2 ವರ್ಷದಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

Published : May 21, 2025, 06:34 AM IST
2 ವರ್ಷದಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ರಾಜ್ಯದಲ್ಲಿ ಬಿಜೆಪಿಗೆ ಎಂದೂ ಜನಾದೇಶವಾಗಿಲ್ಲ. ‘ಆಪರೇಷನ್‌ ಕಮಲ’ದ ಮೂಲಕವೇ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಎಂದೂ ಜನಪರ ಯೋಜನೆ ಜಾರಿಯ ಕಾಳಜಿ ತೆಗೆದುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಹೊಸಪೇಟೆ (ಮೇ.21): ರಾಜ್ಯದಲ್ಲಿ ಬಿಜೆಪಿಗೆ ಎಂದೂ ಜನಾದೇಶವಾಗಿಲ್ಲ. ‘ಆಪರೇಷನ್‌ ಕಮಲ’ದ ಮೂಲಕವೇ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಎಂದೂ ಜನಪರ ಯೋಜನೆ ಜಾರಿಯ ಕಾಳಜಿ ತೆಗೆದುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಜನಾಕ್ರೋಶ ಯಾತ್ರೆ ಆರಂಭಿಸಿರುವ ಬಿಜೆಪಿ ನಾಯಕರು ರಾಜ್ಯದಲ್ಲಿ ಜನಾಕ್ರೋಶವಿದೆ ಎಂದು ತಮಟೆ ಬಾರಿಸುತ್ತಿದ್ದಾರೆ. ಜನರಲ್ಲಿ ಜನಾಕ್ರೋಶವಿದ್ದರೆ ಸಮರ್ಪಣೆ ಸಂಕಲ್ಪ ಯಾತ್ರೆಗೆ ಮೂರು ಲಕ್ಷ ಜನರು ಹೇಗೆ ಭಾಗವಹಿಸುತ್ತಿದ್ದರು? ಎಂದು ಸಿಎಂ ಪ್ರಶ್ನಿಸಿದರು. ಜೊತೆಗೆ ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜತೆಗೆ 142 ಭರವಸೆ 2 ವರ್ಷಗಳಲ್ಲಿ ಪೂರೈಸಿದ್ದೇವೆ ಎಂದು ಹೇಳಿದರು.

ಸಂಕಷ್ಟ ಅರಿತಿದ್ದು ಕಾಂಗ್ರೆಸ್‌: ಬಡವರ ನೋವು, ಮಹಿಳೆಯರ ಸಂಕಷ್ಟ ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಸಂಕಷ್ಟಕ್ಕೆ ಸ್ಪಂಧಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು. ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. 

ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದು ಕಾಂಗ್ರೆಸ್‌ ಪಕ್ಷ, ಪಾಕಿಸ್ತಾನ ಹೊಡೆದುರಿಳಿಸಿದ್ದು ಇಂದಿರಾ ಗಾಂಧಿ ನೇತೃತ್ವದ ಕೇಂದ್ರದ ಕಾಂಗ್ರೆಸ್‌ ಸರ್ಕಾರ. ದೇಶ ರಕ್ಷಣೆ ಮಾಡಿದ್ದು ಕಾಂಗ್ರೆಸ್‌ ಪಕ್ಷ, ಧರ್ಮದ ವಿಚಾರದದಲ್ಲಿಯೂ ನಾವೇ ಶ್ರೇಷ್ಠರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು, ಮಹಿಳೆಯರ ಹಿತ ಕಾಪಾಡಿದೆ ಎಂದು ಹೇಳಿದರು.ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಲ್ಲಿ ಸಮರ್ಥ ನಾಯಕತ್ವ ಇದೆ. ಅವರು ಸಚಿವರಾಗುವುದು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. 

ಪರಿಶಿಷ್ಟ ಜಾತಿ ಒಳಮೀಸಲು ಸಮೀಕ್ಷೆಯಲ್ಲಿ ಬೇಡ ಜಂಗಮ ಸೇರ್ಪಡೆ ಸಲ್ಲದು: ಮಲ್ಲಿಕಾರ್ಜುನ ಖರ್ಗೆ

ಕಾಲ ಬರಬೇಕು. ಇಂಡಿ ಮತಕ್ಷೇತ್ರದ ಮತದಾರರು ಯಶವಂತರಾಯಗೌಡ ಪಾಟೀಲರನ್ನು ಸಚಿವರಾಗಿ ನೋಡುವ ಭಾಗ್ಯ ದೂರವಿಲ್ಲ ಎಂದು ಹೇಳಿದರು. ಅಲ್ಲದೇ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಅಧಿಕಾರಕ್ಕೆ ಬರುತ್ತಿರುವ ಬಿಜೆಪಿಗರಿಗೆ ಬುದ್ದಿ ಕಲಿಸಲು, ಹೊಸಪೇಟೆಯಲ್ಲಿ ಕಾಂಗ್ರೆಸ್‌ ಜಾತ್ರೆ ಹಮ್ಮಿಕೊಂಡಿದ್ದು, ತಾವೆಲ್ಲ ಆಗಮಿಸಬೇಕು. ಪಕ್ಷದ ಕಾರ್ಯಕರ್ತರು ಸ್ವಾಭಿಮಾನದಿಂದ ಸಾಮಾನ್ಯ ಜನರ ಬಳಿಗೆ ಹೋಗಿ ಕಾಂಗ್ರೆಸ್‌ ಪಕ್ಷದ ಸಾಧನೆ ಹೇಳಿಬರುವಂತೆ ತಲೆಎತ್ತಿ ನಡೆಯುವಂತೆ ಮಾಡಿದ ಕಾಂಗ್ರೆಸ್‌ ಸರ್ಕಾರ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ