
ಉಪ್ಪಿನಂಗಡಿ (ಜ.3) : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್.ಅಂಗಾರ ಅವರಿಗೆ ‘ಮೊದಲು ಸಮಸ್ಯೆ ಬಗೆಹರಿಸಿ, ಬಳಿಕ ಗುದ್ದಲಿ ಪೂಜೆ ಮಾಡಿ’ ಎಂದು ತಾಕೀತು ಮಾಡಿದ ಘಟನೆ ಕಡಬ ಸಮೀಪದ ಬಲ್ಯ ಎಂಬಲ್ಲಿ ಸೋಮವಾರ ನಡೆದಿದೆ.
ಅಂಗಾರ(S angara) ಅವರು ಪ್ರಮುಖರೊಡಗೂಡಿ 85 ಲಕ್ಷ ರು. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸಕ್ಕೆ ಬಲ್ಯಕ್ಕೆ ಆಗಮಿಸಿದ್ದರು. ಬಲ್ಯದ ರಸ್ತೆಯೊಂದರ ಅಭಿವೃದ್ಧಿಗೆಂದು ಸತತ ಮನವಿ ಸಲ್ಲಿಸುತ್ತಿದ್ದರೂ, ಯಾವುದೇ ಸ್ಪಂದನ ತೋರದ ಜನಪ್ರತಿನಿಧಿಗಳ ಮೇಲಿನ ಆಕ್ರೋಶವನ್ನು ಎದುರಿಸಿದರು. ಮೊದಲು ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿ ಅಂತರ ಕಾಯ್ದುಕೊಂಡಿದ್ದ ಅಲ್ಲಿನ ನಿವಾಸಿಗರು ಬಳಿಕ ಶಿಲಾನ್ಯಾಸದ ಸ್ಥಳಕ್ಕೆ ಬಂದು ತಮ್ಮ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.
ಹೆಜಮಾಡಿ ಟೋಲ್ ದರ ಯಥಾಸ್ಥಿತಿ ಕಾಪಾಡಿ: ಸಚಿವ ಅಂಗಾರ ಸೂಚನೆ
ಈ ವೇಳೆ ಉತ್ತರಿಸಿದ ಸಚಿವ ಅಂಗಾರ, ಯಾರು ಮನವಿ ಕೊಟ್ಟರೂ, ಕೊಡದಿದ್ದರೂ ನಾನೇನು ಮಾಡಬೇಕೋ ಅದನ್ನು ಮಾಡುವೆ. ನೀವು ಮನವಿ ಕೊಟ್ಟಮಾತ್ರಕ್ಕೆ ಕಾಮಗಾರಿಯ ಕೆಲಸ ಮಾಡಲು ಹಣ ಯಾರು ಕೊಡಬೇಕು? ಸರ್ಕಾರ ತಾನೆ? ಸರ್ಕಾರ ದುಡ್ಡು ಕೊಟ್ಟರೆ ಕಾಮಗಾರಿ ಮಾಡಿಸುವೆ ಎಂದು ಉತ್ತರಿಸಿದರು. ಆಗ ಅಲ್ಲಿ ಜಮಾಯಿಸಿದ ಮಂದಿ ವಾಗ್ವಾದ ನಡೆಸಿ, ಜೀವಮಾನದುದ್ದಕ್ಕೂ ಬಿಜೆಪಿಗೆ ಮತ ಹಾಕಿದ್ದರೂ ಯಾವುದೇ ಸ್ಪಂದನ ಇಲ್ಲ. ಮುಂದಕ್ಕೆ ಓಟು ಕೇಳಲು ಬನ್ನಿ ಎಂದು ಎಚ್ಚರಿಸಿ ಹೇಳುತ್ತಾ ಸ್ಥಳದಿಂದ ನಿರ್ಗಮಿಸಿದರು.
ಬಳಿಕ ಬಿಜೆಪಿ(BJP) ಮುಖಂಡ ಕೃಷ್ಣ ಶೆಟ್ಟಿ ಅಸಮಾಧಾನಿತ ಮಂದಿಯನ್ನು ಕರೆದು ಸಮಾಧಾನ ಪಡಿಸಲು ಯತ್ನಿಸಿದರು. ತನ್ನ ಕ್ಷೇತ್ರದ ಮತದಾರ ವ್ಯಕ್ತಪಡಿಸುವ ಆಕ್ರೋಶ ಅಸಮಾಧಾನವನ್ನು ಕೇಳಿಸಿಕೊಳ್ಳಲೂ ಸಹನೆ ಇಲ್ಲದ ಅಂಗಾರ ರವರ ಇಂದಿನ ವರ್ತನೆ ಮುಂದಿನ ಚುನಾವಣೆಯ ದೃಷ್ಟಿಯಿಂದ ದುಷ್ಪರಿಣಾಮಕಾರಿಯಾಗಿ ಪರಿಣಮಿಸುವ ಸಾಧ್ಯತೆ ಮೂಡಿಸಿದೆ. ನಾಗರಿಕರ ಆಕ್ರೋಶದ ನಡುವೆಯೂ ಮೂರು ರಸ್ತೆಗಳ ಅಭಿವೃದ್ಧಿಗೆ 85 ಲಕ್ಷ ರು. ಅನುದಾನ ಇರಿಸಿ ಶಂಕುಸ್ಥಾಪನೆ ನೆರವೇರಿತು. ಮೀನು ಉತ್ಪಾದನೆ ಹಾಗೂ ರಫ್ತಿನಲ್ಲಿ ರಾಜ್ಯವನ್ನು ನಂಬರ್ ಒನ್ ಮಾಡುವ ಉದ್ದೇಶ: ಸಚಿವ ಅಂಗಾರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.