
ನವದೆಹಲಿ: ಬಿಹಾರದ ಬಳಿಕ ದೇಶಾದ್ಯಂತ ಮತದಾರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ಉದ್ದೇಶಿಸಿರುವ ಚುನಾವಣಾ ಆಯೋಗ, ಪ್ರತಿಪಕ್ಷಗಳ ವಿರೋಧದ ನಡುವೆಯೇ ಮಂಗಳವಾರ 9 ರಾಜ್ಯ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಆರಂಭವಾಗಿದೆ. ಡಿ.9ರಂದು ಮತದಾರರ ಕರಡು ಪಟ್ಟಿ ಬಿಡುಗಡೆಯಾಗಲಿದ್ದು, ಮುಂದಿನ ವರ್ಷದ ಫೆ.7ರಂದು ಅಂತಿಮಪಟ್ಟಿ ಬಿಡುಗಡೆಯೊಂದಿಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಪರಿಷ್ಕರಣೆಗೆ ವಿಪಕ್ಷಗಳ ವಿರೋಧ ಇದ್ದು, ಸೋಮವಾರವಷ್ಟೇ ಡಿಎಂಕೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಪರಿಷ್ಕರನೆಯು ವಿಪಕ್ಷಗಳ ವಿರುದ್ಧ ಷಡ್ಯಂತ್ರ. ಒಬ್ಬನೇ ಒಬ್ಬ ಮತದಾರ ಅನರ್ಹನಾದರೂ ಕೇಂದ್ರ ಸರ್ಕಾರವೇ ಬೀಳಲಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.