ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವೆ; ಸಲೀ ಅಹ್ಮದ್

Published : Nov 20, 2022, 10:09 AM IST
ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವೆ; ಸಲೀ ಅಹ್ಮದ್

ಸಾರಾಂಶ

ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತ್ಯುತ್ಸವದಲ್ಲಿ ವಿಧಾನಪರಿಷತ್‌ ಸದಸ್ಯ ಸಲೀಂ ಅಹ್ಮದ್‌

ಹಾವೇರಿ (ನ.20) : ಕಳೆದ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ ಇದುವರೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಮತ್ತೆ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಹೇಳಿದರು.

ನಗರದ ಶ್ರೀ ಗುರುಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 106ನೇ ಜಯಂತಿ ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಡಿಸೆಂಬರ್‌ ಅಂತ್ಯದೊಳಗೆ 150 ಅಭ್ಯರ್ಥಿಗಳ ಅಂತಿಮ: ಸಲೀಂ ಆಹ್ಮದ್

ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್‌.ಈಶ್ವರಪ್ಪನವರು ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳ ಮಾಡುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಗೌರವಧನ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಮತ್ತೆ ಬೆಳಗಾವಿಯ ಅಧಿವೇಶನದಲ್ಲಿ ಒತ್ತಾಯಿಸಲಾಗುವುದು. ಬಿಜೆಪಿ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ರೈತರಿಗೆ ಪರಿಹಾರ ವಿತರಿಸಿಲ್ಲ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದ್ಧತೆ ತೋರಿಲ್ಲ. ಮೂರು ವರ್ಷಗಳ ಬಳಿಕ ಈಗ ಜನಸಂಕಲ್ಪ ಯಾತ್ರೆ ಕೈಗೊಂಡು ಜನರ ಬಳಿ ಹೋಗುವ ಬದಲು ಜನರ ಕ್ಷಮೆ ಕೇಳಬೇಕು ಒತ್ತಾಯಿಸಿದರು.

ಭ್ರಷ್ಟಾಚಾರದ ರಾಜಧಾನಿ

ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿಯಾಗಿ ಮಾಡಿದೆ. ಭ್ರಷ್ಟಾಚಾರ, ಜನವಿರೋಧಿ ನೀತಿಯಿಂದ ಬೇಸತ್ತಿರುವ ಜನತೆ ಜನರು ಬಿಜೆಪಿ ಸರ್ಕಾರವನ್ನು ಮನೆಗೆ ಕಳುಹಿಸುವ ಸಂಕಲ್ಪ ಮಾಡಿದ್ದಾರೆ. ಇನ್ನು ನಾಲ್ಕೈದು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಾಗುತ್ತಿದ್ದು, ಜಿಲ್ಲೆಯ 6 ಕ್ಷೇತ್ರಗಳನ್ನು ಗೆಲ್ಲುವ ಸಂಕಲ್ಪ ಮಾಡಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಬೂತ್‌ಮಟ್ಟದಿಂದ ಪಕ್ಷ ಸಂಘಟಿಸಿ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು ಎಂದು ಕರೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಆಡಳಿತಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು.

ದೂರಿತ್ತರೂ ಪ್ರಧಾನಿ ಚಕಾರವೆತ್ತಿಲ್ಲ

ಪ್ರಧಾನಿ ಮೋದಿ ಅವರು ‘ನಾನೂ ತಿನ್ನೋದಿಲ್ಲ, ಇತರನ್ನು ತಿನ್ನಲು ಬಿಡೋದಿಲ್ಲ’ ಎಂದಿದ್ದರು. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ಗುತ್ತಿಗೆದಾರರು ಪ್ರಧಾನಿ ಮೋದಿಗೆ ದೂರು ನೀಡಿದ್ದರೂ ಈ ಬಗ್ಗೆ ಅವರು ಚಕಾರ ಎತ್ತುತ್ತಿಲ್ಲ, ತನಿಖೆ ಕೈಗೊಂಡಿಲ್ಲ. ಬಿಜೆಪಿ ಸರ್ಕಾರದಿಂದ ಭ್ರಮನಿಸರಗೊಂಡ ಜನರು ಬದಲಾವಣೆ ಬಯಸುತ್ತಿದ್ದು, ಜನಪರ ಕಾಳಜಿ ತೋರುವ ಕಾಂಗ್ರೆಸ್‌ ಪಕ್ಷ ಆಡಳಿತಕ್ಕೆ ಬರಬೇಕು ಎಂದು ಹೇಳಿದರು.

ಮಾಜಿ ಸ್ವೀಕರ್‌ ಕೆ.ಬಿ.ಕೋಳಿವಾಡ ಮಾತನಾಡಿ, ಕಾಂಗ್ರೆಸ್‌ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿದ ಪಕ್ಷ. ದೇಶದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಪಕ್ಷವಾಗಿದೆ. ಪಂಚಾಯತ್‌ ರಾಜ್‌ ವ್ಯವಸ್ಥೆ ಮೂಲಕ ರಾಜೀವಗಾಧಿ ಅವರು ಗ್ರಾಪಂನಲ್ಲಿ ಮೀಸಲಾತಿ ತಂದರು. ಇದರಿಂದ ಎಲ್ಲ ವರ್ಗಕ್ಕೂ ಅಧಿಕಾರ ಸಿಗುವಂತಾಯಿತು. ಆದರೆ ಬಿಜೆಪಿ ಸರ್ಕಾರ ಪಂಚಾಯತ್‌ ರಾಜ್‌ ವಿರೋಧಿ ಸರ್ಕಾರವಾಗಿದ್ದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಿಲ್ಲ. ಕೇವಲ ಸುಳ್ಳು ಹೇಳುವುದರಲ್ಲಿಯೇ ಕಾಲಹರಣ ಮಾಡುತ್ತಿದೆ ಎಂದರು.

ವಿಪ ಮಾಜಿ ಮುಖ್ಯ ಸಚೇತಕ ನಾರಾಯಣಸ್ವಾಮಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ತತ್ವಾದರ್ಶಗಳು ಕಾಂಗ್ರೆಸ್‌ ಪಕ್ಷಕ್ಕೆ ಮಾರ್ಗದರ್ಶನವಾಗಿವೆ. ಅವರು ಸ್ವಾರ್ಥಕ್ಕಾಗಿ ರಾಜಕಾರಣ ಮಾಡಿದವರಲ್ಲ, ದೇಶಕ್ಕಾಗಿ ತ್ಯಾಗ ಮಾಡಿದ ಕುಟುಂಬ. ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟಪಕ್ಷದಲ್ಲಿ ನಾವು, ನೀವು ಇರೋದು ನಮ್ಮ ಪುಣ್ಯ. ವಿಧಾನ ಪರಿಷತ್‌ ಸದಸ್ಯರಾಗಿರುವ ಸಲೀಂ ಅಹ್ಮದ್‌ ಅವರು ಸದನಲ್ಲಿ್ಲ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಭ್ರಷ್ಟಾಚಾರದಲ್ಲೇ ಮುಳುಗಿರುವ ಬಿಜೆಪಿ ಕ್ಷಮಾ ಯಾತ್ರೆ ಮಾಡಬೇಕಿತ್ತು: ಸಲೀಂ ಅಹ್ಮದ್

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಮನೋಹರ ತಹಶೀಲ್ದಾರ, ರುದ್ರಪ್ಪ ಲಮಾಣಿ, ಶಾಸಕ ಶ್ರೀನಿವಾಸ ಮಾನೆ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ, ವಿಧಾನಪರಿಷತ್‌ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಎಸ್‌.ಆರ್‌. ಪಾಟೀಲ, ಡಾ.ಎಂ.ಆರ್‌. ಕುಬೇರಪ್ಪ, ಬಸವರಾಜ ಗುರಿಕಾರ, ಕೊಟ್ರೇಶಪ್ಪ ಬಸೇಗಣ್ಣಿ, ಪ್ರಕಾಶ ಕೋಳಿವಾಡ, ಡಿ. ಬಸವರಾಜ, ಸಂಜೀವಕುಮಾರ ನೀರಲಗಿ, ಎಸ್‌ಎಫ್‌ಎನ್‌ ಗಾಜೀಗೌಡ್ರ, ಡಾ.ಪ್ರಕಾಶಗೌಡ ಪಾಟೀಲ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!