ಡಿಕೆಶಿ ಮುಖ್ಯಮಂತ್ರಿಯಾಗಲಿ ಎಂಬ ವಿಚಾರವೇ ಅಪ್ರಸ್ತುತ: ಉಗ್ರಪ್ಪ

By Kannadaprabha News  |  First Published Sep 24, 2023, 4:33 AM IST

ಸದ್ಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ. ಈ ವಿಚಾರವೇ ಸದ್ಯಕ್ಕೀಗ ಅಪ್ರಸ್ತುತವಾಗಿದೆ. ಡಿಸಿಎಂ ಹುದ್ದೆ ಅಸಂವಿಧಾನಿಕ ಎಂದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ 


ಹೊಸಪೇಟೆ(ಸೆ.24):  ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂಬ ವಿಚಾರವೇ ಅಪ್ರಸ್ತುತ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ. ಈ ವಿಚಾರವೇ ಸದ್ಯಕ್ಕೀಗ ಅಪ್ರಸ್ತುತವಾಗಿದೆ. ಡಿಸಿಎಂ ಹುದ್ದೆ ಅಸಂವಿಧಾನಿಕ ಎಂದರು.
ಸಚಿವ ಕೆ.ಎನ್‌. ರಾಜಣ್ಣ ಮತ್ತೆ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂದು ಒತ್ತಾಯಿಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅಂತಿಮವಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರದ ಕುರಿತು ಹೈಕಮಾಂಡ್ ನಿರ್ಣಯ ಮಾಡುತ್ತದೆ ಎಂದರು.

Latest Videos

undefined

ಭಾರತ ನಾಮಕರಣದಿಂದ ಆಗುವ ಪ್ರಯೋಜನವೇನು?: ಉಗ್ರಪ್ಪ

ನಾಡಿನ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ರಾಜಕೀಯ ಮಾಡುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟು ಬರ್ತಿರಿ ಎಂದು ಉಡಾಫೆಯಾಗಿ ಮಾತನಾಡಿದ್ದಾರೆ. ರಾಜ್ಯದ ೨೫ ಬಿಜೆಪಿ ಸಂಸದರು ಕಾವೇರಿ ಬಗ್ಗೆ ಮಾತನಾಡಲಿ ಎಂದು ಒತ್ತಾಯಿಸಿದರು.

ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್‌ನಲ್ಲಿ ಎಸ್ ಎಂಬ ಪದವನ್ನು ತೆಗೆದು ಹಾಕಲಿ. ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿಯವರು ಒಳೊಗೊಳಗೆ ದೋಸ್ತಿ ಮಾಡಿಕೊಂಡಿದ್ದರು. ಇದೀಗ ಅದು ಬಹಿರಂಗವಾಗಿದೆ. ಅವರ ದೋಸ್ತಿಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅತಿ ಹೆಚ್ಚು ಸ್ಥಾನಗಳು ಬರಲಿವೆ ಎಂದರು.

click me!