ಸಿಎಂ ಆಗುವ ಆಸೆ ಇದೆ, ಸದ್ಯ ರೇಸ್‌ನಲ್ಲಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ

By Govindaraj SFirst Published Sep 8, 2024, 7:53 PM IST
Highlights

ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ನಾನು ಸಿಎಂ ಆಗುವ ವಿಚಾರ ಮುಂದೆ ನೋಡೋಣ. ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. 

ಬೆಳಗಾವಿ (ಸೆ.08): ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ನಾನು ಸಿಎಂ ಆಗುವ ವಿಚಾರ ಮುಂದೆ ನೋಡೋಣ. ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸುವರ್ಣವಿಧಾನಸೌಧದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ನಮ್ಮ ಪಕ್ಷದವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಿಎಂ ಆಗಿ ಮುಂದುವರೆಯುತ್ತಾರೆ. ನಮ್ಮಲ್ಲಿ ಸಿನಿಯರ್‌, ಜೂನಿಯರ್‌ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದೇನೆ. ಆದರೆ, ಅದು ಈಗಲ್ಲ. ಸದ್ಯ ನಾನು ಸಿಎಂ ಸ್ಥಾನದ ರೇಸ್‌ನಲ್ಲಿ ಇಲ್ಲ. ನಾನು ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಅಲ್ಲ. ಈಗಲೇ ಅನೇಕರು ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಅಂತಹ ಯಾವುದೇ ಸನ್ನಿವೇಶವೂ ಇಲ್ಲವೇ ಇಲ್ಲ. ನಾನಂತೂ ಈಗಾಗಲೇ ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದೇನೆ ಎಂದು ಹೇಳಿದರು.

Latest Videos

ಸಚಿವ ಪರಂ, ಸತೀಶ್‌ ಮಧ್ಯೆ ಸುದೀರ್ಘ ಸಭೆ: ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಊಹಾಪೋಹ ಹರಿದಾಡುತ್ತಿರುವಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಶುಕ್ರವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದು, ಇಬ್ಬರು ಪ್ರಮುಖ ಸಚಿವರ ಭೇಟಿ ಕುತೂಹಲ ಮೂಡಿಸಿದೆ. ಆದರೆ ಇಬ್ಬರೂ ನಾಯಕರು, ‘ನಮ್ಮದು ಸಹಜ ಭೇಟಿಯಷ್ಟೇ. ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಅದನ್ನು ಯಾರೂ ಬಯಸಿಯೂ ಇಲ್ಲ, ಅದು ಅಪ್ರಸ್ತುತ ವಿಷಯ’ ಎಂದು ಸ್ಪಷ್ಟನೆ ನೀಡಿದ್ದಾರೆ.

ನನಗೂ ಸಿಎಂ ಆಗುವ ಆಸೆ ಇದೆ, ಆದರೆ ಈಗಲ್ಲ: ಸಚಿವ ಎಂ.ಬಿ.ಪಾಟೀಲ್

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ‘ವಿಶೇಷ ಏನಿಲ್ಲ, ಕಚೇರಿಗೆ ಹೋಗುತ್ತಲೇ ಇರುತ್ತೇವೆ. ನಾನೇ ಅವರ ಮನೆಗೆ ಹೋಗುವವನಿದ್ದೆ. ಅಷ್ಟರಲ್ಲಿ ಅವರೇ ಬಂದಿದ್ದರು. ಪಕ್ಷ, ಸಂಘಟನೆ, ಚುನಾವಣೆ ಬಗ್ಗೆ ಒಂದು ಗಂಟೆ ಕೂತು ಊಟ ಮಾಡುತ್ತಾ ಚರ್ಚೆ ಮಾಡಿದೆವು’ ಎಂದರು.

click me!