ವಿಧಾನ ಪರಿಷತ್‌ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

By Kannadaprabha NewsFirst Published Jun 2, 2024, 11:24 AM IST
Highlights

ಶನಿವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಂಡಿದೆ. ಭಾನುವಾರ ಸಂಜೆಯವರೆಗೆ ಅಭ್ಯರ್ಥಿಗಳು ಮನೆ, ಮನೆಗೆ ತೆರಳಿ ಅಂತಿಮ ಕಸರತ್ತು ನಡೆಸಲಿದ್ದಾರೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಆನ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. 

ಬೆಂಗಳೂರು(ಜೂ.02):  ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಭಾನುವಾರ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮನೆ, ಮನೆ ಪ್ರಚಾರ ನಡೆಸಲಿದ್ದಾರೆ. 

ಶನಿವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಂಡಿದೆ. ಭಾನುವಾರ ಸಂಜೆಯವರೆಗೆ ಅಭ್ಯರ್ಥಿಗಳು ಮನೆ, ಮನೆಗೆ ತೆರಳಿ ಅಂತಿಮ ಕಸರತ್ತು ನಡೆಸಲಿದ್ದಾರೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಆನ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. 

Latest Videos

ವಿಧಾನ ಪರಿಷತ್‌ ಚುನಾವಣೆ 2024: ಕಾಂಗ್ರೆಸ್‌ 7 ಅಭ್ಯರ್ಥಿಗಳು ಫೈನಲ್‌..!

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈಶಾನ್ಯ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದು, ಬೆಂ. ಪದವೀಧರ ಕ್ಷೇತ್ರದಲ್ಲಿ 15, ನೈಋತ್ಯ ಪದವೀಧರ ಕ್ಷೇತ್ರದಲ್ಲಿ 10, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ 15,ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಇದ್ದಾರೆ.

click me!