ನಮ್ಮಲ್ಲಿ ಯಾವುದೇ ಬಣ ಇಲ್ಲ, ಕಾಂಗ್ರೆಸ್ ಬಣವೇ ಬಣ ಅಷ್ಟೇ: ಸಚಿವ ಬೋಸರಾಜು

By Kannadaprabha News  |  First Published Nov 2, 2023, 6:23 AM IST

ಯಾವುದೇ ಬಣ ಇಲ್ಲ. ಕಾಂಗ್ರೆಸ್ ಬಣವೇ ಬಣ ಅಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಸಚಿವ ಜಮೀರ್ ಅಹಮ್ಮದ್ ಖಾನ್, ನಾನು ಸಿದ್ದರಾಮಯ್ಯನವರ ಬಣ ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇರುವಂತಹ ಶಿಸ್ತೇ ಅಂತಿಮ. 


ಮಡಿಕೇರಿ (ನ.02): ನಮ್ಮಲ್ಲಿ ಯಾವುದೇ ಬಣ ಇಲ್ಲ. ಕಾಂಗ್ರೆಸ್ ಬಣವೇ ಬಣ ಅಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಸಚಿವ ಜಮೀರ್ ಅಹಮ್ಮದ್ ಖಾನ್, ನಾನು ಸಿದ್ದರಾಮಯ್ಯನವರ ಬಣ ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇರುವಂತಹ ಶಿಸ್ತೇ ಅಂತಿಮ. ಹೈಕಮಾಂಡ್ ಹೇಳಿದಂತೆ ಎಲ್ಲರೂ ನಡೆದುಕೊಳ್ಳುತ್ತಾರೆ ಅಷ್ಟೇ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್‌ಗೆ ತಿರುಗೇಟು ನೀಡಿದರು.

ಇದರಲ್ಲಿ ಮುಂದು ಹಿಂದು ಎನ್ನುವ ವ್ಯತ್ಯಾಸವಿಲ್ಲ. ಕಾಂಗ್ರೆಸ್ ಅಧಿನಾಯಕರು ಏನು ಹೇಳುತ್ತಾರೆ ಅದರಂತೆ ಎಲ್ಲರೂ ನಡೆದುಕೊಳ್ಳುತ್ತಾರೆ. ಬೇರೆ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ವಿಚಾರ ಅದೆಲ್ಲವೂ ವಿರೋಧ ಪಕ್ಷದವರ ಸೃಷ್ಟಿ ಅಷ್ಟೇ. ನಮ್ಮ ಸರ್ಕಾರ ಸುಭದ್ರವಾಗಿದೆ. ಎಲ್ಲಾ ಯೋಜನೆಗಳು ಸುಸೂತ್ರವಾಗಿ ಜಾರಿಯಾಗುತ್ತಿವೆ. ಆದರೆ ರಾಜಕೀಯವಾಗಿ ಉಪದ್ರವ ನೀಡುವ ಕೆಲಸಗಳು ಆಗುತ್ತಲೇ ಇರುತ್ತವೆ ಎಂದರು. ಬಿಜೆಪಿ, ಜೆಡಿಎಸ್‌ನವರ ಕುತಂತ್ರಗಳಿಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಹೇಳಿದರು.

Latest Videos

undefined

ಕೇಂದ್ರ ಸಚಿವ ಶೆಖಾವತ್‌ ಆತ್ಮವಿಮರ್ಶೆ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ವರ್ಷವಿಡೀ ಕನ್ನಡ ಕಾರ್ಯಕ್ರಮ: ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ 2024ರ ನವೆಂಬರ್ ವರೆಗೆ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹೇಳಿದರು. ಜಿಲ್ಲಾಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. 

ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರು ನಾಮಕರಣವಾಗಿ ಇಂದಿಗೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಹಾಗೂ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ- ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.

ಕರುನಾಡು ಇಡೀ ದೇಶದಲ್ಲೇ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಅಗ್ರಸ್ಥಾನದಲ್ಲಿದೆ. ನಮ್ಮ ಸರ್ಕಾರದ ಗೃಹ ಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲ ಬಗೆಯ ಜನರನ್ನು ಪ್ರಗತಿ ಮತ್ತು ಸಮಾನತೆಯೆಡೆಗೆ ಕೊಂಡೊಯ್ಯುತ್ತಿದ್ದೇವೆ. ಈ ಯೋಜನೆಗಳ ಮೂಲಕ ನಮ್ಮ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ಬರ ಪ್ರವಾಸದ ಬದಲು ಮೋದಿ ಕಾಲಿಗೆ ಬೀಳಿ: ಬಿಜೆಪಿಗರಿಗೆ ಸಿದ್ದು ಟಾಂಗ್‌

ಈ ಮಣ್ಣಿನ ಐತಿಹಾಸಿಕ ಕಾರ್ಯಕ್ರಮಗಳಾದ ತಲಕಾವೇರಿ ತೀರ್ಥೋದ್ಬವ ಚಟುವಟಿಕೆಗೆ 1.40 ಕೋಟಿ ರು. ಹಾಗೂ ಕೊಡಗಿನ ಹಿರಿಮೆಯನ್ನು ಹೆಚ್ಚಿಸುವ ಮಡಿಕೇರಿ ದಸರಾ ಹಾಗೂ ಗೋಣಿಕೊಪ್ಪ ದಸರಾ ಕಾರ್ಯಕ್ರಮಗಳಿಗೆ ಒಟ್ಟು 1.55 ಕೋಟಿ ರು. ಅನುದಾನವನ್ನು ನೀಡಿ ನಮ್ಮ ಸರ್ಕಾರ ಈ ನಾಡು ನುಡಿ ಸಂಸ್ಕೃತಿಯ ಬಗೆಗಿನ ಕಾಳಜಿ ಮೆರೆದಿದ್ದೇವೆ ಎಂದು ತಿಳಿಸಿದರು.

click me!