
ಶಿಕಾರಿಪುರ(ಮೇ.11): ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಎಲ್ಲ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ಪೂರಕವಾಗಿದೆ ಅಂತ ತಿಳಿಸಿದ್ದಾರೆ.
ಕಾಂಗ್ರೆಸ್ ದ್ವೇಷ ಸೃಷ್ಟಿಸುತ್ತಿದೆ, ಎಚ್ಚರಿಕೆ ಇರಲಿ: ಹರತಾಳು ಹಾಲಪ್ಪ
ಇದರೊಂದಿಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.