
ದಾಬಸ್‍ಪೇಟೆ/ನೆಲಮಂಗಲ (ಮೇ.09): ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸೀಟು ಗೆಲ್ಲಿಸುವ ಮೂಲಕ ಸುಭದ್ರ ಸರ್ಕಾರ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಯ ಋಣವನ್ನು ಕಾಂಗ್ರೆಸ್ ಸರ್ಕಾರ ತೀರಿಸುವ ಕೆಲಸ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ನೆಲಮಂಗಲ ತಾಲೂಕಿನ ಕಣೇಗೌಡನಹಳ್ಳಿ ಕೆರೆಯಲ್ಲಿ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ತುಂಬಿಸುವ ಯೋಜನೆಯ ಕಾಮಗಾರಿಗೆ ಭೂಮಿಪೂಜೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಕ್ಷೇತ್ರದಲ್ಲಿನ ಜನತೆ ನಮ್ಮ ಪಕ್ಷದ ಅಭಿವೃದ್ಧಿಪರ ಸದಾ ಯೋಚಿಸುವ ಯುವ ಶಾಸಕನನ್ನು ಗೆಲ್ಲಿಸಿ ನಮಗೆ ಧೈರ್ಯ ತುಂಬಿದ್ದೀರಿ, ನಿಮ್ಮ ಋಣವನ್ನು ತೀರಿಸಲು ಇಂದು ಬಂದಿದ್ದೇನೆ. ವೃಷಭಾವತಿ ನೀರನ್ನು ಬಹಳ ಹಿಂದೆಯೇ ಸಂಸ್ಕರಣ ಮಾಡಿ ಹರಿಯಲು ಬಿಡಬೇಕು ಎಂದು ಅಂದುಕೊಂಡಿದ್ದೇವು. ರೈತರ ಉಳಿವಿಗಾಗಿ ಅವರ ಅನುಕೂಲಕ್ಕಾಗಿ ಸರ್ಕಾರ ಯೋಜನೆಯನ್ನು ರೂಪಿಸಿದೆ. ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ವೃಷಭಾವತಿ ಯೋಜನೆಯು 1900 ಕೋಟಿ ರು.ಗಳ ಯೋಜನೆಯಾಗಿದ್ದು, 148 ಟ್ಯಾಂಕ್ ಗಳಿಗೆ ನೀರು ಹರಿಸುವ ಯೋಜನೆ ಇದಾಗಿದೆ ಎಂದರು.
ಎತ್ತಿನಹೊಳೆ ಹಾಗೂ ಮಹದಾಯಿ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥ: ಎತ್ತಿನಹೊಳೆ ಯೋಜನೆಗೆ ಹಾಸನ ಭಾಗದಲ್ಲಿ ಅರಣ್ಯ ಪ್ರದೇಶ ಒತ್ತುವರಿ ಸಮಸ್ಯೆ ಆಗಿತ್ತು, ಈ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಆದಷ್ಟು ಶೀಘ್ರವಾಗಿ ಎತ್ತಿನಹೊಳೆ ಹಾಗೂ ಮಹಾದಾಯಿ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ. ಈ ಭಾಗಕ್ಕೆ ಎತ್ತಿನಹೊಳೆಯ ನೀರು ತರಲಾಗುವುದು. ಎತ್ತಿನಹೊಳೆಯ 16 ಟಿಎಂಸಿ ನೀರನ್ನು ಕುಡಿಯಲು, ಉಳಿದ ನೀರನ್ನು ಕೆರೆಗಳಿಗೆ ಹರಿಸಲಾಗುತ್ತದೆ ಎಂದರು.
ಆಪರೇಷನ್ ಸಿಂದೂರ್: ಪಿಎಂ ಮೋದಿಗೆ ದೇವೇಗೌಡರಿಂದ ಮೆಚ್ಚುಗೆ ಪತ್ರ
ಶಾಸಕರಿಗೆ ಎರಡು ಕಣ್ಣುಗಳಾಗಿ ಕೆಲಸ: ಶಾಸಕ ಎನ್.ಶ್ರೀನಿವಾಸ್ ಮೊದಲ ಬಾರಿ ಗೆದ್ದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಬಹಳ ಮುಂದೆ ಇದ್ದಾರೆ. ಟೀಕೆ ಮಾಡುವವರು ಮಾಡಲಿ, ನೀನು ಕ್ಷೇತ್ರವನ್ನು ಅಭಿವೃದ್ಧಿ ಮಾಡುವಂತೆ ತಿಳಿಸಿದ್ದು, ನಾನು ಹಾಗೂ ಮುನಿಯಪ್ಪ ಇಬ್ಬರೂ ಸೇರಿ ಶಾಸಕರಿಗೆ ಎರಡು ಕಣ್ಣುಗಳಾಗಿ ಕೆಲಸ ಮಾಡುತ್ತೇವೆ. ಇಡೀ ಸರ್ಕಾರವೇ ಶಾಸಕರ ಜೊತೆ ಇರಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.