
ಶಿವಮೊಗ್ಗ (ಏ.26): ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಮತದಾನವಾಗಿದೆ. ಅಲ್ಲಿನ ಜನರು ಬಿಜೆಪಿ ಪರ ಉತ್ತಮ ನಿಲುವು ಹೊಂದಿದ್ದರು. ಹೀಗಾಗಿ ಅಲ್ಲಿ ಬಿಜೆಪಿಗೆ ಗೆಲ್ಲಲಿದೆ. ಇನ್ನು ಉಪಚುನಾವಣೆ ನಡೆದಿರುವ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರರನ್ನು ಭಯೋತ್ಪಾದಕ ಎಂದು ಕರೆಯ ಬಾರದಾಗಿತ್ತು. ಕ್ಷಮೆ ಕೇಳಿ ಇದನ್ನು ಕೊನೆಗಾಣಿಸಬೇಕು. ಮೇ 4ರ ನಂತರ ಸಿಎಂ ಬದಲಾವಣೆ ವಿಷಯವೂ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರವಾಗಿದ್ದು, ಕಾದು ನೋಡೋಣ ಎಂದು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಪ.ಬಂಗಾಳ ವಿಧಾನಸಭೆ ಚುನಾವಣೆಗಳು 2 ಹಂತದಲ್ಲಿ ನಡೆಯಲಿವೆ. ಈಗಾಗಲೇ ಎಂದರೆ ಏ.23 ರಂದು ನಡೆದಿದ್ದು ಮುಂದಿನ ಹಂತ ಏ.29ಕ್ಕೆ ನಡೆಯಲಿವೆ. 294 ಕ್ಷೇತ್ರಗಳನ್ನು ರಾಜ್ಯ ಹೊಂದಿದೆ. ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.