ನಾವು ತಪ್ಪು ಮಾಡಿದರೆ ಎಚ್ಚರಿಸಿ: ಸಿಎಂ ಸಿದ್ದರಾಮಯ್ಯ

Published : Jul 07, 2023, 03:30 AM IST
ನಾವು ತಪ್ಪು ಮಾಡಿದರೆ ಎಚ್ಚರಿಸಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಚುನಾವಣೆಯಲ್ಲಿ ಕೊಟ್ಟ ಮಾತನ್ನು ಈಡೇರಿಸದಿದ್ದರೆ ದ್ರೋಹ ಮಾಡಿದಂತಾಗುತ್ತದೆ, ಜನರು ಹಾಗೂ ಪ್ರತಿಪಕ್ಷಗಳು ನಮ್ಮ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆ ಹುಸಿ ಮಾಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದ ಸಿದ್ದರಾಮಯ್ಯ 

ವಿಧಾನ ಪರಿಷತ್‌(ಜು.07):  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಗಳು ಎಡವಿದಾಗ, ತಪ್ಪು ಮಾಡಿದಾಗ ಎಚ್ಚರಿಸುವ ಕೆಲಸವನ್ನು ಪ್ರತಿಪಕ್ಷಗಳು ಮಾಡಬೇಕು. ಪ್ರಬಲ ಪ್ರತಿಪಕ್ಷವಿದ್ದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಹಿರಿಯರ ಮನೆಗೆ ಆಗಮಿಸಿದ ತಮಗೆ ಸಭಾಪತಿ ಸೇರಿದಂತೆ ವಿವಿಧ ಸದಸ್ಯರು ತಮ್ಮನ್ನು ಅಭಿನಂದಿಸಿದ್ದಕ್ಕೆ ಪ್ರತಿಯಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಮತದಾರರು, ಶಾಸಕರು ಹಾಗೂ ಹೈಕಮಾಂಡ್‌ ಬೆಂಬಲದಿಂದ ಎರಡನೇ ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿದೆ. ಪ್ರಜಾಪ್ರಭುತ್ವದ ರಥಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳೆಂಬ ಎರಡು ಗಾಲಿ ಜೊತೆಯಾಗಿ ಸಾಗಿದರೆ ಮಾತ್ರ ಮುಂದೆ ಹೋಗಲು ಸಾಧ್ಯವಾಗುತ್ತದೆ ಎಂದರು.

Party Rounds: ಸಿದ್ದು ಬೆಂಕಿ, ಎಚ್‌ಡಿಕೆ ಬಿರುಗಾಳಿ, ಸದನದಲ್ಲಿ ಬೈದಾಡಿಕೊಂಡ ಸಿಎಂ-ಮಾಜಿ ಸಿಎಂ!

ಚುನಾವಣೆಯಲ್ಲಿ ನಮ್ಮ ವಿಚಾರ ಮುಂದಿಟ್ಟುಕೊಂಡು ಹೋಗುತ್ತೇವೆ. ನಾವು ಯಾರೂ ವೈರಿಗಳಲ್ಲ. ರಾಜಕೀಯವಾಗಿ ಬೇರೆ ಬೇರೆ ಸಿದ್ಧಾಂತ, ನೀತಿ, ನಿಯಮ ಇರುತ್ತದೆ. ಹಾಗೆಂದ ಮಾತ್ರಕ್ಕೆ ವೈಯಕ್ತಿಕ ದ್ವೇಷ ಇರುವುದಿಲ್ಲ. ರಾಜಕೀಯದಲ್ಲಿ ವೈಯಕ್ತಿಕ ದ್ವೇಷ ಇಟ್ಟುಕೊಳ್ಳಬಾರದು ಎಂದು ನುಡಿದರು.

ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಪ್ರಬಲವಾದ ಪ್ರತಿಪಕ್ಷಗಳು ಇರಬೇಕು. ಆಗ ಮಾತ್ರ ಆಡಳಿತ ಪಕ್ಷ ಎಚ್ಚರಿಕೆಯಿಂದ ಕೆಲಸ ಮಾಡಲು ಸಾಧ್ಯ. ನಾವು ತಪ್ಪೇ ಮಾಡುವುದಿಲ್ಲ , ನೂರಕ್ಕೆ ನೂರರಷ್ಟುಸರಿ ಇದ್ದೇವೆ ಎಂದು ಹೇಳುವುದಿಲ್ಲ. ನಡೆಯುವವನು ಎಡವುತ್ತಾನೆ. ತಪ್ಪು ಮಾಡಿದಾಗ ಎಚ್ಚರಿಸುವ ಕೆಲಸ ಮಾಡಬೇಕು ಎಂದು ಪ್ರತಿಪಕ್ಷಗಳಿಗೆ ಮನವಿ ಮಾಡಿದರು.

ಚುನಾವಣೆಯಲ್ಲಿ ಕೊಟ್ಟ ಮಾತನ್ನು ಈಡೇರಿಸದಿದ್ದರೆ ದ್ರೋಹ ಮಾಡಿದಂತಾಗುತ್ತದೆ, ಜನರು ಹಾಗೂ ಪ್ರತಿಪಕ್ಷಗಳು ನಮ್ಮ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆ ಹುಸಿ ಮಾಡುವುದಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ