ಉಪಚುನಾವಣಾ ಸಮರ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣದಲ್ಲಿ ಇಂದು ಮತದಾನ

By Kannadaprabha News  |  First Published Nov 13, 2024, 6:33 AM IST

ಶಾಂತಿಯುತ ಮತದಾನಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಮೂರು ಕ್ಷೇತ್ರಗಳಿಗೆ ಜಿಲ್ಲಾ ಕೇಂದ್ರಗಳಿಂದ ಚುನಾವಣಾಧಿಕಾರಿಗಳು, ಇವಿಎಂ ಸೇರಿದಂತೆ ಮತ್ತಿತರ ಸಾಮಗ್ರಿಗಳೊಂದಿಗೆ ತಮಗೆ ನಿಗದಿಪಡಿಸಿದ ಮತಗಟ್ಟೆಗೆ ತೆರಳಿ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. 


ಬೆಂಗಳೂರು(ನ.13): ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ಕಾರಣ ವಾಗಿರುವ ರಾಜ್ಯದ ಮೂರುಕ್ಷೇತ್ರಗಳ ಉಪಚುನಾವಣೆಗೆ ಇಂದು(ಬುಧವಾರ) ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸಕಲ ಸಿದ್ಧತೆಯನ್ನು ಕೈಗೊಂಡಿದೆ. 

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಎನ್‌ಡಿಎ ಅಭ್ಯರ್ಥಿಗಳು ಸೇರಿ 45 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ರಾಜಕೀಯ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ. ನ.23ಕ್ಕೆ ಮತ ಎಣಿಕೆ ನಡೆಯಲಿದೆ. ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 

Latest Videos

undefined

ಉಪಚುನಾವಣೆಯಲ್ಲಿ ₹125 ಕೋಟಿ ಹಣ, ಸಾಮಗ್ರಿ ಜಪ್ತಿ!

ಶಾಂತಿಯುತ ಮತದಾನಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಮೂರು ಕ್ಷೇತ್ರಗಳಿಗೆ ಜಿಲ್ಲಾ ಕೇಂದ್ರಗಳಿಂದ ಚುನಾವಣಾಧಿಕಾರಿಗಳು, ಇವಿಎಂ ಸೇರಿದಂತೆ ಮತ್ತಿತರ ಸಾಮಗ್ರಿಗಳೊಂದಿಗೆ ತಮಗೆ ನಿಗದಿಪಡಿಸಿದ ಮತಗಟ್ಟೆಗೆ ತೆರಳಿ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. 

ಸಂಡೂರು ಕ್ಷೇತ್ರದಲ್ಲಿ ಆರು, ಶಿಗ್ಗಾಂವಿ ಕ್ಷೇತ್ರದಲ್ಲಿ ಎಂಟು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ 31 ಅಭ್ಯರ್ಥಿಗಳು ಸೇರಿ ಒಟ್ಟು 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಡೂರಿನಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು, ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ಕಣದಲ್ಲಿದ್ದಾರೆ. 

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವ‌ರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸಿದ್ದಾರೆ. ಮತದಾನ ನಡೆಯುವ ಮೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. 

ಕರ್ನಾಟಕ ಉಪಚುನಾವಣೆ: ಹಳೇ ಹುರಿಯಾಳುಗಳ ಹೋರಾಟ, ಮತ್ತೆ ಸಿಗ್ತಾರಾ ಈ ನಾಯಕರು!

770 ಮತಗಟ್ಟೆ ಸ್ಥಾಪನೆ 

3 ಕ್ಷೇತ್ರಗಳಲ್ಲಿ ಒಟ್ಟು 770 ಮತಗಟ್ಟೆಗಳನ್ನು 557 ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಶಿಗ್ಗಾಂವಿಯಲ್ಲಿ 241 ಮತಗಟ್ಟೆಗಳನ್ನು 196 ಸ್ಥಳಗಳಲ್ಲಿ ಸ್ಥಾಪಿಸಿದರೆ, ಸಂಡೂರಿನಲ್ಲಿ 253 ಮತಗಟ್ಟೆ, 153 ಸ್ಥಳಗಳಲ್ಲಿ, ಚನ್ನಪಟ್ಟಣದಲ್ಲಿ 276 ಮತಗಟ್ಟೆಗಳನ್ನು 208 ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. 

ಪ್ರತಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಹಿಳೆಯರೇ ನಿರ್ವ ಹಿಸುವ ಐದು ಸಖಿ ಮತಗಟ್ಟೆಗಳನ್ನು ಮತ್ತು 1 ಯುವ ಮತಗಟ್ಟೆ, 1 ಅಂಗವಿಕರು ನಿರ್ವಹಿಸುವ ಮತಕೇಂದ್ರ ತೆರೆಯಲಾಗಿದೆ. 1 ವಿಷಯ ಆಧಾರಿತ ಮತ ಕೇಂದ್ರ, ಇದೇ ವೇಳೆ ಉಪಚುನಾವಣೆ ಯಲ್ಲಿ ಅಳಿಸಲಾಗದ ಶಾಯಿಯನ್ನು ಮತದಾರರ ಎಡಗೈ ತೋರು ಬೆರಳಿಗೆ ಹಚ್ಚಲಾಗುವುದು.

click me!