2ನೇ ಹಂತದ ಲೋಕಸಭಾ ಚುನಾವಣೆ: ಇಂದು ರಾಹುಲ್‌ ಗಾಂಧಿ ಭವಿಷ್ಯ

By Kannadaprabha News  |  First Published Apr 26, 2024, 6:17 AM IST

ಕೇರಳದ ವಯನಾಡಿನಿಂದ ರಾಹುಲ್‌ ಗಾಂಧಿ, ತಿರುವನಂತಪುರದಿಂದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಶಶಿ ತರೂರ್‌, ಮಥುರಾದಿಂದ ನಟಿ ಹೇಮಾಮಾಲಿನಿ, ಮೇರಠ್‌ನಿಂದ ಟೀವಿ ರಾಮಾಯಣದ ರಾಮನ ಪಾತ್ರಧಾರಿ ಅರುಣ್‌ ಗೋವಿಲ್‌, ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಕೋಟಾದಿಂದ ಕಣಕ್ಕೆ ಇಳಿದಿರುವ ಪ್ರಮುಖರು. ಇನ್ನು ಕೇರಳದ ಎಲ್ಲಾ 20 ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.


ನವದೆಹಲಿ(ಏ.25):  13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಬಾರಿ ಲೋಕಸಭೆಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು ಈ ಪೈಕಿ ಇದು 2ನೇಯದ್ದಾಗಿದೆ. ಏ.14ರಂದು ಮೊದಲ ಹಂತದಲ್ಲಿ 21 ರಾಜ್ಯಗಳ 102 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಆಗ ಶೇ.65.5ರಷ್ಟು ಮತ ಚಲಾವಣೆಯಾಗಿತ್ತು. 2ನೇ ಹಂತದ ಚುನಾವಣೆಗೆ ಒಟ್ಟು 2633 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಕೆಲವರು ನಾಮಪತ್ರ ಹಿಂಪಡೆದ ಕಾರಣ ಅಂತಿಮವಾಗಿ 1206 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.

ಕೇರಳದ ವಯನಾಡಿನಿಂದ ರಾಹುಲ್‌ ಗಾಂಧಿ, ತಿರುವನಂತಪುರದಿಂದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಶಶಿ ತರೂರ್‌, ಮಥುರಾದಿಂದ ನಟಿ ಹೇಮಾಮಾಲಿನಿ, ಮೇರಠ್‌ನಿಂದ ಟೀವಿ ರಾಮಾಯಣದ ರಾಮನ ಪಾತ್ರಧಾರಿ ಅರುಣ್‌ ಗೋವಿಲ್‌, ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಕೋಟಾದಿಂದ ಕಣಕ್ಕೆ ಇಳಿದಿರುವ ಪ್ರಮುಖರು. ಇನ್ನು ಕೇರಳದ ಎಲ್ಲಾ 20 ಕ್ಷೇತ್ರಗಳಿಗೂ ಇಂದು(ಶುಕ್ರವಾರ) ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Tap to resize

Latest Videos

ರಾಯಬರೇಲಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದ ವರುಣ್ ಗಾಂಧಿ, ಒಂದು ಕಾರಣಕ್ಕೆ ಸ್ಪರ್ಧೆಯಿಂದ ದೂರ!

ಮೊದಲ ಹಂತದಂತೆ ಈ ಹಂತ ಕೂಡಾ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ ಮತ್ತು ಕೆಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ನಡುವಿನ ಹೋರಾಟದ ಕಣವಾಗಿದ ಹೊರಹೊಮ್ಮಿದೆ.
ಮೊದಲ ಹಂತದಲ್ಲಿ ಉಭಯ ಬಣಗಳು ತಮ್ಮ ತಮ್ಮ ಪ್ರಣಾಳಿಕೆ ಬಿಡುಗಡೆ ಮೂಲಕ ಜನರ ಗಮನ ಸೆಳೆಯುವ ಯತ್ನ ಮಾಡಿದ್ದವು. ಆದರೆ ಎರಡನೇ ಹಂತದ ವೇಳೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣ, ಹಿಂದುಳಿದ ವರ್ಗದವರ ಮೀಸಲನ್ನು ಮುಸ್ಲಿಮರಿಗೆ ನೀಡಲು ಯತ್ನಿಸುತ್ತಿದೆ ಎಂದು ಮೋದಿ ಮಾಡಿದ ಆರೋಪಗಳು ಭಾರೀ ಚರ್ಚೆಗೆ ಕಾರಣವಾದವು. ಇದರ ಜೊತೆಗೆ ಸಂಪತ್ತಿನ ಹಂಚಿಕೆ ಕುರಿತ ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಅವರ ಅಮೆರಿಕ ಮಾದರಿ ಪಿತ್ರಾರ್ಜಿತ ಆಸ್ತಿಯಲ್ಲಿ ಅರ್ಧಭಾಗ ಸರ್ಕಾರಕ್ಕೆ ಹೋಗಬೇಕು ಎಂಬ ಸಲಹೆ ಭಾರೀ ಕೋಲಾಹಲ ಸೃಷ್ಟಿಸಿದವು.

ಪ್ರಧಾನಿ ಮೊದಲ ಭಾರಿ ನೇರವಾಗಿ ಮುಸ್ಲಿಂ ಸಮುದಾಯ ಗುರಿಯಾಗಿಸಿ ಸತತ 4 ದಿನ ನಡೆಸಿದ ವಾಗ್ದಾಳಿ ರಾಜಕೀಯ ವಿಶ್ಲೇಷಕರನ್ನೂ ಅಚ್ಚರಿಗೆ ಗುರಿ ಮಾಡಿತು.

click me!