ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ (ಜೂ.05): ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಖಂಡ ಬೆಳಗಾವಿ ಜಿಲ್ಲೆಯ ಹಿರಿಯರು ಸಂಸತ್ ಸದಸ್ಯರು ಮತ್ತು ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಎಲ್ಲರ ಜತೆಗೆ ಇಂದು ಸೋಲಿನ ಪರಾಮರ್ಶೆ ಮಾಡಿದ್ದೇವೆ.
ಸೋಲಲು ಸ್ಥಳೀಯ ವಿಚಾರಗಳು ಕಾರಣವೋ? ಬೇರೆ ಯಾವ ಕಾರಣವೋ ಎನ್ನುವುದನ್ನು ಅರಿಯಲು ಸಭೆ ಮಾಡಲಾಗಿದೆ. ಇದರ ಜೊತೆಗೆ ಲೋಕಸಭೆ ಚುನಾವಣೆಗೆ ಮತ್ತೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಮತಗಳನ್ನ ಜಾಸ್ತಿ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಬಿಜೆಪಿಗೆ ಜನ ಮನ್ನಣೆ ನೀಡಲಿದ್ದಾರೆ. ಇಂದಿನಿಂದಲೇ ಲೋಕಸಭಾ ಚುನಾವಣೆಯ ತಯಾರಿ ಆರಂಭ ಎಂದರು.
ಪರಿಸರದಿಂದಲೇ ಬದುಕುವ ನಾವು ಪರಿಸರಕ್ಕೆ ಏನನ್ನು ಕೊಡಲು ಸಾಧ್ಯ!
ದೇವರು ನಮ್ಮ ಸೃಷ್ಟಿಕರ್ತ: ಆಧುನಿಕ ಜಗತ್ತಿನಲ್ಲಿ ಬಡವರು, ಶ್ರೀಮಂತರು ಬದುಕುತ್ತಿದ್ದಾರೆ. ಆದರೆ, ವೈಚಾರಿಕ ಹೊಂದಾಣಿಕೆ ಇಲ್ಲದಿರುವ ಕಾರಣ ನಾವು ದೇವರನ್ನು ಗುರತಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಹಿಂದವಾಡಿಯ ಅಕಾಡೆಮಿ ಆಫ್ ಕಂಪೇರಿಟಿವ್ ಫಿಲಾಸಫಿ ಆ್ಯಂಡ್ ರಿಲಿಜನ್ ಗುರುದೇವ ರಾನಡೆ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಆರ್.ಡಿ.ರಾನಡೆ 66ನೇ ಪುಣ್ಯ ತಿಥಿ ಅಂಗವಾಗಿ ಎಸಿಪಿಅರ್ ನವೀಕೃತ ಕಟ್ಟಡ ಲೋಕಾರ್ಪಣೆಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೊಂದಾಣಿಕೆ ಬದುಕು ಕಟ್ಟಕಟ್ಟಿಕೊಂಡ ಹೊಸ ಜಗತ್ತನ್ನು ನೋಡಬಹುದು. ದೇವರು ನಮ್ಮ ಸೃಷ್ಟಿಕರ್ತ ಹೌದು. ಹಾಗಂತ ಅವನು ಸೃಷ್ಟಿ ಮಾಡಿ ಕೈ ಬಿಡಲಿಲ್ಲ. ನಮ್ಮ ಜತೆಯಲ್ಲಿದ್ದಾನೆ. ಆದರೆ, ನಾವು ಅವನನ್ನು ಗುರುತಿಸುವ ಬದಲು ಹುಡುಕು ಕೆಲಸ ಮಾಡುತ್ತಿದ್ದೇನೆ.
ರಾಜ್ಯದ ಅಭಿವೃದ್ಧಿಗೆ ಹೊಡೆತ ಗ್ಯಾರಂಟಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಇವುಗಳ ಜಾರಿಯಿಂದ ಅಭಿವೃದ್ಧಿಗೆ ಹೊಡೆತ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀಕ್ಷ$್ಣವಾಗಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ಮಾತಿಗೆ ತಪ್ಪಿದ್ದು, ಅದರ ನಿಜ ಬಣ್ಣ ಬಯಲಾಗಿದೆ ಎಂದೂ ಅವರು ಆಪಾದಿಸಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಹೆಚ್ಚಿನ ಆದಾಯ ತರದೆ ಇರುವ ಹಣವನ್ನೇ ಖರ್ಚು ಮಾಡಿದರೆ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡದೆ ಹೋದರೆ, ಆರ್ಥಿಕ ಹೊರೆ ಬೀಳಲಿದೆ.
ರಾಮನಗರ, ಬನ್ನೇರುಘಟ್ಟದಲ್ಲಿ ಆನೆ ಕಾರ್ಯಪಡೆ ರಚನೆ: ಸಚಿವ ಈಶ್ವರ ಖಂಡ್ರೆ
ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಜನರಿಗೆ ಬಹಳಷ್ಟುಭರವಸೆ ತೋರಿಸಿತ್ತು. ಜನರ ನಿರೀಕ್ಷೆಗಳನ್ನು ದೊಡ್ಡ ಮಟ್ಟದಲ್ಲಿರಿಸಿಕೊಂಡು ಚುನಾವಣೆಯನ್ನೂ ಗೆದ್ದಿತು. ಆದರೆ, ಚುನಾವಣೆ ಪೂರ್ವ ಮಾತಿಗೂ ಚುನಾವಣೆ ನಂತರದ ಮಾತಿಗೂ ಬಹಳ ವ್ಯತ್ಯಾಸ ಇದೆ. ಈಗ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ವಿದ್ಯುತ್ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯುನಿಟ್ ವ್ಯತ್ಯಾಸವಾಗುತ್ತದೆ. ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.