''ಬಿಜೆಪಿ ಬಿಟ್ಟು ಹೋದವರನ್ನು ನಾವು ಪಕ್ಷಕ್ಕೆ ವಾಪಸ್‌ ಕರೆತರುತ್ತೇವೆ''

Kannadaprabha News   | Kannada Prabha
Published : Feb 14, 2026, 05:46 AM IST
BJP

ಸಾರಾಂಶ

ಬಿಜೆಪಿ ಬಿಟ್ಟು ಹೋದವರನ್ನು ವಾಪಸ್‌ ಕರೆದುಕೊಂಡು ಬರುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ನಡೆದ ವಿಬಿ ಜಿ ರಾಮ್ ಜಿ ಜಾಗೃತಿ ಕಾರ್ಯಕ್ರಮದ ನಂತರ ಮಾತನಾಡಿ ವಾಪಸ್ ಕರೆದು ತರುತ್ತೇವೆ ಎಂದರು

ಬೀಳಗಿ: ಬಿಜೆಪಿ ಬಿಟ್ಟು ಹೋದವರನ್ನು ವಾಪಸ್‌ ಕರೆದುಕೊಂಡು ಬರುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಹೇಳಿದರು.

ವಿಬಿ ಜಿ ರಾಮ್ ಜಿ ಜಾಗೃತಿ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ನಡೆದ ವಿಬಿ ಜಿ ರಾಮ್ ಜಿ ಜಾಗೃತಿ ಕಾರ್ಯಕ್ರಮದ ನಂತರ ಮಾತನಾಡಿ, ಖಂಡಿತವಾಗಿಯೂ ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆದು ತರುತ್ತೇವೆ. ರಾಜ್ಯಾದ್ಯಂತ ಷರತ್ತುರಹಿತವಾಗಿ ಯಾರ್‍ಯಾರು ಪಕ್ಷಕ್ಕೆ ವಾಪಸ್‌ ಬರಲು ಬಯಸುತ್ತಾರೋ ಅವರೆಲ್ಲರನ್ನು ಕೂಡ ಕರೆದುಕೊಂಡು ಬರುವುದಕ್ಕೆ‌ನಾವು ಸಿದ್ಧರಿದ್ದೇವೆ.

ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ

ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ ಎಂದು ಹೇಳಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನೂ ವಾಪಸ್ ಕರೆತರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಯತ್ನಾಳ್‌ ಅವರು ಶಾಸಕರಾಗಿರುವುದರಿಂದ ಅದು ನಮ್ಮ ‌ಕೈಯಲ್ಲಿ ಇಲ್ಲ. ಅದನ್ನು ರಾಷ್ಟ್ರೀಯ ನಾಯಕರು ನಿರ್ಧಾರ ಮಾಡಲಿದ್ದಾರೆ. ಇದರಿಂದಾಗಿ ಅವರು ಏನು ನಿರ್ಧಾರ ಮಾಡುತ್ತಾರೋ ಅದನ್ನು ನಾವು ಸ್ವಾಗತ ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ತ.ನಾಡು ಮಹಿಳೆಯರ ಬ್ಯಾಂಕ್‌ ಖಾತೆಗೆ ಸ್ಟಾಲಿನ್‌ ಬೆಳ್ಳಂಬೆಳಗ್ಗೆ 5000 ರು. ಅಚ್ಚರಿ!
ಅಮೆರಿಕ ಡೀಲ್‌ ವಿರುದ್ಧ ದೇಶವ್ಯಾಪಿ ಕಾಂಗ್ರೆಸ್‌, ರೈತರ ಅಭಿಯಾನ?