
ಅರಕಲಗೂಡು (ಏ.20): ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಅರಕಲಗೂಡಿನಲ್ಲಿ ನಡೆಯುತ್ತಿರುವ ಜೈ ಭೀಮ್ ಕಪ್ ಪಂದ್ಯಾವಳಿ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿ, ರಾಜ್ಯದಲ್ಲಿ ಜಾತಿಗಣತಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ತಕ್ಷಣ ಮಾಡೋ ಅಂತ ವಿಚಾರ ಅಲ್ಲ ಟೈಮ್ ತೆಗೆದುಕೊಳ್ಳುತ್ತೆ, ಬಹಳಷ್ಟು ಸಭೆಗಳು ಆಗೋದಿದೆ, ಟೈಮ್ ಬೇಕು, ಈಗಲೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ, ಮನೆಗೆ ಹೋಗಿ ಸಹಿ ಮಾಡಿಸಿದ್ದಾರೆ.
ಲೋಪಗಳ ಬಗ್ಗೆ ಅಧಿಕಾರಿಗಳು ಸರಿಪಡಿಸುತ್ತಾರೆ, ಇದರಲ್ಲಿ ರಾಜಕೀಯ ಲಾಭ, ನಷ್ಟ ಇಲ್ಲ, ಇದರಿಂದ ಪಕ್ಷಕ್ಕೆ ಲಾಭ ಆಗೋದಿಲ್ಲ, ಜಾತಿ ಗಣತಿ ವಿಚಾರ ಇನ್ನು ಸರಿಯಾದ ನಿರ್ಧಾರಕ್ಕೆ ಬಂದಿಲ್ಲ ಜಾತಿ ಗಣತಿ ಮಾಡಿಲ್ಲ, ಜಾತಿಗಣತಿ ವಿಚಾರ ಇನ್ನು ಆರು ತಿಂಗಳು ಆಗಬಹುದು, ಈಗಲೇ ನಿರ್ಧಾರ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ಸರ್ಕಾರ ಬೀಳಿಸುತ್ತಾರೆ ಎಂಬ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, "ಮಲ್ಲಿಕಾರ್ಜುನ್ ಖರ್ಗೆ ಹೇಳಿರುವುದು ಸತ್ಯ ಇದೆ. ಬಾರ್ಡರ್‌ನಲ್ಲಿ ಇದ್ದೋರು ಮಲಗಲಿಕ್ಕೆ ಆಗೋದಿಲ್ಲ. ಡೇ ಒನ್‌ನಿಂದ ಸರ್ಕಾರ ಬೀಳಿಸಬೇಕು ಅಂತ ಇದೆ. ಅದ್ರೆ ನಾವು ಹುಷಾರಾಗಿರಬೇಕು" ಎಂದು ಹೇಳಿದರು.
ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಐದು ವರ್ಷಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಸುಮಾರು 250 ಸರ್ಕಾರಿ ಶಾಲೆಯ ನೂತನ ಕಟ್ಟಡಗಳನ್ನು ಕಟ್ಟಬೇಕೆಂದು ನಿರ್ಧರಿಸಿದ್ದು, ಈಗಾಗಲೇ ಹುಕ್ಕೇರಿ ತಾಲೂಕಿನ ಗ್ರಾಮದಲ್ಲಿ 50 ಕಟ್ಟಡಗಳನ್ನು ಕಟ್ಟಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಬೆಳಗಾವಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಎರಡನೇ ಬಾರಿ ರಾಜ್ಯಾಧ್ಯಾಕ್ಷರಾಗಿ ಆಯ್ಕೆಯಾದ ಸಿ.ಎಸ್.ಷಡಾಕ್ಷರಿ ರವರ ಸನ್ಮಾನ ಸಮಾರಂಭ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಳಗಾವಿ ತಾಲೂಕಿನ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಗುರುಸ್ವಂದನ ಆದರ್ಶ ಶಿಕ್ಷಕಿ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕರಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ
ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ನಮ್ಮ ಇಲಾಖೆಯಿಂದ 10 ರಿಂದ 15 ಶಾಲಾ ಕಟ್ಟಡಗಳನ್ನು ನಿರ್ಮಿಸಲು ಅನುದಾನ ಒದಗಿಸಲಾಗಿದೆ. ಹೀಗಾಗಿ ನಿಮ್ಮ ಸಂಘಟನೆ ಮೂಲಕ ಸರ್ಕಾರಕ್ಕೆ ಸಲಹೆ, ಸೂಚನೆಗಳನ್ನು ನೀಡಿದರೆ, ಬಜೆಟ್‌ನಲ್ಲಿ ಹಣ ಒದಗಿಸಲು ಸರ್ಕಾರಕ್ಕೆ ಅನುಕೂಲವಾಗುತ್ತದೆ ಎಂದರು. ಶಿಕ್ಷಣ, ಆರೋಗ್ಯಕ್ಕೆ ಸರ್ಕಾರ ಸೇರಿದಂತೆ ಸರ್ವರೂ ಆದ್ಯತೆ ನೀಡಬೇಕಿದೆ. ವಿದ್ಯಾವಂತ ಸಮಾಜ ನಿರ್ಮಾಣ ಆಗಬೇಕೆಂದರೆ ಶಿಕ್ಷಕರ ಪಾತ್ರ ಮಹತ್ವದು ಎಂದ ಸಚಿವರು, ಸಾಧಕಿ ಶಿಕ್ಷಕಿಯರಿಗೆ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಹೆಸರಿನಲ್ಲಿ ಪ್ರಶಸ್ತಿ ನೀಡುವಂತೆ ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.