
ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣ ಅಪರಾಧಿ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅವರನ್ನು ಅನರ್ಹಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಆದೇಶ ಜಾರಿಗೊಳಿಸಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ದೋಷಿಯಾಗಿ ಏಪ್ರಿಲ್ 15ರಂದು ನ್ಯಾಯಾಲಯದಿಂದ ದಂಡಿತರಾಗಿರುವ ಹಿನ್ನೆಲೆಯಲ್ಲಿ, ಈ ಕ್ರಮ ಕೈಗೊಳ್ಳಲಾಗಿದೆ. ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ ದಿನಾಂಕದಿಂದಲೇ ಅವರ ವಿಧಾನಸಭೆ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ನಿರ್ಧಾರವು ಭಾರತ ಸಂವಿಧಾನದ ವಿಧಿ 191(1)(e) ಹಾಗೂ ಜನಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 8ರ ನಿಯಮಗಳ ಅನ್ವಯ ಜಾರಿಯಾಗಿದೆ. ಈ ಕಾನೂನು ಪ್ರಕಾರ, ಅಪರಾಧದಲ್ಲಿ ದೋಷಿ ತೀರ್ಪು ಬಂದ ಪ್ರತಿನಿಧಿಗಳು ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ನಿಯಮದ ಅನ್ವಯದ ಮೇಲೆ ಈ ಆದೇಶ ಜಾರಿಗೊಳಿಸಲಾಗಿದೆ.
ಇದಲ್ಲದೆ, ಸಂಬಂಧಪಟ್ಟ ನ್ಯಾಯಾಲಯವು ದೋಷಾರೋಪಣೆಯನ್ನು ಸ್ಥಗಿತಗೊಳಿಸದ ಹೊರತು, ವಿನಯ್ ಕುಲಕರ್ಣಿ ಅವರ ಅನರ್ಹತೆ ಮುಂದುವರಿಯಲಿದೆ. ಅವರು ಶಿಕ್ಷೆಯಿಂದ ಬಿಡುಗಡೆಯಾದ ದಿನಾಂಕದಿಂದ ಮುಂದಿನ ಆರು ವರ್ಷಗಳ ಅವಧಿಗೂ ಈ ಅನರ್ಹತೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದ್ದು, ಧಾರವಾಡ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.