ಮತ್ತೋರ್ವ ಬಿಜೆಪಿ ಶಾಸಕರಿಗೆ ಕೊರೋನಾ ದೃಢ

Published : Aug 16, 2020, 10:21 PM IST
ಮತ್ತೋರ್ವ ಬಿಜೆಪಿ ಶಾಸಕರಿಗೆ ಕೊರೋನಾ ದೃಢ

ಸಾರಾಂಶ

ಕರ್ನಾಟಕದ ಬಿಜೆಪಿ ಶಾಸಕರುಗಳಿಗೆ ಕೊರೋನಾ ಕಟ್ಟಿ ಕಾಡುತ್ತಿದೆ. ಭಾನುವಾರ ಯಾದಗಿರಿ ಶಾಸಕರಿಗೆ ಕೊರೋನಾ ದೃಢಪಟ್ಟ ಬೆನ್ನಲ್ಲೇ ಇದೀಗ ಮತ್ತೋರ್ವ ಬಿಜೆಪಿ ಶಾಸಕನಿಗೆ ಸೋಂಕು ತಗುಲಿದೆ.

ವಿಜಯಪುರ, (ಆ.16): ಜಿಲ್ಲೆಯ ದೇವರ ಹಿಪ್ಪರಿಗೆ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ. ಕಳೆದ ಆ.13ರಂದು ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದ ಶಾಸಕರು ಬೆಂಗಳೂರಿಗೆ ತೆರಳಿದ್ದರು. ಕಳೆದ ರಾತ್ರಿ ಕೋವಿಡ್ ಪರೀಕ್ಷೆಯ ವರದಿ ಬಂದಿತ್ತು. ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರಿಗೆ ಕೊರೋನಾ ಪಾಸಿಟಿವ್..!

ಸದ್ಯ, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು , ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಯಾರೂ ಆತಂಕ ಪಡಬೇಕಾ ಗಿಲ್ಲ ಎಂದು ಟ್ವಿಟ್ ಮಾಡಿದ್ದಾರೆ. 

ಬೇಗನೆ ಗುಣಮುಖರಾಗಿ ಬರುತ್ತೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ