ಸಂಸದ ಡಿ.ಕೆ.ಸುರೇಶ್ ಆಡಿದ ಮಾತಿನಲ್ಲಿ ತಪ್ಪೇನಿದೆ?: ಶಾಸಕ ಎಚ್.ಸಿ.ಬಾಲಕೃಷ್ಣ

By Govindaraj S  |  First Published Feb 18, 2024, 8:32 PM IST

ಉಚಿತ ಯೋಜನೆಗಳನ್ನು ಪಡೆದುಕೊಂಡಿದ್ದೀರಿ ನಮ್ಮ ಪಕ್ಷಕ್ಕೆ ಮತ ಹಾಕಿ. ಇಲ್ಲದೇ ಹೋದರೆ ಗ್ಯಾರಂಟಿ ಯೋಜನೆ ರದ್ದಾಗಬೇಕು ಅಲ್ಲವಾ? ಎಂದು ನಾನು ಕೇಳಿದ ಪ್ರಶ್ನೆಗೆ ಏನೋ ನಾನು ಮಹಾ ತಪ್ಪು ಮಾತಾಡಿದ್ದೇನೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಯ್ತು. ನಾನು ಕೇಳಿದ್ದರಲ್ಲಿ ತಪ್ಪೇನಿತ್ತು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಪ್ರಶ್ನಿಸಿದರು.
 


ಮಾಗಡಿ (ಫೆ.18): ಉಚಿತ ಯೋಜನೆಗಳನ್ನು ಪಡೆದುಕೊಂಡಿದ್ದೀರಿ ನಮ್ಮ ಪಕ್ಷಕ್ಕೆ ಮತ ಹಾಕಿ. ಇಲ್ಲದೇ ಹೋದರೆ ಗ್ಯಾರಂಟಿ ಯೋಜನೆ ರದ್ದಾಗಬೇಕು ಅಲ್ಲವಾ? ಎಂದು ನಾನು ಕೇಳಿದ ಪ್ರಶ್ನೆಗೆ ಏನೋ ನಾನು ಮಹಾ ತಪ್ಪು ಮಾತಾಡಿದ್ದೇನೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಯ್ತು. ನಾನು ಕೇಳಿದ್ದರಲ್ಲಿ ತಪ್ಪೇನಿತ್ತು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಪ್ರಶ್ನಿಸಿದರು. ಮೊದಲೆಲ್ಲಾ ಧರ್ಮಸ್ಥಳಕ್ಕೆ ಕೆಲವು ಪಕ್ಷದ ಮುಖಂಡರು ಬಸ್ ಮಾಡಿ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದರು. ಅಲ್ಲಿ ದೇವರ ಬಳಿ ಪ್ರಮಾಣ ಮಾಡಿಸಿ ನಮಗೇ ಮತ ಹಾಕಬೇಕೆಂದು ಹೇಳಿಸುತ್ತಿದ್ದರು. 

ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಇಂತಹ ಆಣೆ ಪ್ರಮಾಣಗಳ ನಾಟಕ ನಿಂತು ಹೋಯಿತು ಎಂದು ಹೇಳಿದರು. ನಮ್ಮ ತೆರಿಗೆ ಹಣದ ಪಾಲು ನಮ್ಮ ರಾಜ್ಯಕ್ಕೆ ಸರಿಯಾಗಿ ಕೊಡದೆ ಇದ್ದಾಗ ದಕ್ಷಿಣ ಭಾರತಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದೀರಿ. ಆಗ ನಮ್ಮದೇ ದೇಶ ಮಾಡಿ ಎಂದು ಆಕ್ರೋಶಗೊಂಡು ಡಿ.ಕೆ.ಸುರೇಶ್ ಅವರು ಕೇಳಿದ್ದರಲ್ಲಿ ತಪ್ಪೇನಿದೆ. ಅವರು ನಮ್ಮ ರಾಜ್ಯದ ಹಿತದೃಷ್ಟಿಯಿಂದ ಹಾಗೆ ಕೇಳಿದ್ದಾರೆ ಎಂದು ಹೇಳಿದರು. ಕೆಪಿಸಿಸಿ ವಕ್ತಾರ ನಿಕೇತನ್ ರಾಜ್ ಮೌರ್ಯ ಮಾತನಾಡಿ, ಕಾಂಗ್ರೆಸ್ಸಿನ ಎಲ್ಲಾ ಭಾಗ್ಯಗಳ ಫಲಾನುಭವವನ್ನು ತಾಯಂದಿರು ಪಡೆದಿದ್ದೀರಿ. ಈಗ ಅದರ ಋಣ ತೀರಿಸಲು ಕಾಂಗ್ರೆಸ್ಸಿಗೆ ಮತ ಹಾಕಬೇಕು. 

Tap to resize

Latest Videos

ವಿಶ್ವಕ್ಕೆ ಸಮಾನತೆ ಸಾರಿದ ಬಸವೇಶ್ವರ: ಶಾಸಕ ಬಸವರಾಜ ರಾಯರಡ್ಡಿ

15 ಲಕ್ಷ ನೀಡುತ್ತೇನೆ ಎಂದ ಮೋದಿಯವರ ಮಾತುಗಳನ್ನು ನಂಬಿದ್ದಿರಿ. ಆದರೆ ಆ ಹಣ ನಿಮ್ಮ ಬ್ಯಾಂಕಿನ ಅಕೌಂಟಿಗೆ ಬರಲಿಲ್ಲ. ಆದರೆ ನಮ್ಮ ಸರ್ಕಾರ ಮಾತು ಕೊಟ್ಟಂತೆ ಪ್ರತಿ ತಿಂಗಳು 2ಸಾವಿರ ನಿಮ್ಮ ಅಕೌಂಟಿಗೆ ಹಾಕುತ್ತಿದ್ದೇವೆ ಎಂದು ಹೇಳಿದರು. ಕುಸುಮಾ ಹನುಮಂತರಾಜು, ಸುಧೀರ್ ಕುಮಾರ್ ಮಳಲಿ, ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ, ಕಲ್ಪನಾಶಿವಣ್ಣ, ಸಮಾಜ ಸೇವಕಿ ಅಕ್ಕಯ್ಯಪದ್ಮಶಾಲಿ ಮಾತನಾಡಿದರು. ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸುರೇಶ್, ಚಿಕ್ಕಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶಿವಪ್ರಸಾದ್, ಜಿಪಂ ಮಾಜಿ ಅಧ್ಯಕ್ಷ ಅಶೋಕ್, ಕುದೂರು ಗ್ರಾಪಂ ಉಪಾಧ್ಯಕ್ಷೆ ರಮ್ಯಜ್ಯೋತಿ, ಸಂಧ್ಯ, ಮಂಜೇಶ್ ಕುಮಾರ್, ಚಂದ್ರಶೇಖರ್, ಯತೀಶ್, ಹೊನ್ನಪ್ಪ, ಶಶಾಂಕ್, ವಿನಯ್ ಗೌಡ, ಲೋಕೇಶ್, ರೇಖಾ ಮತ್ತಿತರರು ಉಪಸ್ಥಿತರಿದ್ದರು.

ನಿಮ್ ಗಂಡನಿಗೆ ಇಟ್ಟಿನ ದೊಣ್ಣೆಲಿ ಹೊಡೆಯಿರಿ: ಗೃಹಲಕ್ಷ್ಮಿ ಯೋಜನಾ ಫಲಾನುಭವಿಗಳ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ವಿಧಾನಪರಿಷತ್ತಿನ ಸದಸ್ಯ ರವಿ, ಇಷ್ಟೊಂದು ಉಚಿತ ಯೋಜನೆಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಯಜಮಾನವರು ವೋಟ್ ಹಾಕದೆ ಬೇರೆ ಪಕ್ಷಕ್ಕೆ ಓಟ್ ಹಾಕ್ತೀನಿ ಅಂದರೆ ಅವರಿಗೆ ಮುದ್ದೆ ತಿರುವೋ ಕೋಲಿನಲ್ಲಿ ಒಡೆದು ನಮ್ಮ ಪಕ್ಷಕ್ಕೆ ಮತ ಹಾಕಿಸಬೇಕು ಎಂದರು. ಆಗ ಮರದ ಅಡಿಯಲ್ಲಿ ಕುಳಿತಿದ್ದ ಮಹಿಳೆಯರು ಚಪ್ಪಾಳೆ ಹೊಡೆಯಲಿಲ್ಲ. ಅವರನ್ನು ನೋಡಿದ ಎಂಎಸ್ಸಿ ರವಿ ಯಾಕ್ರಮ್ಮಾ, ನೀವು ಸರ್ಕಾರದ ಉಚಿತ ಯೋಜನೆಗಳನ್ನು ಪಡೆಯುತ್ತಿಲ್ಲವಾ? ಹಾಗಿದ್ದರೆ ಹೊಡೀರಿ ಚಪ್ಪಾಳೆ ಎಂದು ಕೇಳಿ ಹೊಡೆಸಿಕೊಂಡರು.

ಕೊಟ್ಟ ಮಾತಿನಂತೆ ನಡೆಯುವ ಕಾಂಗ್ರೆಸ್ ಸರ್ಕಾರ: ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಇಡೀ ದೇಶದಲ್ಲಿ ಸ್ತ್ರೀಶಕ್ತಿ ಯೋಜನೆಯನ್ನು ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರ. ಈ ಮೂಲಕ ಮಹಿಳಾ ಸಬಲೀಕರಣಕ್ಕೆ ದುಡಿದಿದ್ದೇವೆ. ನಮ್ಮ ಹೆಣ್ಣುಮಕ್ಕಳು ತಾವು ಹಾಕಿಕೊಳ್ಳುವ ಬ್ಲೌಸ್‌ಗೆ, ಸೀರೆಗೆ, ಚಪ್ಪಲಿಗೆ, ಖಾರದಪುಡಿಗೂ ಜಿಎಸ್‌ಟಿ ಕಟ್ತೀರಿ. ಆದರೆ ಆ ಹಣ ನಮಗೆ ಕೇಂದ್ರ ಸರ್ಕಾರದವರು ಕೊಡದೆ ಅನ್ಯಾಯ ಮಾಡುತ್ತಿದ್ದಾರೆ.
-ಡಿ.ಕೆ.ಸುರೇಶ್, ಸಂಸದರು, ಬೆಂಗಳೂರು ಗ್ರಾಮಾಂತರ ಕ್ಷೇತ್ರ

click me!