
ಬೆಂಗಳೂರು (ಜು.08): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದಿಂದ ದೂರ ಇರುವಂತೆ ಪಕ್ಷದ ವರಿಷ್ಠರು ನೀಡಿದ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಸಚಿವ ಸ್ಥಾನವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂಬ ಮಾತು ಬಿಜೆಪಿ ಪಾಳೆಯದಿಂದ ಕೇಳಿಬಂದಿದೆ.
ಯಡಿಯೂರಪ್ಪ ಅವರಿಗೆ ಶೋಭಾ ಕರಂದ್ಲಾಜೆ ಆಪ್ತರು ಎಂಬ ಕಾರಣಕ್ಕಾಗಿಯೇ ಅವರ ವಿರುದ್ಧ ಹಿಂದೆ ಸಾಕಷ್ಟುಆಪಾದನೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಂಘ ಪರಿವಾರದ ಮುಖಂಡರೂ ಸೇರಿದಂತೆ ಪಕ್ಷದ ನಾಯಕರು ಯಡಿಯೂರಪ್ಪ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ದೂರವಿರಿ ಎಂಬ ಸೂಚನೆ ನೀಡಿದ್ದರು.
ಅವಿಭಜಿತ ದ.ಕ. ಮೊದಲ ಕೇಂದ್ರ ಸಚಿವೆ ಕರಂದ್ಲಾಜೆ! ..
ಆ ಬಳಿಕ ಶೋಭಾ ಅವರು ಬೆಂಗಳೂರಿಗೆ ಆಗಮಿಸುವುದೇ ಅಪರೂಪವಾಗಿತ್ತು. ಬಂದರೂ ಅವರು ಮುಖ್ಯಮಂತ್ರಿಗಳ ಕಚೇರಿ ಅಥವಾ ನಿವಾಸದತ್ತ ತಲೆ ಹಾಕುತ್ತಿರಲಿಲ್ಲ. ಆ ಮೂಲಕ ವರಿಷ್ಠರು ನೀಡಿದ ಸೂಚನೆಯನ್ನು ಕರಾರುವಕ್ಕಾಗಿ ಪಾಲಿಸಿದರು.
ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ? .
ಜತೆಗೆ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಶೋಭಾ ಅವರು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರಿಂದ ಪಕ್ಷದ ವರಿಷ್ಠರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಲ್ಲದೆ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ವಿವಿಧ ಖಾತೆಗಳನ್ನು ನಿಭಾಯಿಸಿದ ಶೋಭಾ ಕರಂದ್ಲಾಜೆ ಅವರು ತಾವೊಬ್ಬ ಸಮರ್ಥ ಆಡಳಿತಗಾರ್ತಿ ಎಂಬುದನ್ನು ನಿರೂಪಿಸಿದ್ದರು. ಈ ಎಲ್ಲದರ ಹಿನ್ನೆಲೆಯಲ್ಲಿ ಇದೀಗ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.