ಶತ್ರುಗಳ ನಾಶಕ್ಕೆ ಪೂಜೆ ಮಾಡಿದ್ದೇವೆ ಎಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕೆಲವರು ಕೇರಳಕ್ಕೆ ಹೋಗಿ ಪೂಜೆ ಮಾಡುತ್ತಾರೆ. ನಾವೇನು ಮಾಡಲು ಸಾಧ್ಯ? ನಾವು ಬಸವಣ್ಣನವರ ವಿಚಾರದವರು. ಬಸವಣ್ಣನನ್ನು ನಂಬಿದವರು ಎಂದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು(ಡಿ.01): ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. 'ನಾನು ಮಾಡುತ್ತಿರುವ ಪ್ರಯತ್ನದ ಬಗ್ಗೆ ಪಕ್ಷದ ವರಿಷ್ಠರಿಗೆ ಸಮಾಧಾನ ಇದೆ. ಎಲ್ಲರನ್ನೂ ಸರಿದೂಗಿಸಿ ಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆ' ಎಂದು ಹೇಳಿದರು.
undefined
News Hour: ಬಿಜೆಪಿಯಲ್ಲಿ ಬಣ ರಾಜಕೀಯ, ಯತ್ನಾಳ್ ಬಣದಿಂದ ಮುಂದುವರಿದ ಹೋರಾಟ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಚಾಟನೆ ಮಾಡುವಂತೆ ದೆಹಲಿಗೆ ತೆರಳಿ ದೂರು ಕೊಡುತ್ತಿಲ್ಲ. ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ದಿನನಿತ್ಯ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದು, ಮಾಧ್ಯಮಗಳಲ್ಲಿ ಬರುತ್ತಿದೆ. ಅವರದೇ ಆದ ರೀತಿಯಲ್ಲಿ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದರು.
ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಉಪ ಚುನಾವಣೆಗಳ ಫಲಿತಾಂಶ, ರಾಜ್ಯದಲ್ಲಾಗುತ್ತಿರುವ ರಾಜ ಕೀಯ ಬೆಳವಣಿಗೆಗಳ ಕುರಿತು ಗಮನಕ್ಕೆ ತಂದಿದ್ದೇನೆ. ಕೆಲವರ ನಡವಳಿಕೆಯಿಂದ ಅವರು ಎತ್ತರಕ್ಕೆ ಬೆಳೆಯುವ ಭ್ರಮೆ ಯಲ್ಲಿದ್ದರೆ, ಖಂಡಿತ ಅದು ಸಾಧ್ಯವಿಲ್ಲ. ಕಾರ್ಯಕರ್ತರು ಕೂಡ ಹಿಡಿಶಾಪ ಹಾಕುತ್ತಿದ್ದಾರೆ. ಹಾಕುತ್ತಿದ್ದಾರೆ. ಇದೆಲ್ಲಕ್ಕೂ ಇದೆಲ್ಲಕ್ಕೂ ಇತಿಶ್ರೀ ಹಾಡ ಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲೂ ಇದೆ. ಯಾರ ಗಮ ನಕ್ಕೆ ತರಬೇಕೋ ಅದನ್ನು ತಂದಿದ್ದೇನೆ ಎಂದು ತಿಳಿಸಿದರು.
ನಾನು ಹೋರಿ ಥರ, ಎಲ್ಲಾ ಎದುರಿಸುವೆ: ಯತ್ನಾಳ್ ವಾಗ್ದಾಳಿ
ರಬಕವಿ-ಬನಹಟ್ಟಿ: ರೈತರ, ಮಠ-ಮಾನ್ಯಗಳ ಆಸ್ತಿ ವಕ್ಫ್ ಪಾಲಾಗುವುದನ್ನು ತಡೆಯಲು ನಾನು ಹೋರಾಟ ಮಾಡುತ್ತಿದ್ದೇನೆ. ಈ ಹೋರಾಟ ಯಾರ ವಿರುದ್ದವೂ ಅಲ್ಲ. ನನ್ನ ವಿರುದ್ಧ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ, ನಾನು ಹೆದರುವುದಿಲ್ಲ. ನಾನು ಹೋರಿ ಇದ್ದಂತೆ. ಏನೇ ಬಂದರೂ ಗೂಳಿಯಂತೆ ಅದನ್ನು ಎದುರಿಸುವೆ. ಅಗತ್ಯ ಬಿದ್ದರೆ ಪ್ರಾಣ ತ್ಯಾಗಕ್ಕೂ ಸಿದ್ದ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಕ್ಫ್ ನಿಂದ ರೈತರಿಗೆ, ಮಠಮಾನ್ಯಗಳಿಗೆ ಅನ್ಯಾಯವಾಗದಂತೆ ಹೋರಾಡಲು ಜನಾಂದೋಲನ ಕೈಗೊಂಡಿದ್ದೇವೆ. ಇದಕ್ಕೆ ಎಲ್ಲ ಮಠಾಧೀಶರು ಸಾಥ್ ನೀಡಿ ಧರ್ಮದ ಉಳಿವಿಗೆ ಮುಂದೆ ಬರಬೇಕು. ನಾನು ನಡೆಸುತ್ತಿರುವ ಹೋರಾಟ ಪಕ್ಷದ ವಿರುದ್ದವಲ್ಲ. ಹೋರಾಟದ ವಿಷಯದಲ್ಲಿ ಬಿಜೆಪಿಯಲ್ಲಿ ಬಣಗಳಿಲ್ಲ. ಕೆಲವರು ಸ್ವಪ್ರತಿಷ್ಠೆಗಾಗಿ ನಮ್ಮ ಹೋರಾಟವನ್ನು ಭಿನ್ನವಾಗಿ ನೋಡುವುದು ತರವಲ್ಲ ಎಂದು ತೀಕ್ಷ್ಯವಾಗಿ ಪ್ರತಿಕ್ರಿಯಿಸಿದರು.
ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ, ಟೆನ್ಶನ್? ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ
ವಿಜಯೇಂದ್ರ ಅವರು ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಲು ದೆಹಲಿಗೆ ಹೋಗಿರಬಹುದು. ಆದರೆ, ನನ್ನ ವಿರುದ್ದ ಹೈಕಮಾಂಡ್ ಕ್ರಮ ಜರುಗಿಸದು. ಏಕೆಂದರೆ, ನಾನು ಪ್ರಧಾನಿಯ ಇಚ್ಛೆಯಂತೆ ಕಾರ್ಯ ಮಾಡುತ್ತಿರುವೆ. ನಮ್ಮಲ್ಲಿ ಯಾವುದೇ ಬಣಗಳಿಲ್ಲ ಎಂದರು.
ಯತ್ನಾಳ್‌ರನ್ನು ಉಚ್ಚಾಟನೆ ಮಾಡಬೇಕು ಎಂಬ ರೇಣುಕಾಚಾರ್ಯರ ಆಗ್ರಹಕ್ಕೆ ಪ್ರತಿಕ್ರಿಯಿಸಿ, ನಾನು ಯಾರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಜೊತೆ ನಮ್ಮದೇನು ಕೆಲಸ? ನಮ್ಮ ಹೋರಾಟ ಏನಿದ್ದರೂ ವಕ್ಫ್ ಬಗ್ಗೆ ಎಂದರು.
ಶತ್ರುಗಳ ನಾಶಕ್ಕೆ ಪೂಜೆ ಮಾಡಿದ್ದೇವೆ ಎಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕೆಲವರು ಕೇರಳಕ್ಕೆ ಹೋಗಿ ಪೂಜೆ ಮಾಡುತ್ತಾರೆ. ನಾವೇನು ಮಾಡಲು ಸಾಧ್ಯ? ನಾವು ಬಸವಣ್ಣನವರ ವಿಚಾರದವರು. ಬಸವಣ್ಣನನ್ನು ನಂಬಿದವರು ಎಂದರು.