
ಬೆಂಗಳೂರು (ಜೂ.12): ಕಾಂಗ್ರೆಸ್‌ನ ಪಟ್ಟಿನಿಂದ ಬಿಜೆಪಿ ಗೆಲುವು ಸಾಧಿಸಿತು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪ ಸರಿಯಲ್ಲ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದರೂ ಪರವಾಗಿಲ್ಲ ಎಂದು ವಿದೇಶಕ್ಕೆ ಹೋಗಿದ್ದೆ ಎಂಬ ಅವರ ಹೇಳಿಕೆಯಿಂದ ನಮಗೆಷ್ಟು ನೋವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲ ನೀಡದಿರುವ ನಡೆಯನ್ನು ಬಲವಾಗಿ ಸಮರ್ಥಿಸಿಕೊಂಡರು.
ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ 69 ಶಾಸಕರ ಜತೆಗೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ಜೆಡಿಎಸ್‌ನ ಒಬ್ಬರು ನಮಗೆ ಮತ ಹಾಕಿದ್ದಾರೆ. ಬಿಜೆಪಿ ಗೆಲುವಿಗೆ ನಮ್ಮ ಮೇಲೆ ಆರೋಪ ಮಾಡುತ್ತಾರೆ. ನೋವಿನಿಂದ ಮಾತನಾಡಿಕೊಳ್ಳುವವರು ಮಾತನಾಡಿಕೊಳ್ಳಲಿ. ಈ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹೇಗೆ ಬಂತು? ಅದಕ್ಕೆ ಜವಾಬ್ದಾರಿ ಯಾರು? ಸರ್ಕಾರ ಬಿದ್ದರೂ ಪರವಾಗಿಲ್ಲ ಎಂದು ವಿದೇಶಕ್ಕೆ ಹೋದವರು ಯಾರು? ಆಗ ಬೀದಿಗೆ ಬಿದ್ದ ನಮಗೆಷ್ಟುನೋವಾಗಿದೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
Rajya Sabha Election: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ: ಡಿಕೆಶಿ
ನಮ್ಮ ಮತ ನಮಗೆ ಬಂದಿದೆ: ಎರಡನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೆ ಹೋಗಿವೆಯೇ ಎಂಬ ಪ್ರಶ್ನೆಗೆ, ಬಿಜೆಪಿಗೆ ಮತ ಹಾಕಿರುವುದನ್ನು ಯಾರೂ ನೋಡಿಲ್ಲ. ಮೊದಲ ಪ್ರಾಶಸ್ತ್ಯದ ಅಷ್ಟೂಮತಗಳು ನಮಗೆ ಬಂದಿವೆ. ಎಲ್ಲ ಪಕ್ಷಗಳಿಗೂ ಅವರದೇ ಆದ ಒತ್ತಡವಿತ್ತು. 69 ಮತಗಳನ್ನು ನಾನೇ ಕಣ್ಣಾರೆ ಕಂಡಿದ್ದೇನೆ. ನಮ್ಮ ಪಕ್ಷದ ಯಾವುದೇ ಶಾಸಕರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಲ್ಲ. ಬೇರೆ ಪಕ್ಷಕ್ಕೆ ಹೆಚ್ಚುವರಿ ಮತಗಳು ಬಂದಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು. ಕಾಂಗ್ರೆಸ್, ಜೆಡಿಎಸ್‌ನಿಂದ ಇನ್ನೂ ಹಲವರು ಬಿಜೆಪಿಗೆ ಬರಲಿದ್ದಾರೆ ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ, ‘ಗಂಡಸರು ಮನಸ್ಸು ಮಾಡಿದರೆ ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು. ಅವರಿಗೆ ಶುಭ ಕೋರುತ್ತೇನೆ’ ಎಂದು ವ್ಯಂಗ್ಯವಾಗಿ ಹೇಳಿದರು.
ಪ್ರಚೋದನೆಗೆ ಒಳಗಾಗಬೇಡಿ- ಡಿಕೇಶಿ: ನೂಪುರ್ ಶರ್ಮಾ ಅವರ ಹೇಳಿಕೆ ಸೃಷ್ಟಿಸಿರುವ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಇದು ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾನು ಮನವಿ ಮಾಡಿಕೊಳ್ಳುವುದಿಷ್ಟೇ. ಇಷ್ಟುದಿನ ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಬದುಕಿದ್ದು, ಮುಂದೆಯೂ ಅದೇ ರೀತಿ ಇರೋಣ. ಯಾವುದೇ ಪ್ರಚೋದನೆಗೆ ಒಳಗಾಗದೆ, ಸಮಾಜದಲ್ಲಿ ಶಾಂತಿ ಕಾಪಾಡೋಣ ಎಂದು ಕರೆ ನೀಡಿದರು. ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡು ಯಾವ ಸಂದೇಶ ರವಾನಿಸುತ್ತಿದ್ದೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಪಕ್ಷದ ಕಾರ್ಯಕರ್ತರನ್ನು ಕೇಳಿ ಹೇಳುತ್ತಾರೆ.
Rajya Sabha Election: ಜೆಡಿಎಸ್ ಜತೆ ಖರ್ಗೆ ರಾಜ್ಯಸಭೆ ಸಂಧಾನ ಚರ್ಚೆ ನಡೆಸಿಲ್ಲ: ಡಿಕೆಶಿ
ಇಲ್ಲಿ ಲಾಭ-ನಷ್ಟ ವಿಚಾರ ಬೇರೆ. ಇಲ್ಲಿ ನಮ್ಮ ಪಕ್ಷ ಸ್ವಾಭಿಮಾನದಿಂದ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಬೇರೆಯವರಿಗೆ ಸ್ವಾಭಿಮಾನ ಇರುವಂತೆ ನಮ್ಮ ಪಕ್ಷಕ್ಕೂ ಸ್ವಾಭಿಮಾನವಿದೆ’ ಎಂದು ಹೇಳಿದರು. ನಮಗೆ ಬೇರೆ, ಬೇರೆ ಪಕ್ಷಗಳ ಶಾಸಕರ ಬೆಂಬಲ ಇತ್ತು. ಹೀಗಾಗಿ ನಾವು ಆತ್ಮಸಾಕ್ಷಿ ಮತ ಕೇಳಿದೆವು. ನಮಗೆ ಕಳೆದ ಬಾರಿಯ ಘಟನೆ ಮರುಕಳಿಸುವ ಇಚ್ಛೆ ಇರಲಿಲ್ಲ. ಹೀಗಾಗಿ ನಾವು ಯಾರಿಗೂ ಮನವಿ ಮಾಡಲಿಲ್ಲ. ಜೆಡಿಎಸ್‌ನವರು ಅವರ ಪಕ್ಷ ಕಟ್ಟಿಕೊಂಡು 123 ಸ್ಥಾನ ಗೆಲ್ಲಲಿ. ನಾವು ನಮ್ಮ ಪಕ್ಷ ಕಟ್ಟಿಕೊಂಡು 150 ಸ್ಥಾನ ಗೆಲ್ಲುತ್ತೇವೆ. ಬಿಜೆಪಿಯವರು ಅವರ ಪಕ್ಷ ಕಟ್ಟಿಕೊಂಡು 150 ಗೆಲ್ಲಲಿ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.