ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ನಮ್ಮ ಸರ್ಕಾರದ ವಿರೋಧವಿದ್ದು, ರಾಜ್ಯದಲ್ಲಿ ಈ ಕಾನೂನು ಜಾರಿಗೆ ತರದಿರಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಹುಬ್ಬಳ್ಳಿ (ಏ.14): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ನಮ್ಮ ಸರ್ಕಾರದ ವಿರೋಧವಿದ್ದು, ರಾಜ್ಯದಲ್ಲಿ ಈ ಕಾನೂನು ಜಾರಿಗೆ ತರದಿರಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಭಾನುವಾರ ಇಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಕೇರಳ ಸರ್ಕಾರಗಳು ಜಾರಿಗೊಳಿಸದಿರಲು ನಿರ್ಧಾರ ತೆಗೆದುಕೊಂಡಿವೆ. ಹಾಗಾಗಿ ಕರ್ನಾಟಕದಲ್ಲೂ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ಹೇಳುವ ಮೂಲಕ ಕರ್ನಾಟಕದ ನಿಲುವನ್ನು ಸ್ಪಷ್ಟಪಡಿಸಿದರು.--ಆಯ್ಕೆಯೇ ಇಲ್ಲ, ಜಾರಿ
ಮಾಡ್ಲೇಬೇಕು: ವಕ್ಫ್ ತಿದ್ದುಪಡಿ ಕಾಯ್ದೆ ಕೇಂದ್ರದ ಕಾನೂನು. ಇದನ್ನು ಎಲ್ಲ ರಾಜ್ಯಗಳಲ್ಲೂ ಜಾರಿಗೆ ತರಲೇ ಬೇಕು. ಹಾಗಾಗಿ ಕರ್ನಾಟಕ ರಾಜ್ಯದಲ್ಲೂ ಜಾರಿಗೆ ತರಬೇಕು. ಇದಕ್ಕೆ ಬೇರೆ ಯಾವ ಆಯ್ಕೆಯೂ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ವಸತಿ ಸಚಿವ ಜಮೀರ ಅಹಮದ್ ಖಾನ್ ರಾಜ್ಯದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಕೇಂದ್ರ ಸರ್ಕಾರ ಮಾಡಿದ ಕಾನೂನು. ಪ್ರತಿಯೊಬ್ಬರೂ ಇದನ್ನು ಜಾರಿಗೆ ತರಲೇ ಬೇಕು ಎಂದರು. 2-3 ರಾಜ್ಯಗಳಲ್ಲಿ ವಿರೋಧವಿರುವುದು ಸಹಜ. ಹಾಗಂತ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂಬುದು ಸಮಂಜಸವಲ್ಲ. ಕರ್ನಾಟಕದಲ್ಲೂ ಈ ಕಾಯ್ದೆ ಜಾರಿಗೊಳಿಸಲೇಬೇಕು. ಬೇರೆ ಆಯ್ಕೆಯಿಲ್ಲ ಎಂದು ಹೇಳಿದರು.
ವಸತಿ ಯೋಜನೆಯ ಸಹಾಯಧನ ಹೆಚ್ಚಳ ಪರಿಶೀಲನೆ: ವಿವಿಧ ಯೋಜನೆಗಳಡಿ ಮಂಜೂರು ಮಾಡುವ ಮನೆಗಳ ನಿರ್ಮಾಣಕ್ಕೆ ಫಲಾನುಭವಿ ಭರಿಸುವ ಹಣವನ್ನು ಸರ್ಕಾರವೇ ಪಾವತಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಉದ್ದೇಶಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ಬಿಜೆಪಿಯ ಕೆ.ಎಸ್.ನವೀನ್ ಹಾಗೂ ಎಸ್.ವಿ.ಸಂಕನೂರು ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಎರಡು ಆರ್ಥಿಕ ವರ್ಷದಲ್ಲಿ ವಿವಿಧ ಯೋಜನೆಯಡಿ ಒಟ್ಟಾರೆ 3,62,168 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.
ಇದು ಜಾತಿ ಗಣತಿ ಅಲ್ಲವೇ ಅಲ್ಲ, ಸಮೀಕ್ಷೆ ಅಷ್ಟೇ: ಸಚಿವ ಶಿವರಾಜ ತಂಗಡಗಿ
ಬಾಕಿ ಇರುವ ಸುಮಾರು 9 ಲಕ್ಷ ಮನೆಗಳನ್ನು ಇನ್ನೊಂದು ವರ್ಷದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕೆಲ ವಸತಿ ಯೋಜನೆಗಳಡಿ ಸರ್ಕಾರ ಮನೆ ಕಟ್ಟುವುದಿಲ್ಲ. ಬದಲಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನದಿಂದ ಫಲಾನುಭವಿ ಕಟ್ಟಬೇಕಾಗುತ್ತದೆ. ಬಡವರಿಗೆ ಮನೆ ಕಟ್ಟಲು ಕಷ್ಟವಾಗುತ್ತಿರುವುದರಿಂದ ಫಲಾನುಭವಿಗಳು ಕಟ್ಟಬೇಕಾದ ಹಣವನ್ನು ಸರ್ಕಾರವೇ ಭರಿಸುವ ಬಗ್ಗೆ ಚಿಂತನೆ ಮಾಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.