ಸಿದ್ದರಾಮಯ್ಯ ಸರ್ಕಾರ ಇದ್ದಾಗ ನವಲಗುಂದ ಕ್ಷೇತ್ರಕ್ಕೆ .3300 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆಗ ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕೆಲಸಗಳು ಆಗಿವೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.
ನವಲಗುಂದ (ಫೆ.24) : ಸಿದ್ದರಾಮಯ್ಯ ಸರ್ಕಾರ ಇದ್ದಾಗ ನವಲಗುಂದ ಕ್ಷೇತ್ರಕ್ಕೆ .3300 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆಗ ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕೆಲಸಗಳು ಆಗಿವೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.
ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಅವರ ಜನ್ಮದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ ಬಿಚ್ಚಿದ್ರೆ ಪರಿಣಾಮ ನೆಟ್ಟಗಿರಲ್ಲ; ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಹುಬ್ಬಳ್ಳಿ ಕಮಿಷನರೇಟ್
ಈ ಸಲ ಮತ್ತೆ ಅಭಿವೃದ್ಧಿಗಾಗಿ ಕಾಂಗ್ರೆಸ್ಸಿಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ ಅವರು, ರಾಜಕೀಯ ಎಂದರೆ ‘ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಮಾಡುವುದು’ ಎಂಬ ಅರ್ಥವಿದೆ. ಅದರಂತೆ ಕೋನರಡ್ಡಿ ಕೂಡ ಜನರ ಪ್ರೀತಿ ಗಳಿಸಿದ್ದಾರೆ. ಪರಸ್ಪರ ಗೌರವಿಸುವುದರಿಂದ ದ್ವೇಷ, ಅಸೂಯೆ, ಹೊಟ್ಟೆ-ಕಿಚ್ಚು ಇರುವುದಿಲ್ಲ ಎಂದರು.
ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ(NH Konareddy) ಮಾತನಾಡಿ, ಕ್ಷೇತ್ರದ ಜನರ ಋುಣ ನನ್ನ ಮೇಲಿದೆ. ಅದನ್ನು ತೀರಿಸಿಯೇ ತೀರಿಸುತ್ತೇನೆ. ನಮ್ಮಲ್ಲಿ ಯಾರಿಗೆ ಟಿಕೆಟ್ ಸಿಕ್ಕರೂ ಒಟ್ಟಾಗಿ ಶ್ರಮಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ಯುವ ಮುಖಂಡ ವಿನೋದ ಅಸೂಟಿ ಮಾತನಾಡಿದರು. ಸಾನ್ನಿಧ್ಯವನ್ನು ಪಂಚಗೃಹ ಹಿರೇಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯ, ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮೀಜಿ ವಹಿಸಿದ್ದರು.
ಈ ವೇಳೆ ಮಾಜಿ ಸೈನಿಕರು, ಪೌರಕಾರ್ಮಿಕರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 300 ಜನರನ್ನು ಸನ್ಮಾನಿಸಿ ಗೌರವಿಸಲಾಯಿತು.
Bagalkot: ತೇರದಾಳ ಕ್ಷೇತ್ರದ ಟಿಕೆಟ್‌ಗಾಗಿ ಹಾಲಿ ಮತ್ತು ಮಾಜಿಗಳಿಂದ ಬಿಗ್ ಫೈಟ್
ಪ್ರೇಮಾ ಎನ್. ಕೋನರಡ್ಡಿ, ಸೈಯದ್ ಅಮಾನುಲ್ಲಾ ಖಾಜಿ, ಅಲ್ತಾಫ ಹಳ್ಳೂರ, ಪ್ರಕಾಶಗೌಡ ಪಾಟೀಲ, ಆರ್.ಕೆ. ಪಾಟೀಲ, ವಧÜರ್‍ಮಾನಗೌಡ ಹಿರೇಗೌಡ್ರ, ಬಾಬಾಜಾನ ಮುಲ್ಲಾನವರ ಸೇರಿದಂತೆ ಹಲವರಿದ್ದರು.