ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 13ರಂದು ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಕೃತಜ್ಞತ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ತಿಳಿಸಿದರು.
ಚಾಮರಾಜನಗರ (ಜೂ.12) ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 13ರಂದು ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಕೃತಜ್ಞತ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸಿ.ಪುಟ್ಟರಂಗಶೆಟ್ಟಿ(Puttarangashetty MLA)ಅವರು 4ನೇ ಬಾರಿಗೆ ಅಭೂತ ಪೂರ್ವ ಗೆಲುವು ದೊರಕಿಸಿಕೊಟ್ಟಮತದಾರರಿಗೆ 13ರಂದು ಬೆಳಗ್ಗೆ 10.30ಕ್ಕೆ ನಗರದ ಎಪಿಎಂಸಿ ಆವರಣದಲ್ಲಿರುವ ಅರಿಶಿಣ ಮಾರುಕಟ್ಟೆಯಲ್ಲಿ ಕೃತಜ್ಞತೆ ಸಮಾರಂಭ ಆಯೋಜಿಸಲಾಗಿದೆ ಎಂದರು.
undefined
ಐತಿಹಾಸಿಕ ಜಯ ನನ್ನದಲ್ಲ, ಈ ರಾಜ್ಯದ ಜನರದ್ದು: ಕೃತಜ್ಞತಾ ಸಮಾವೇಶದಲ್ಲಿ ಸಿದ್ದು ಭಾವುಕ ನುಡಿ
ಕೃತಜ್ಞತ ಸಮಾರಂಭಕ್ಕೆ 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಎಲ್ಲ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು ಸೇರಿದಂತೆ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ, ಚಾಮರಾಜನಗರ ಕ್ಷೇತ್ರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
2013ರಲ್ಲಿ ನಡೆದ ವಿಧಾನಸಭಾ ಚುನಾವಣೆ(Karnataka assembly election)ಯಲ್ಲಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ಅವರು ಶೇ.90ರಷ್ಟುಭರವಸೆಯನ್ನು ಈಡೇರಿಸಿದ್ದಾರೆ. ಇದೇ ರೀತಿ 2023ರ ಚುನಾವಣೆಯಲ್ಲಿಯೂ ನೀಡಿರುವ 5 ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದರು.
ವಿರೋಧ ಪಕ್ಷಗಳು ಹಲವು ಭರವಸೆ ನೀಡಿದ್ದರು ಕಾಂಗ್ರೆಸ್ ಭರವಸೆಯ ನಂಬಿಕೆಯಿಂದಾಗಿ ಜನರು ಮತ ನೀಡಿದ್ದಾರೆ. ನುಡಿದಂತೆ ನಡೆದ ಸರ್ಕಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಾಗಿದೆ ಎಂದು 2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ. ಕಾರ್ಯಕರ್ತರ ಶ್ರಮ ಹೆಚ್ಚಿನದ್ದಾಗಿದೆ ಎಂದು ಹೇಳಿದರು.
ನಾಮಧಾರಿ ಸಮಾಜದಿಂದ ಸ್ವಾರ್ಥರಹಿತ ರಾಜಕಾರಣ ಸಾಧ್ಯ: ಮಂಕಾಳ ವೈದ್ಯ
ಶಾಸಕ ಸಿ.ಪುಟ್ಟರಂಗಶೆಟ್ಟಿಅವರಿಗೆ ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನ ನೀಡಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ, ಪಕ್ಷ ನೀಡಿರುವ ಜವಬ್ಧಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಸ್ಟರ್ ಮುನ್ನಾ, ಮುಖಂಡರಾದ ರಮೇಶ್, ನಲ್ಲೂರು ಸೋಮೇಶ್ವರ್, ಮಲ್ಲಿಕಾರ್ಜುನಸ್ವಾಮಿ ಇದ್ದರು.