
ವಿಜಯಪುರ(ಸೆ.14): ನಾನು ಸಾಯುವವರೆಗೂ ದಲಿತ ಮುಖ್ಯಮಂತ್ರಿ ವಿಚಾರ ಕೈ ಬಿಡುವುದಿಲ್ಲ. ಆ ಕುರಿತು ನಾನು ಧ್ವನಿ ಎತ್ತುತ್ತಲೇ ಇರುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತ್ತೆ ದಲಿತ ಮುಖ್ಯಮಂತ್ರಿ ಪರ ಧ್ವನಿ ಎತ್ತಿದ್ದಾರೆ. ದಲಿತರು ಈ ದೇಶದಲ್ಲಿ ಏನು ಪಾಪ ಮಾಡಿದ್ದಾರೆ? ದಲಿತರು ಅಯೋಗ್ಯರಾ? ಯಾವುದೇ ಪಕ್ಷದವರಾಗಲಿ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದರು.
ನಾನು ಕಂಡ ಅತ್ಯಂತ ಭ್ರಷ್ಟ ಸರ್ಕಾರವಿದು: ಸಂಸದ ರಮೇಶ ಜಿಗಜಿಣಗಿ
ಈಗಾಗಲೇ ಎಲ್ಲಾ ರಾಜ್ಯಗಳಲ್ಲೂ ದಲಿತರು ಮುಖ್ಯಮಂತ್ರಿಗಳಾಗಿದ್ದಾರೆ. ಅದರಂತೆ ನಮ್ಮ ರಾಜ್ಯದಲ್ಲೂ ಆಗಬೇಕಿದೆ. ಯಾವುದೇ ಪಕ್ಷದಲ್ಲಾಗಲಿ ಈ ರಾಜ್ಯದಲ್ಲಿ ಒಬ್ಬ ದಲಿತ ಮುಖ್ಯಮಂತ್ರಿ ಆಗಬೇಕು. ಪಾಪ ಮಲ್ಲಿಕಾರ್ಜುನ ಖರ್ಗೆ ಅವರು ಏನು ತಪ್ಪು ಮಾಡಿದ್ದಾರೆ? ಅವರನ್ನು ಮುಖ್ಯಮಂತ್ರಿ ಮಾಡಬಹುದಿತ್ತಲ್ಲಾ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ತಿವಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಕ್ಕಿಹಾಕಿಕೊಂಡಿದ್ದರೂ ಇನ್ನೂ ನಾನು ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಎನ್ನುತ್ತಾರೆ. ಆದರೆ ಅದು ಆಗುವುದಿಲ್ಲ, ಎರಡು ದಿನ ತಡೆಯಿರಿ ನಿಮಗೇ ಎಲ್ಲಾ ಗೊತ್ತಾಗುತ್ತದೆ. ಸಿದ್ದರಾಮಯ್ಯನವರು ಯಾವಾಗ ಮುಖ್ಯಮಂತ್ರಿ ಕುರ್ಚಿ ಖಾಲಿ ಮಾಡುತ್ತಾರೆ? ನಾವು ಯಾವಾಗ ಮುಖ್ಯಮಂತ್ರಿ ಆಗೋಣ ಎಂದು ಬಹಳ ಜನ ಅವರ ಪಕ್ಷದಲ್ಲೇ ತಯಾರಾಗಿದ್ದಾರೆ ಎಂದು ತಿವಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.