'ಖಾಲಿ ಭರವಸೆ, ಭಾರಿ ಲೂಟಿ' ಇದೇ ಕಾಂಗ್ರೆಸ್ 2 ವರ್ಷದ ಆಡಳಿತದ ಸಾಧನೆ; ವಿಜಯೇಂದ್ರ ವಾಗ್ದಾಳಿ

Published : May 20, 2025, 10:40 AM IST
'ಖಾಲಿ ಭರವಸೆ, ಭಾರಿ ಲೂಟಿ' ಇದೇ ಕಾಂಗ್ರೆಸ್ 2 ವರ್ಷದ ಆಡಳಿತದ ಸಾಧನೆ; ವಿಜಯೇಂದ್ರ ವಾಗ್ದಾಳಿ

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಆಡಳಿತವನ್ನು ಟೀಕಿಸಿದ್ದಾರೆ. ಬೊಗಳೆ ಭರವಸೆ, ದುಂದು ಜಾಹೀರಾತು, ಭ್ರಷ್ಟಾಚಾರ, ಬೆಲೆ ಏರಿಕೆ, ರೈತರ ಆತ್ಮಹತ್ಯೆ ಹಾಗೂ ಅಭಿವೃದ್ಧಿ ಕೊರತೆಗಳನ್ನು ಪ್ರಮುಖವಾಗಿ ಉಲ್ಲೇಖಿಸಿ, "ಲೂಟಿ ಸಾಧನೆ" ಎಂದು ವಿಜಯೇಂದ್ರ ಖಂಡಿಸಿದ್ದಾರೆ.

ಬೆಂಗಳೂರು (ಮೇ 20): ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ -ಅಭಿವೃದ್ಧಿ ಶೂನ್ಯ ಆಡಳಿತ, ಇದುವೇ ಕರ್ನಾಟಕ ಸರ್ಕಾರದ ಬೆಲೆ ಏರಿಕೆಯ 2 ವರ್ಷಗಳ ಲೂಟಿ ಸಾಧನೆಗಳು ಎಂದು ಬಿಜೆಪಿ ರಾಜ್ಯಧ್ಯಕ್ಷ ವಿ.ವೈ. ವಿಜಯೇಂದ್ರ ಟೀಕೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಹೊಸಪೇಟೆಯಲ್ಲಿ 2 ವರ್ಷದ ಸಾಧನಾ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಸುಮಾರು 1 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ನಾಗರೀಕರು ಹಾಗೂ ರೈತರು ಕಂಗಾಲಾಗಿದ್ದಾರೆ. ಆದರೆ, ರಾಜ್ಯ ಸರ್ಕಾರದಿಂದ ರಾಜಕೀಯ ಸಾಧನಾ ಸಮಾವೇಶ ಆಯೋಜನೆ ಮಾಡುತ್ತಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ನಲ್ಲಿ 'ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ -ಅಭಿವೃದ್ಧಿ ಶೂನ್ಯ ಆಡಳಿತ, ಇದುವೇ ಕರ್ನಾಟಕ ಸರ್ಕಾರದ ಬೆಲೆ ಏರಿಕೆಯ 2 ವರ್ಷಗಳ ಲೂಟಿ ಸಾಧನೆಗಳು'.

ಮಿತಿಮೀರಿದ ಭ್ರಷ್ಟಾಚಾರ 
ನಿರಂತರ ಬೆಲೆ ಏರಿಕೆ 
ಏರುತ್ತಿರುವ ರೈತರ ಆತ್ಮಹತ್ಯೆಗಳು 
ಸರಣೀ ಬಾಣಂತಿಯರ ಸಾವುಗಳು 
ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು
ನಿರಂತರ ಬೆದರಿಕೆಯಲ್ಲಿರುವ ಹಿಂದೂಗಳ ಜೀವನ 
ಮೂಲಸೌಕರ್ಯಭಿವೃದ್ಧಿ ಮೂಲೆಗುಂಪು 
ಓಲೈಕೆ ರಾಜಕಾರಣಕ್ಕಾಗಿ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಬೆಂಬಲ 
ನಿರುದ್ಯೋಗದ ತಾಂಡವ 
ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳು ಮತ್ತು ಆಶ್ವಾಸನೆಗಳು ಸಂಪೂರ್ಣ ವಿಫಲ.
ಸ್ಥಗಿತಗೊಂಡ ಅಭಿವೃದ್ಧಿ 
ಪ್ರಧಾನ ಮಂತ್ರಿ-ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ ಮತ್ತು ಇತರ ರೈತ ಕಲ್ಯಾಣ ಯೋಜನೆಗಳ ರದ್ದು.
ಬ್ರ್ಯಾಂಡ್ ಬೆಂಗಳೂರು ಬ್ಯಾಡ್ ಬೆಂಗಳೂರಾಯಿತು.
ಗ್ರೇಟರ್ ಬೆಂಗಳೂರು ವಾಟರ್ ಬೆಂಗಳೂರು.
ವಾರಂಟಿಯಿಲ್ಲದ ಗ್ಯಾರಂಟಿಗಳು.
2.5 ಲಕ್ಷ ಕೋಟಿ ರೂ ಸಾಲವೇ ಸಾಧನೆ.

ಹೆಜ್ಜೆ ಇಡದ ಎರಡು ವರ್ಷ ಬೆಲೆ ಏರಿಕೆ-ಭ್ರಷ್ಟತೆಯ ಕರಾಳ ಸ್ಪರ್ಶ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಕುರಿತಾದ ಪೋಸ್ಟರ್ ಒಂದನ್ನು ಮಾಡಿ ಶೇರ್ ಮಾಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌