ಪ್ರಾಣಕೊಟ್ಟು ಹೋರಾಡಿ ಪಕ್ಷ ಗೆಲ್ಲಿಸುತ್ತೇವೆ: ಎಚ್‌.ಡಿ.ದೇವೇಗೌಡ

By Govindaraj S  |  First Published Dec 4, 2022, 9:54 PM IST

2023ರ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧವಾಗಿದ್ದು, ನಮ್ಮ ಪ್ರಾಣ ಕೊಟ್ಟು ಹೋರಾಡಿ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡುತ್ತೇವೆ. ಇದನ್ನು ಇಂದೇ ರಕ್ತದಲ್ಲಿ ಬರೆದುಕೊಡುತ್ತೇವೆ ನೀವು ನಿಮ್ಮ ಆರೋಗ್ಯ ನೋಡಿಕೊಳ್ಳಿ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಜೆಡಿಎಸ್‌ ಕಾರ‍್ಯಕರ್ತರು ವಾಗ್ದಾನ ನೀಡಿದರು. 


ಚನ್ನಪಟ್ಟಣ (ಡಿ.04): 2023ರ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧವಾಗಿದ್ದು, ನಮ್ಮ ಪ್ರಾಣ ಕೊಟ್ಟು ಹೋರಾಡಿ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡುತ್ತೇವೆ. ಇದನ್ನು ಇಂದೇ ರಕ್ತದಲ್ಲಿ ಬರೆದುಕೊಡುತ್ತೇವೆ ನೀವು ನಿಮ್ಮ ಆರೋಗ್ಯ ನೋಡಿಕೊಳ್ಳಿ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಜೆಡಿಎಸ್‌ ಕಾರ‍್ಯಕರ್ತರು ವಾಗ್ದಾನ ನೀಡಿದರು. ಸಿಂ.ಲಿಂ.ನಾಗರಾಜು ಅಂತಿಮ ದರ್ಶನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರನ್ನು ನೋಡಿ ಭಾವುಕರಾದ ಕಾರ‍್ಯಕರ್ತರು ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಕೈಬಿಡದಂತೆ ದೇವೇಗೌಡರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾರ‍್ಯಕರ್ತರು, ನೀವು ನಿಮ್ಮ ಆರೋಗ್ಯ ನೋಡಿಕೊಂಡು ನೆಮ್ಮದಿಯಾಗಿರುವ ಅಪ್ಪಾಜಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಅನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿಯವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವುದು ನಮ್ಮ ಜವಬ್ದಾರಿ. ಇದಕ್ಕೆ ಕಬ್ಬಾಳಮ್ಮನೇ ಸಾಕ್ಷಿ. ಯಾರು ಏನೇ ಮಾಡಿದರು ಎಚ್‌ಡಿಕೆ ಸಿಎಂ ಆಗುವುದನ್ನು ತಪ್ಪಿಸಲು ಆಗುವುದಿಲ್ಲ ಎಂದು ಅಭಯ ನೀಡಿದರು. ಕಾರ‍್ಯಕರ್ತರ ಮಾತು ಕೇಳಿ ದೇವೇಗೌಡರು ಭಾವುಕರಾಗಿ ಕಾರ‍್ಯಕರ್ತರಿಗೆ ಕೈಮುಗಿದು ಅಲ್ಲಿಂದ ತೆರಳಿದರು.

Tap to resize

Latest Videos

ದಲಿತ​ರನ್ನು ಸಿಎಂ ಮಾಡಲು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ: ಸಂಸದ ಸು​ರೇಶ್‌

ಮುಂದಿನ ದಿನಗಳಲ್ಲಿ ಎಚ್‌ಡಿಕೆ ಭೇಟಿ: ರಾಜ್ಯದ ಬಡ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪಂಚರತ್ನ ಯೋಜನೆ ರೂಪಿಸಿದ್ದು, ಅದಕ್ಕಾಗಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಅವರು ಸಿಂ.ಲಿಂ.ನಾಗರಾಜು ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಅವರು ಭೇಟಿ ನೀಡಿಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದರು. 

ಜೆಡಿಎಸ್‌ ಮುಖಂಡ ಸಿಂ.ಲಿಂ. ನಾಗರಾಜು ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸಲು ಎಚ್‌ಡಿಕೆ ಶ್ರಮಿಸುತ್ತಿದ್ದಾರೆ. ಕೋಲಾರ, ಮುಳಬಾಗಿಲು, ತುಮಕೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ಸಾಗುತ್ತಿರುವುದರಿಂದ ಕುಮಾರಸ್ವಾಮಿ ಅಲ್ಲಿದ್ದಾರೆ. ಅವರು ಬಾರಲಿಕ್ಕೆ ಆಗದ ಕಾರಣ ಇಂದು ನೀವು ಹೋಗಿ ಮುಂದಿನ ದಿನಗಳಲ್ಲಿ ನಾನು ಹೋಗಿ ಅವರ ಕುಟುಂಬದವರನ್ನು ಭೇಟಿಯಾಗಿ ಬರುತ್ತೇನೆ ಎಂದು ಅವರು ತಿಳಿಸಿದ್ದಾರೆ ಎಂದರು. 

Ramanagara: ಮಾಗಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿಯೇ ಇಲ್ಲ!

ಸಿಂ.ಲಿಂ.ನಾಗರಾಜು ನನಗೆ ಆತ್ಮೀಯರಾಗಿದ್ದರು. ಈಗೊಂದು ಎರಡು ವಾರಗಳ ಹಿಂದೆ ನಮ್ಮ ಮನೆಗೆ ಬಂದಿದ್ದ ಅವರು ಯಾವುದೋ ಮದುವೆ ಕಾರ‍್ಯಕ್ರಮಕ್ಕೆ ಬರಲೇಬೇಕು ಎಂದು ಆಹ್ವಾನಿಸಿದ್ದರು. ನಾನು ಬರುತ್ತೇನೆ ಎಂದು ತಿಳಿಸಿದ್ದೆ. ಆದರೆ, ಅವನ ಪಾರ್ಥೀವ ಶರೀರ ನೋಡಲು ಬರುವಂತಾಗಿದೆ. ಅವರ ಸಾವು ಒಂದು ದುರಂತ. ಈ ವಯಸ್ಯಿನಲ್ಲಿ ಇಂಥವುಗಳನ್ನು ನೋಡಬೇಕಾಗಿ ಬಂದಿರುವುದು ನೋವಿನ ಸಂಗತಿ. ಆ ಭಗವಂತ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

click me!