
ಬೆಂಗಳೂರು(ಏ.24): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಒಕ್ಕಲಿಗರ ಸಂಘದ ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ರಾಜ್ಯ ಸಹಕಾರ ಇಲಾಖೆ ತಿಳಿಸಿದೆ.
ಒಕ್ಕಲಿಗರ ಸಂಘಕ್ಕೆ ಮೇ 16ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರಗತಿಯಲ್ಲಿ ವ್ಯಾಪಿಸುತ್ತಿದೆ.
ಪೂರ್ಣಾವಧಿ ಆಡಳಿತಕ್ಕೆ ಒಕ್ಕಲಿಗರಿಗೆ ಶಾಪವಿದೆ : ಇವರದ್ದೆಲ್ಲಾ ಅರ್ಧದ ಅಧಿಕಾರ ..
ಪರಿಣಾಮ ಸಾರ್ವಜನಿಕರು, ಸಂಘದ ಸದಸ್ಯರು ಮತ್ತು ಚುನಾವಣಾ ಪ್ರಕ್ರಿಯೆಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಚುನಾವಣೆ ಮುಂದೂಡಲಾಗಿದೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದ ನಂತರ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಇಲಾಖೆ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.