ನಮಗೆ ಅನ್ಯ ಪಕ್ಷದ ಶಾಸಕರ ಅವಶ್ಯಕತೆಯಿಲ್ಲ: ಡಿ.ಕೆ.ಶಿವಕುಮಾರ್‌

Published : Sep 02, 2023, 09:03 PM IST
ನಮಗೆ ಅನ್ಯ ಪಕ್ಷದ ಶಾಸಕರ ಅವಶ್ಯಕತೆಯಿಲ್ಲ: ಡಿ.ಕೆ.ಶಿವಕುಮಾರ್‌

ಸಾರಾಂಶ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ರವರು 40 ಜನ ಕಾಂಗ್ರೆಸ್‌ ಶಾಸಕರು ಅವರು ಸಂಪರ್ಕದಲ್ಲಿದ್ದಾರೆಂದು ಹೇಳಿಕೊಂಡಿದ್ದಾರೆ. ಕೇವಲ 40 ಶಾಸಕರಲ್ಲ ನಮ್ಮ 136 ಶಾಸಕರನ್ನೂ ಸಂಪರ್ಕದಲ್ಲಿ ಇಟ್ಟುಕೊಳ್ಳಲಿ, ಬಹಳ ಸಂತೋಷ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. 

ಚಿಕ್ಕಬಳ್ಳಾಪುರ (ಸೆ.02): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ರವರು 40 ಜನ ಕಾಂಗ್ರೆಸ್‌ ಶಾಸಕರು ಅವರು ಸಂಪರ್ಕದಲ್ಲಿದ್ದಾರೆಂದು ಹೇಳಿಕೊಂಡಿದ್ದಾರೆ. ಕೇವಲ 40 ಶಾಸಕರಲ್ಲ ನಮ್ಮ 136 ಶಾಸಕರನ್ನೂ ಸಂಪರ್ಕದಲ್ಲಿ ಇಟ್ಟುಕೊಳ್ಳಲಿ, ಬಹಳ ಸಂತೋಷ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲಿನಲ್ಲಿರುವ ಸುಲ್ತಾನ್‌ ಪೇಟೆಯ ಬಳಿಯ ಅಮಿತ ರಸ ರೆಸಾರ್ಚ್‌ನಲ್ಲಿ ಮೈಸೂರು ಜಿಲ್ಲೆಯ ಹುಣಸೂರಿನ ಮಾಜಿ ಶಾಸಕ ಎಚ್‌.ಪಿ. ಮಂಜುನಾಥ್‌ರ ಪುತ್ರ ಪವನ್‌ರ ಮದುವೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬಿಜೆಪಿಯಲ್ಲಿ ನಿಷ್ಠಾವಂತರಿಗೆ ಬೆಲೆ ಇಲ್ಲ: ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಸಾರಿಗೆ ಸಚಿವ ಆರ್‌.ರಾಮಲಿಂಗಾರೆಡ್ಡಿ, ಬಿಜೆಪಿ ಸಂಪರ್ಕದಲ್ಲಿ 30ರಿಂದ 40 ಜನ ಅನ್ಯಪಕ್ಷದ ಶಾಸಕರು ಸಂಪರ್ಕದಲ್ಲಿ ಇದ್ದಾರೆ ಅನ್ನೊ ಹೇಳಿಕೆಗೆ ಬಿಜೆಪಿ ಸಂಪರ್ಕದಲ್ಲಿ ಶಾಸಕರು ಅಲ್ಲ ನಗರಸಭೆ ಸದಸ್ಯರು ಸಹ ಸಂಪರ್ಕದಲ್ಲಿ ಇಲ್ಲ. ನಮಗೆ ಅನ್ಯ ಪಕ್ಷದ ಶಾಸಕರ ಅವಶ್ಯಕತೆಯಿಲ್ಲ. ಆದ್ರೆ ಯಾವುದೇ ಆಸೆ- ಆಮಿಷಗಳು ಇಲ್ಲದೆ ಕಾಂಗ್ರೆಸ್‌ಗೆ ಯಾರು ಬೇಕಾದ್ರು ಸೇರಬಹುದು. ಕಾಂಗ್ರೆಸ್‌ಗೆ ಬರುವವರಿಗೆ ಸ್ವಾಗತ. ನಮ್ಮ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. 

ನಂದಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧಕ್ಕೆ ಚಿಂತನೆ: ಯಾಕೆ ಗೊತ್ತಾ?

ಬಿಜೆಪಿಯಲ್ಲಿ ಆರ್‌ಎಸ್‌ಎಸ್‌ ಮೂಲದವರಿಗೆ ಮಾತ್ರ ಬೆಲೆಯಿದೆ. ಬಿಜೆಪಿಯಲ್ಲಿ ನಿಷ್ಠವಂತಾ ಮುಖಂಡರಿಗೆ ಬೆಲೆಯಿಲ್ಲ. ಬಿ.ಎಸ್‌.ಯಡಿಯೂರಪ್ಪರನ್ನು ಏನ್‌ ಮಾಡಿದ್ರು ಗೊತ್ತಿದೆಯಲ್ಲಾ ಎಂದು ತಿರುಗೇಟು ನೀಡಿದರು ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮಾಜಿ ಶಾಸಕ ಹೆಚ್‌.ಪಿ. ಮಂಜುನಾಥ್‌ರ ಪುತ್ರ ಪವನ್‌ರ ಮದುವೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೂತನ ವಧು-ವರರನ್ನು ಆರ್ಶೀವದಿಸಿದರು. ಇದೇ ವೇಳೆ ಸಚಿವರಾದ ಪ್ರಿಯಾಂಕ್‌ ಖರ್ಗೆ ,ಸಂತೋಷ್‌ ಲಾಡ್‌ ,ಸತೀಶ್‌ ಜಾರಕೀಹೊಳಿ ,ಡಾ .ಎಂ ಸಿ ಸುಧಾಕರ್‌, ಶಾಸಕ ಪ್ರದೀಪ್‌ ಈಶ್ವರ್‌ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಭಾಗಿಯಾಗಿದ್ದರು.

ಕಾವೇರಿ ಸ್ಥಿತಿ ಅರಿಯಲು ತಜ್ಞರ ಸಮಿತಿ ನೇಮಿಸಿ: ರಾಜ್ಯದ ರೈತರ ಹಿತ ಕಾಪಾಡುವುದು ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಡೆಯಲು ರಾಜ್ಯ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸಿದ್ಧವಿದೆ. ಹೀಗಾಗಿ ಕಾವೇರಿ ಕೊಳ್ಳದ ಜಲಾಶಯಗಳಲ್ಲಿನ ನೀರು ಶೇಖರಣೆಯ ವಸ್ತುಸ್ಥಿತಿ ಅರಿಯಲು ತಜ್ಞರನ್ನು ನೇಮಿಸಬೇಕು ಎಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಕಾವೇರಿ ನದಿಯಿಂದ 24 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಪಟ್ಟು ಹಿಡಿದಿತ್ತು. ಆದರೆ, ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳ ಒಳಹರಿವಿನ ಕೊರತೆ, ಜಲಾಶಯಗಳಲ್ಲಿ ಶೇಖರಣೆಯಾಗಿರುವ ನೀರಿನ ಪ್ರಮಾಣವನ್ನು ಗಮನಿಸಿ ಅಷ್ಟುಪ್ರಮಾಣದ ನೀರು ಬಿಡಲು ಸಾಧ್ಯವಿಲ್ಲ ಎಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ತಿಳಿಸಿತ್ತು. ಅಲ್ಲದೆ, ನಿತ್ಯ 3 ಸಾವಿರ ಕ್ಯೂಸೆಕ್ಸ್‌ ನೀರು ಹರಿಸುವುದಾಗಿ ಹೇಳಲಾಗಿತ್ತು. ಅಂತಿಮವಾಗಿ 15 ದಿನಗಳವರೆಗೆ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸುವಂತೆ ಆದೇಶಿಸಲಾಗಿದೆ.

ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅಷ್ಟು ಪ್ರಮಾಣದ ನೀರು ಹರಿಸಲು ಸಾಧ್ಯವಿಲ್ಲ. ಹೀಗಾಗಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿನ ಕಾವೇರಿ ನದಿಯ ಜಲಾಶಯಗಳಲ್ಲಿನ ಪರಿಸ್ಥಿತಿ ಅವಲೋಕಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಸತತ 2 ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ಸಕಲ ಸೌಲಭ್ಯ ಕಲ್ಪಿಸುವೆ: ಪ್ರದೀಪ್‌ ಈಶ್ವರ್‌

ತಮಿಳುನಾಡಿನಿಂದ ಹೊರಹರಿವು ಹೆಚ್ಚಳ: ತಮಿಳುನಾಡಿನ ಮೆಟ್ಟೂರು, ಭವಾನಿಸಾಗರ, ಅಮರಾವತಿ ಜಲಾಶಯಗಳಿಂದ ಜೂನ್‌ 1ರಿಂದ ಆಗಸ್ಟ್‌ 27ರವರೆಗೆ 77.53 ಟಿಎಂಸಿ ನೀರು ಹರಿಸಲಾಗಿದೆ. ಹೀಗೆ ಜಲಾಶಯಗಳಲ್ಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳದೆ, ಕೃಷಿ ಚಟುವಟಿಕೆಗೆ ಹರಿಸಲಾಗಿದೆ. ಇದೀಗ ನೀರಿನ ಕೊರತೆಯಿದೆ ಎಂದು ಹೇಳಲಾಗುತ್ತಿದೆ. ಅದನ್ನು ನಾವು ಒಪ್ಪಲು ಸಾಧ್ಯವಿಲ್ಲ. ಕಳೆದ 30 ವರ್ಷಗಳ ಸರಾಸರಿಗೆ ಹೋಲಿಸಿದರೆ ಈ ವರ್ಷ ಭವಾನಿಸಾಗರ ಜಲಾಶಯದಿಂದ ಶೇ.103.20ರಷ್ಟುನೀರು ಹೊರಗೆ ಬಿಡಲಾಗಿದೆ. ಅದೇ ಮೆಟ್ಟೂರು ಜಲಾಶಯದಿಂದ ಶೇ.93.06 ಹಾಗೂ ಅಮರಾವತಿ ಜಲಾಶಯದಿಂದ ಶೇ.86.60ರಷ್ಟುನೀರನ್ನು ಹೊರಗೆ ಬಿಡಲಾಗಿದೆ. ಕರ್ನಾಟಕದಲ್ಲಿ ನೀರಿನ ಕೊರತೆ ಇರುವಾಗ ತಮಿಳುನಾಡು ನೀರು ಹರಿಸುವುದರಲ್ಲಿ ಕಡಿವಾಣ ಹಾಕಬಹುದಿತ್ತು ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ