ಕಾಂಗ್ರೆಸ್‌ನಿಂದ ‘ಹಿಂಸಾ ಗ್ಯಾರಂಟಿ ಸ್ಕೀಂ’: ಕಟೀಲ್‌ ಕಿಡಿ

Published : May 16, 2023, 08:25 AM IST
ಕಾಂಗ್ರೆಸ್‌ನಿಂದ ‘ಹಿಂಸಾ ಗ್ಯಾರಂಟಿ ಸ್ಕೀಂ’: ಕಟೀಲ್‌ ಕಿಡಿ

ಸಾರಾಂಶ

ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಇತರೆ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಅತ್ಯಂತ ಖಂಡನೀಯ: ನಳಿನ್‌ ಕುಮಾರ್‌ ಕಟೀಲ್‌ 

ಬೆಂಗಳೂರು(ಮೇ.16):   ಕಾಂಗ್ರೆಸ್‌ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧ ಕಡೆಗಳಲ್ಲಿ ‘ಹಿಂಸಾ ಗ್ಯಾರಂಟಿ ಸ್ಕೀಂ’ ಜಾರಿಗೆ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, ಇತರೆ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಅತ್ಯಂತ ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹೀನಾಯ ಸೋಲು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ಶೀಘ್ರ ರಾಜೀನಾಮೆ?

ಕಾಂಗ್ರೆಸ್‌ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು, ಇದನ್ನು ನಿಯಂತ್ರಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಟ್ಟು ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ