ನನಗೆಲ್ಲಿ ಮತ್ತೆ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಟ್ಟುಬಿಡುತ್ತಾರೋ ಎಂಬ ಹುಟ್ಟೆಯುರಿ ಇದ್ದವರು ಹೀಗೆ ಏನೆಲ್ಲ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ನನ್ನ ಬೆಳವಣಿಗೆ ಸಹಿಸದೆ ಹೊಟ್ಟೆ ನೋವು ಅನುಭವಿಸುತ್ತಿರುವವರು ನನಗೆ ಟಿಕೆಟ್ ಸಿಗುವುದಿಲ್ಲ ಎಂದು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧಿಗಳ ವಿರುದ್ಧ ಹರಿಹಾಯ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ
ವಿಜಯಪುರ(ಜೂ.15): ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಕ್ಕರೆ ಸ್ಪರ್ಧಿಸುವೆ. ಇಲ್ಲದಿದ್ದರೆ ಆರಾಧ್ಯ ದೈವ ಸಿದ್ಧಪ್ಪನಿಗೆ ತೆಂಗಿನ ಕಾಯಿ ಒಡೆದು ಮನೆ ಸೇರುವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿಧಾನಸಭೆ ಚುನಾವಣೆಯಂತೆ ಲೋಕಸಭೆ ಚುನಾವಣೆಯಲ್ಲೂ ಹಿರಿಯರಿಗೆ ಟಿಕೆಟ್ ಸಿಗುವುದಿಲ್ಲ. ಅಂತೆಯೇ ರಮೇಶ ಜಿಗಜಿಣಗಿ ಅವರಿಗೆ ಬಿಜೆಪಿ ಟಿಕೆಟ್ ಡೌಟು ಎನ್ನುತ್ತಿರುವವರಿಗೆ ಅವರು ತುಸು ಖಡಕ್ಕಾಗಿಯೇ ಪ್ರತಿಕ್ರಿಯೆ ನೀಡಿದರು.
ನನಗೆಲ್ಲಿ ಮತ್ತೆ ಲೋಕಸಭೆ ಚುನಾವಣೆಗೆ ಟಿಕೆಟ್ ಕೊಟ್ಟುಬಿಡುತ್ತಾರೋ ಎಂಬ ಹುಟ್ಟೆಯುರಿ ಇದ್ದವರು ಹೀಗೆ ಏನೆಲ್ಲ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ನನ್ನ ಬೆಳವಣಿಗೆ ಸಹಿಸದೆ ಹೊಟ್ಟೆ ನೋವು ಅನುಭವಿಸುತ್ತಿರುವವರು ನನಗೆ ಟಿಕೆಟ್ ಸಿಗುವುದಿಲ್ಲ ಎಂದು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧಿಗಳ ವಿರುದ್ಧ ಹರಿಹಾಯ್ದರು.
ವಿಜಯಪುರ: ಇಲ್ಲಿನ ದೇವಿ ಜಾತ್ರೆ ನೋಡಲು ಬರ್ತಾರೆ ವಿವಿಧ ರಾಜ್ಯಗಳ ಸಿಎಂ, ಸಚಿವರು..!
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನಗೆ ಟಿಕೆಟ್ ಸಿಗುವ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ನನಗೆ ಟಿಕೆಟ್ ಸಿಕ್ಕರೆ ಸ್ಪರ್ಧಿಸುವೆ. ಇಲ್ಲವಾದರೆ ಆರಾಧ್ಯದೈವ ಸಿದ್ಧಪ್ಪನಿಗೆ (ಶ್ರೀ ಸಿದ್ದೇಶ್ವರ ದೇವಾಲಯ) ಟೆಂಗಿನಕಾಯಿ ಒಡೆದು ಮನೆ ಸೇರಿಕೊಳ್ಳುವೆ. ಪರರಿಗೆ ಈ ಬಗ್ಗೆ ಚಿಂತೆ ಬೇಡ ಎನ್ನುತ್ತಲೇ ತಾವು ಸ್ಪರ್ಧಾಕಾಂಕ್ಷಿ ಎಂಬುದನ್ನು ದೃಢಪಡಿಸಿದರು.
ಸಂಸತ್ ಚುನಾವಣೆ ನಂತ್ರ ಗ್ಯಾರಂಟಿ ಮಾಯ:
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳೆಲ್ಲ ಲೋಕಸಭೆ ಚುನಾವಣೆ ಬಳಿಕ ಮಾಯವಾಗಲಿವೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿತಷ್ಟೇ. ಇದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಗ್ಯಾರಂಟಿ ಯೋಜನೆಗಳು ಜನರ ದಿಕ್ಕು ತಪ್ಪಿಸುವ ಜತೆಗೆ ಕುಟುಂಬದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿವೆ. ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ತುಂಬಾ ವ್ಯತ್ಯಾಸವಿದೆ. ಹಾಗಾಗಿ ಗ್ಯಾರಂಟಿಯಿಂದೇನೂ ಕಾಂಗ್ರೆಸ್‌ಗೆ ಲಾಭವಾಗದು. ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರೇ ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.