ಲಿಂಗಾಯತರಿಗೆ ಕಾಂಗ್ರೆಸ್‌ ಯಾವ ಹುದ್ದೆ ಕೊಡುತ್ತೆ?: ಬೊಮ್ಮಾಯಿ

By Kannadaprabha NewsFirst Published May 18, 2023, 3:40 AM IST
Highlights

ಕಾಂಗ್ರೆಸ್‌ ಪಕ್ಷದ ನಾಯಕರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆಂದು ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್‌ ನೀಡಿದ್ದಾರೆ. 

ಬೆಂಗಳೂರು (ಮೇ.18): ಕಾಂಗ್ರೆಸ್‌ ಪಕ್ಷದ ನಾಯಕರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆಂದು ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್‌ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನಕ್ಕೂ ಮೊದಲು ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್‌ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆಂದು ಕಾದು ನೋಡೋಣ ಎಂದರು.

ಜನರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷ ಜನರು ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಆಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ. ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸುವ ಮೂಲಕ ಜನರ ಸೇವೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು.

Latest Videos

ನನ್ನ ಗೆಲುವಿನಲ್ಲಿ ಹೊನ್ನಾವರದ ಮತದಾರರ ಪಾತ್ರ ದೊಡ್ಡದು: ಶಾಸಕ ದಿನಕರ ಶೆಟ್ಟಿ

ಸಾಥ್‌ ನೀಡಿದ ಅಧಿಕಾರಿಗಳಿಗೆ ಬೊಮ್ಮಾಯಿ ಧನ್ಯವಾದ: ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ನಡೆಸಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಡಳಿತಾವಧಿಯಲ್ಲಿ ದಿಟ್ಟತೀರ್ಮಾನ ಕೈಗೊಳ್ಳಲು ಸಹಕಾರ ನೀಡಿದ್ದಕ್ಕೆ ಧನ್ಯವಾದಗಳನ್ನು ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ಈ ವೇಳೆ ನನ್ನ ಆಡಳಿತವಧಿಯಲ್ಲಿ ದಿಟ್ಟನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು. ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ, ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

‘ನಾನು ಆಧಿಕಾರಕ್ಕೆ ಬಂದಾಗ ಕೋವಿಡ್‌, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಾವು ಅನೇಕ ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೋಗ ನೀತಿ, ಕೈಗಾರಿಕಾ ನೀತಿ ಎಲ್ಲಾ ಹೊಸ ಯೋಜನೆಗಳನ್ನು ತರಲು ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು’ ಎಂದರು.

ದತ್ತರವರ ನೇತೃತ್ವದಲ್ಲಿ ಕಾರ್ಯಕರ್ತರ ಸಜ್ಜುಗೊಳಿಸಲು ಸಂಸದ ಪ್ರಜ್ವಲ್‌ ಕರೆ

‘ನಾವು ಐದು ವರ್ಷಕ್ಕೆ ಬರುವವರು, ಅಧಿಕಾರಿಗಳು ಸುದೀರ್ಘ ಅಧಿಕಾರದಲ್ಲಿರುವವರು. ರಾಜ್ಯದ ಏಳ್ಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಎಂದು ನಾನು ಗಟ್ಟಿದನಿಯಲ್ಲಿ ಹೇಳಿರಬಹುದು. ಆದರೆ, ಯಾವುದೇ ವೈಯಕ್ತಿಕ ಅಭಿಪ್ರಾಯ ಇರಲಿಲ್ಲ. ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಜೆಎಸ್‌ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ಕರ್ನಾಟಕ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ’ ಎಂದು ಹೇಳಿದರು.

click me!