ಬಣ ರಾಜಕೀಯಕ್ಕೆ ಬ್ರೇಕ್ ಹಾಕಿ: ಡಿ.ಕೆ. ಶಿವಕುಮಾರ್‌ಗೆ ಉಗ್ರಪ್ಪ ಟೀಂ ಮನವಿ

Published : Jan 11, 2025, 10:02 AM IST
ಬಣ ರಾಜಕೀಯಕ್ಕೆ ಬ್ರೇಕ್ ಹಾಕಿ: ಡಿ.ಕೆ. ಶಿವಕುಮಾರ್‌ಗೆ ಉಗ್ರಪ್ಪ ಟೀಂ ಮನವಿ

ಸಾರಾಂಶ

ಡಿನ್ನರ್ ಸಭೆಗಳು, ಬಹಿರಂಗ ಹೇಳಿಕೆಗಳಿಂದ ರಾಜ್ಯ ಕಾಂಗ್ರೆಸ್ ಬಣ ರಾಜಕೀಯ ಸೃಷ್ಟಿಯಾಗಿದೆ. ಇದರಿಂದ ಪಕ್ಷಕ್ಕೆ ಹಿನ್ನಡೆ ಉಂಟಾಗಲಿದ್ದು, ರಾಜ್ಯ ಬಿಜೆಪಿಗೆ ಬಂದಿರುವ ಸ್ಥಿತಿ ಬರಲಿದೆ. ಹೀಗಾಗಿ ಎರಡೂ ಕಡೆಯ ನಾಯಕರು ಸೇರಿ ಒಟ್ಟಾಗಿ ಪಕ್ಷ ಸಂಘಟನೆ ಹಾಗೂ ಜ.21ರ ಬೆಳಗಾವಿ ಸಮಾವೇಶ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ಮಾಡಬೇಕು ಎಂದಿರುವುದಾಗಿ ಮೂಲಗಳು ತಿಳಿಸಿವೆ. 

ಬೆಂಗಳೂರು(ಜ.11):  ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ಅವ ಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಮನವಿ ಮಾಡಿದ್ದಾರೆ. 

ಡಿನ್ನರ್ ಸಭೆಗಳು, ಬಹಿರಂಗ ಹೇಳಿಕೆಗಳಿಂದ ರಾಜ್ಯ ಕಾಂಗ್ರೆಸ್ ಬಣ ರಾಜಕೀಯ ಸೃಷ್ಟಿಯಾಗಿದೆ. ಇದರಿಂದ ಪಕ್ಷಕ್ಕೆ ಹಿನ್ನಡೆ ಉಂಟಾಗಲಿದ್ದು, ರಾಜ್ಯ ಬಿಜೆಪಿಗೆ ಬಂದಿರುವ ಸ್ಥಿತಿ ಬರಲಿದೆ. ಹೀಗಾಗಿ ಎರಡೂ ಕಡೆಯ ನಾಯಕರು ಸೇರಿ ಒಟ್ಟಾಗಿ ಪಕ್ಷ ಸಂಘಟನೆ ಹಾಗೂ ಜ.21ರ ಬೆಳಗಾವಿ ಸಮಾವೇಶ ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ಮಾಡಬೇಕು ಎಂದಿರುವುದಾಗಿ ಮೂಲಗಳು ತಿಳಿಸಿವೆ. 

ಬಣಜಗಳ ನಡುವೆ ಅಖಾಡಕ್ಕಿಳಿದ ಯಡಿಯೂರಪ್ಪ!

ಶುಕ್ರವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ರಾಣಿ ಸತೀಶ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಥೋಡ್ ತಂಡವು ಚರ್ಚೆ ಮಾಡಿತು. ಬೆಳಗಾವಿಯಲ್ಲಿ ಜ.21ರಂದು ನಡೆಯಲಿರುವ ಜೈ ಬಾಪು, ಜೈಭೀಮ್, ಜೈ ಸಂವಿಧಾನ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ಜ.13ರಂದು ನಡೆಯಲಿರುವ ಪದಾಧಿಕಾರಿಗಳ ಸಭೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹೊರತಾಗಿ ಪ್ರಮುಖ ನಾಯಕರನ್ನು ಸೇರಿಸಿ ಪ್ರತ್ಯೇಕ ಸಭೆ ನಡೆಸಬೇಕು. ಈ ವೇಳೆ ಯಾರೂ ಪಕ್ಷ ವಿರೋಧಿ ಹೇಳಿಕೆ, ಅಧಿಕಾರ ಹಂಚಿಕೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದುಬಂದಿದು.

ಕಾಂಗ್ರೆಸ್‌ನಲ್ಲೂ ಬಣ ರಾಜಕೀಯವಿದೆ, ದಲಿತ ಶಾಸಕರು, ಸಚಿವರ ಸಭೆ ರದ್ದಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಕೊಡಗು: ನಮ್ಮ ಪಕ್ಷದಲ್ಲೂ ಬಣ ರಾಜಕೀಯ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೊಡಗಿನ ಮಾಕುಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಕೊಣನೂರಿನಿಂದ ಮಾಕುಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಮಾಕುಟ್ಟದ ಸಮೀಪ ಅಗಲೀಕರಣಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಡಿಸಿಎಂ ಡಿಕೆಶಿ ಅವರು ಶತ್ರು ಸಂಹಾರ ಯಾಗ ಮಾಡುತ್ತಿರುವುದು ನಿಮ್ಮ ಪಕ್ಷದೊಳಗೂ ಇರುವ ಶತ್ರುಗಳು ನಾಶವಾಗಲಿ ಎಂದೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ. ಬಣ ಕಿತ್ತಾಟ ಯಾರಲ್ಲಿ ಇಲ್ಲ ಹೇಳಿ, ಕಾಂಗ್ರೆಸ್ ನಲ್ಲೂ ಇದೆ ಬಿಜೆಪಿಯಲ್ಲೂ ಇದೆ. ಹಾಗೆ ಜೆಡಿಎಸ್ ನಲ್ಲೂ ಬಣ ರಾಜಕೀಯ ಇದೆ. ಎಲ್ಲಾ ಪಕ್ಷಗಳಲ್ಲೂ ಬಣ ರಾಜಕೀಯ ಇದೆ. 

ನಮ್ಮ ಪಕ್ಷದಲ್ಲೂ ಬಣ ರಾಜಕೀಯ ಇದೆ. ಒಂದು ಅಧಿಕಾರ ಇರುವ ಪಕ್ಷ ಎಂದ ಮೇಲೆ ಭಿನ್ನಮತ ಇದ್ದೇ ಇರುತ್ತದೆ ಅಲ್ವಾ.? ಆದರೆ ಅದನ್ನು ವಲಿಷ್ಟರು ಕಾಲಕಾಲಕ್ಕೆ ಸರಿಮಾಡುತ್ತಾ ಹೋಗುತ್ತಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಅವರು ಶತ್ರು ಸಂಹಾರ ಯಾಗ ಮಾಡುತ್ತಿರುವುದು ಅವರ ಭಕ್ತಿ. ಆದರೆ ರಾಜಕೀಯ ಅಂದ್ರೇನೆ ಒಬ್ಬರಿಗೊಬ್ಬರು ಒಡೆದಾಟ ಮಾಡುತ್ತಾರೆ ಎಂಬ ಮಾತಿದೆ. ಅದರಲ್ಲಿ ಹೊಸದೇನು ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ದಲಿತ ಶಾಸಕರು ಸಚಿವರು ಮಾಡುತ್ತಿದ್ದ ಪ್ರತ್ಯೇಕ ಡಿನ್ನರ್ ಸಭೆ ಬಂದ್ ಆಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಭೆ ಬಂದ್ ಆಗಿಲ್ಲ, ಮುಂದೂಡಲ್ಪಟ್ಟಿದೆ ಅಷ್ಟೇ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರು ನಾನೂ ಕೂಡ ಸಭೆಗೆ ಬರುತ್ತೇನೆ ಎಂದಿದ್ದಾರೆ. ಬಹುಷಃ 13 ನೇ ತಾರೀಖಿನಂದು ಸಭೆಗೆ ಬರುತ್ತೇನೆ ಎಂದಿದ್ದರು. 

ಕಾಂಗ್ರೆಸ್ ಅಂತರ್ಯುದ್ಧ: ಡಿ.ಕೆ.ಶಿವಕುಮಾರ್ ದಾಳಿಗೆ ಪರಮೇಶ್ವರ್ ಚೆಕ್‌ಮೇಟ್?

ಅವರು ಸಭೆಗೆ ಬರುತ್ತೇನೆ ಎಂದಿದ್ರಿಂದ ಸಭೆ ಮುಂದಕ್ಕೆ ಹೋಗಿದೆ ಅಷ್ಟೇ. ಅವರು ಅಕಸ್ಮಾತ್ ಬರಲಿಲ್ಲ ಎಂದೆ ಮುಂದೆ ಎಂದಾದರೂ ಸಭೆ ನಡೆಯಲಿದೆ ಎಂದು ಹೇಳುವ ಮೂಲಕ ದಲಿತ ಶಾಸಕರು, ಸಚಿವರು ಎಲ್ಲರೂ ಪ್ರತ್ಯೇಕವಾಗಿ ಒಗ್ಗಟ್ಟಾಗಿದ್ದೇವೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಈ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿ ಅವರ ವಿರೋಧ ಏನು ಇಲ್ಲ ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಬೂತ್ ಮಟ್ಟದಲ್ಲಿ ಅಂಬೇಡ್ಕರ್ ಸಮಾವೇಶ ಮಾಡುತ್ತಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು ಇದು ಒಳ್ಳೆಯ ಕೆಲಸ. ಒಳ್ಳೆಯ ಕೆಲಸವನ್ನು ಮಾಡುವುದಕ್ಕೆ ಯಾರಾದರೇನು ಎಂದು ಸಚಿವ  ಸತೀಶ್ ಜಾರಕಿಹೊಳಿ ಬಿಜೆಪಿಯ ಬೂತ್ ಮಟ್ಟದ ಅಂಬೇಡ್ಕರ್ ಸಮಾವೇಶಕ್ಕೆ ಸಹಮತ ಸೂಚಿಸಿದ್ದರು.  

ನಾವು ಮಾಡುವ ಒಳ್ಳೆಯ ಕೆಲಸವನ್ನು ಅವರೂ ಮಾಡುವುದಾದರೆ ಮಾಡಲಿ. ಸಂವಿಧಾನವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುವುದರಲ್ಲಿ ತಪ್ಪೇನಿಲ್ಲ. ಸಂವಿಧಾನದ ಮಹತ್ವ, ಪ್ರಾಮುಖ್ಯತೆಯನ್ನು ತಿಳಿಸುವ ಕೆಲಸ ಮಾಡುವುದರಲ್ಲಿ ತಪ್ಪಿಲ್ಲ. ಅವರು ನಾಟಕೀಯಕ್ಕಾದರೂ ಮಾಡಲಿ, ಇಲ್ಲ ಪ್ರಾಮಾಣಿಕವಾಗಿಯಾದರೂ ಮಾಡಲಿ. ಒಳ್ಳೆಯ ಕೆಲಸ ಮಾಡುವುದಾದರೆ ಮಾಡಲಿ ಬಿಡಿ ಎಂದಿದ್ದಾರೆ. ಅಲ್ಲದೆ ಬಾಗಲಕೋಟೆಯಲ್ಲಿ ಶ್ರೀರಾಮ ಸೇನೆಯಿಂದ ಏರ್ ಗನ್ ತರಬೇತಿ ನೀಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು ಪೊಲೀಸ್ ಇಲಾಖೆಯಿಂದ ತನಿಖೆ ನಡೆಸುತ್ತಿದೆ. ಇದು ಪೊಲೀಸ್ ಇಲಾಖೆಗೆ ಸಂಬಂಧಿಸಿದ್ದಾಗಿದ್ದು, ತನಿಖಾ ವರದಿ ಬಂದ ಬಳಿಕ ಕ್ರಮ ಆಗಲಿದೆ ಎಂದಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ