ಸರ್ಕಾರ ಬೀಳಿಸಲು ನಾವು ಯತ್ನಿಸಲ್ಲ: ವಿಜಯೇಂದ್ರ

By Kannadaprabha News  |  First Published May 14, 2024, 5:00 AM IST

ನಾವು ಸರ್ಕಾರ ಬೀಳಿಸಲು ಹೋಗುವುದಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಅಂತಹ ಪ್ರಯತ್ನ ನಾವು ಮಾಡುವುದಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ


ಬೆಂಗಳೂರು(ಮೇ.14):  ನಾವು ರಾಜ್ಯದ ಕಾಂಗ್ರೆಸ್ ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಏನೇನು ಆಗಲಿದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದರು. ನಾವು ಸರ್ಕಾರ ಬೀಳಿಸಲು ಹೋಗುವುದಿಲ್ಲ. ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಅಂತಹ ಪ್ರಯತ್ನ ನಾವು ಮಾಡುವುದಿಲ್ಲ ಎಂದರು.

Tap to resize

Latest Videos

3 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು ನಿಶ್ಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ

ಪಕ್ಷದ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಯುತ್ತಿದೆ. ಈ ಸರ್ಕಾರ ಉಳಿಯುವುದಿಲ್ಲ, ಒಳಜಗಳದಿಂದ ಪತನಗೊಳ್ಳಲಿದೆ ಎಂಬ ಮಾತನ್ನು ಜನರೇ ಹೇಳುತ್ತಿದ್ದಾರೆ. ನಮ್ಮ ಪ್ರಯತ್ನ ಬೇಕಾಗಿಲ್ಲ ಎಂದು ಹೇಳಿದರು.

click me!