
ಶಿವಮೊಗ್ಗ(ಏ.23): ರಾಜ್ಯದಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಪ್ರಧಾನಿ ಮೋದಿಯವರ ಆಶೀರ್ವಾದದಿಂದ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು(ಮಂಗಳವಾರ) ಜಿಲ್ಲೆಯ ಶಿಕಾರಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ತೇವೆ ಎಂಬ ವಿಶ್ವಾಸ ಇದೆ. ರಾಘಣ್ಣ ಕಳೆದ ಬಾರಿಕ್ಕಿಂತ ಹೆಚ್ಚು ಅಂತರದಿಂದ ಗೆಲ್ತಾರೆ. ಈ ಭಾಗದ ಜನರ ರಾಘವೇಂದ್ರ ಅವರಿಗೆ ಆಶೀರ್ವಾದ ಮಾಡ್ತಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ 20 ಕ್ಷೇತ್ರ ಅಲ್ಲ, ಗೆಲ್ಲುವ 4 ಕ್ಷೇತ್ರದ ಹೆಸರು ಹೇಳಲಿ ನೋಡೋಣ; ಸಿಎಂಗೆ ಬಿಎಸ್‌ವೈ ಟಾಂಗ್
ಮತ್ತೊಮ್ಮೆ ಮೋದಿಯವರನ್ನ ಪ್ರಧಾನಿ ಮಾಡಬೆಕೆಂದು ಎಲ್ಲರ ಅಪೇಕ್ಷೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ದೇವೇಗೌಡರ ಜೊತೆ ಒಟ್ಟಾಗಿ ಹೋಗ್ತಾ ಇರೋದು ದೊಡ್ಡ ಶಕ್ತಿಯಾಗಿದೆ. ದೇಶದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಶ್ವರಪ್ಪ ಉಚ್ಚಾಟನೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಯಡಿಯೂರಪ್ಪ, ಈ ಬಗ್ಗೆ ನಾನು ಮಾತಾನಾಡುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.