
ಹುಬ್ಬಳ್ಳಿ (ಜ.20): ‘ಸರ್ಕಾರ ರಚನೆಗಾಗಿ ತ್ಯಾಗ ಮಾಡಿ ಕಾಂಗ್ರೆಸ್‌ನಿಂದ ಬಂದು ಇಲ್ಲಿ ಮಂತ್ರಿಯಾಗಿದ್ದೇವೆ. ಪುನಃ ಕಾಂಗ್ರೆಸ್‌ಗೆ ಹೋಗುವ ಮಾತೇ ಇಲ್ಲ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬಿಜೆಪಿಗೆ ಕಾಂಗ್ರೆಸ್‌ನಿಂದ ಹೋದವರು, ಮರಳಿ ಕಾಂಗ್ರೆಸ್‌ಗೆ ಮರಳಲಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ನಿಂದ ಬಂದು ಇಲ್ಲಿ ಮಂತ್ರಿ ಆಗಿದ್ದೇವೆ.
20 ತಿಂಗಳು ಸಚಿವರಾದವರ ಕೈ ಬಿಟ್ಟು ಆಗುತ್ತಾ ಹೊಸ ಸಚಿವ ಸಂಪುಟ..? .
ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಬಿಜೆಪಿಗೆ ಬಂದು ಸರ್ಕಾರ ರಚನೆಗೆ ನೆರವಾದ 17 ಜನರಲ್ಲಿ ಒಬ್ಬರೂ ತಮ್ಮ ಪಕ್ಷಗಳಿಗೆ ವಾಪಸ್ ಹೋಗಲ್ಲ. ಬಿಜೆಪಿಯಲ್ಲೇ ಮುಂದುವರಿಯುತ್ತೇವೆ. ಡಿಕೆಶಿ ಹೇಳಿದ್ದು ಯಾವುದೂ ಸತ್ಯವಾಗಿಲ್ಲ, ಕಾಂಗ್ರೆಸ್‌ಗೆ ವಾಪಸ್ ಬರ್ತಾರೆ ಎನ್ನುವುದು ಸತ್ಯವಾಗುತ್ತಾ?’ಎಂದು ಪ್ರಶ್ನಿಸಿದರು.
ಸಚಿವ ಸಂಪುಟ ವಿಸ್ತರಣೆ ಬಳಿಕ ಶಾಸಕರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಮುಖ್ಯಮಂತ್ರಿ ಸಮರ್ಥರಿದ್ದಾರೆ. ಹೈಕಮಾಂಡ್ ಬಲಿಷ್ಠವಾಗಿದೆ. ಯಾರಿಗೆ ಮಂತ್ರಿ ಸ್ಥಾನ, ಯಾವ ಇಲಾಖೆ ಕೊಡಬೇಕು ಎನ್ನುವುದನ್ನು ಸರಿಯಾಗಿ ನಿರ್ಧರಿಸುತ್ತಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.