‘ಟಿಕೆಟ್ ನೀಡಲು ಗೆಲುವು ಮತ್ತು ವ್ಯಕ್ತಿ ಮಾನದಂಡ, ಕರ್ನಾಟಕದಲ್ಲಿ 90 ವರ್ಷದ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿಲ್ಲವೇ’ ಎಂದರು.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಭೇಟಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್: ಭೇಟಿಯ ಮಹತ್ವ ಹೀಗಿದೆ..
ತಮ್ಮ 92ನೇ ವಯಸ್ಸಿನಲ್ಲೂ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ರಾಜ್ಯದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ಯಾಮನೂರು ಶಿವಶಂಕರಪ್ಪ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆಯೇ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ. ರಾಜಸ್ಥಾನದಲ್ಲಿ ಶೀಘ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು ಟಿಕೆಟ್ ಹಂಚಿಕೆಗೆ ಇಲ್ಲಿಯೂ ವಯಸ್ಸಿನ ಬಗ್ಗೆ ಯಾವುದೇ ತಕರಾರುಗಳಿಲ್ಲ ಎಂಬಂರ್ಥದಲ್ಲಿ ಮಾತನಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.