ಲೋಕ ಕದನ 2024: ಹ್ಯಾಟ್ರಿಕ್ ವೀರ ಡಿಕೆಸು ವಿರುದ್ಧ ಮೈತ್ರಿ ಅಭ್ಯರ್ಥಿ ಯಾರು?

Published : Jan 14, 2024, 08:41 AM IST
ಲೋಕ ಕದನ 2024: ಹ್ಯಾಟ್ರಿಕ್ ವೀರ ಡಿಕೆಸು ವಿರುದ್ಧ ಮೈತ್ರಿ ಅಭ್ಯರ್ಥಿ ಯಾರು?

ಸಾರಾಂಶ

ಈ ಕ್ಷೇತ್ರದಿಂದ ಪ್ಯಾಟ್ರಿಕ್ ಗೆಲುವು ಸಾಧಿಸಿರುವ ಸಂಸದ ಡಿ.ಕೆ.ಸುರೇಶ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದಲ್ಲಿ ಗೆಲುವು ಸಾಧಿಸಿದ ಏಕೈಕ ಸಂಸದ ಕೂಡ ಹೌದು. ಅವರು ಮತ್ತೊಮ್ಮೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೂ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸುರೇಶ್‌ವಲಸೆ ಹೋಗಿ, ಕುಸುಮಾ ಹನುಮಂತರಾ ಯಪ್ಪ ಅವರಿಗೆ ಸ್ಪರ್ಧಿಸಲು ಇಲ್ಲಿ ಅವಕಾಶ ಕಲ್ಪಿಸುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳೆಯದಲ್ಲಿಯೇ ಕೇಳಿ ಬರುತ್ತಿವೆ.

ಎಂ.ಅಪ್ರೋಜ್ ಖಾನ್

ರಾಮನಗರ(ಜ.14):  ಲೋಕಸಭಾ ಚುನಾವಣೆ ನಡೆದಾಗಲೆಲ್ಲಾ ಮೈತ್ರಿ, ಒಳ ಒಪ್ಪಂದ ಹಾಗೂ ಶತ್ರುವಿನ ಕತ್ರು ಮಿತ್ರರಾಗುವುದಕ್ಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸಾಕ್ಷಿಯಾಗುತ್ತಲೇ ಬಂದಿದೆ. ಈ ಬಾರಿಯೂ ಅಂತಹುದೇ ವಾತಾವರಣ ನಿರ್ಮಾಣಗೊಂಡಿದೆ.

1967ರಲ್ಲಿ ಅಸ್ತಿತ್ವಕ್ಕೆ ಬಂದ ಕನಕಪುರ ಲೋಕ ಸಭಾ ಕ್ಷೇತ್ರ ಆರಂಭದಿಂದ 1996ರ ತನಕವೂ ಕಾಂಗ್ರೆಸ್‌ನ ನೆಲೆವೀಡಾಗಿತ್ತು. ಬಳಿಕ ಇದು ಬಹುತೇಕ ಕಾಂಗ್ರೆಸ್ - ಜೆಡಿಎಸ್ ಹಣಾಹಣಿಗೆ ವೇದಿಕೆಯಾಯಿತು. 2008ರ ಕ್ಷೇತ್ರ ಪುನರ್ ವಿಂಗಡಣೆ ನಂತರ ಕನಕಪುರ ಲೋಕಸಭಾ ಕ್ಷೇತ್ರದ ಬದಲು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಈಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ತುಮಕೂರು ಜಿಲ್ಲೆಯ ಕುಣಿಗಲ್ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜರಾಜೇಶ್ವರಿನಗರ, ಬೆಂಗ ಳೂರು ದಕ್ಷಿಣ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಈ ಕ್ಷೇತ್ರದಲ್ಲಿ ಇಲ್ಲಿವರೆಗೆ ಒಟ್ಟು 14 ಸಾರ್ವ ತ್ರಿಕ ಮತ್ತು 2 ಉಪಚುನಾವಣೆಗಳು ನಡೆದಿವೆ. ಆ ಪೈಕಿ, ಕಾಂಗ್ರೆಸ್-12, ಜೆಡಿಎಸ್-03, ಬಿಜೆಪಿ-01 ಬಾರಿ ಗೆಲುವು ಸಾಧಿಸಿದೆ. ಈಗ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಬೆಂ. ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಕಸಿದು ಕೊಳ್ಳಲು ಜೆಡಿಎಸ್ -ಬಿಜೆಪಿ ಪ್ರಯತ್ನಿಸುತ್ತಿದೆ.

ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು!

2023ರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ರಾಮನಗರ ಮಾಗಡಿ, ಕನಕಪುರ, ಕುಣಿಗಲ್, ಆನೇಕಲ್ ವಿಧಾನಸಭಾ ಕ್ಷೇತ್ರಗ ಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದರೆ, ರಾಜ ರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿದೆ.

ಈ ಕ್ಷೇತ್ರದಿಂದ ಪ್ಯಾಟ್ರಿಕ್ ಗೆಲುವು ಸಾಧಿಸಿರುವ ಸಂಸದ ಡಿ.ಕೆ.ಸುರೇಶ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದಲ್ಲಿ ಗೆಲುವು ಸಾಧಿಸಿದ ಏಕೈಕ ಸಂಸದ ಕೂಡ ಹೌದು. ಅವರು ಮತ್ತೊಮ್ಮೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೂ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸುರೇಶ್‌ವಲಸೆ ಹೋಗಿ, ಕುಸುಮಾ ಹನುಮಂತರಾ ಯಪ್ಪ ಅವರಿಗೆ ಸ್ಪರ್ಧಿಸಲು ಇಲ್ಲಿ ಅವಕಾಶ ಕಲ್ಪಿಸುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳೆಯದಲ್ಲಿಯೇ ಕೇಳಿ ಬರುತ್ತಿವೆ.

ಚಿಕ್ಕಬಳ್ಳಾಪುರ ರಣಕಣ: ಮತ್ತೊಮ್ಮೆ ಕಾಂಗ್ರೆಸ್‌ ಅಭ್ಯರ್ಥಿಯಾಗಲು ಮೊಯ್ಲಿ ಕಸರತ್ತು..!

ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವ‌ರ್ ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ ನಾರಾಯಣ ಗೌಡ ನಡುವೆ ಪೈಪೋಟಿ ನಡೆದಿದೆ. ಕಳೆದ ಚುನಾವಣೆಯಲ್ಲಿ ಯೋಗೇಶ್ವರ್‌ಪುತ್ರಿ ನಿಶಾ ಯೋಗೇಶ್ವರ್ ಹೆಸರು ಕೂಡ ಚಾಲ್ತಿಗೆ ಬಂದಿತ್ತು. ಅವರಿಗ ಡಿ.ಕೆ.ಶಿವಕುಮಾ‌ರ್ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಭೇಟಿಯ ಉದ್ದೇಶ ಗೊತ್ತಾಗಿಲ್ಲ, ಒಂದು ವೇಳೆ ಬಿಜೆಪಿ ಸ್ಪರ್ಧೆಗೆ ಹಿಂದೇಟು ಹಾಕಿದರೆ ತಮಗೆ ಅವಕಾಶ ನೀಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಜೆಡಿಎಸ್ ವರಿಷ್ಠರಲ್ಲಿ ಕೇಳಿಕೊಂಡಿದ್ದಾರೆ. ಅಲ್ಲದೆ, ಕುಮಾರಸ್ವಾಮಿ ಸ್ಪರ್ಧೆ ಬಗ್ಗೆಯೂ ಗುಸು, ಗುಸು ಇದೆ. ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವ‌ರ್ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ, ಇದು ಪ್ರಾಥ ಮಿಕ ಹಂತದ ಅಂದಾಜು ಎನ್ನಬಹುದಷ್ಟೆ.

ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸುರೇಶ್ ವಲಸೆ ಹೋಗಿ, ಕುಸುಮಾ ಹನುಮಂತರಾಯಪ್ಪ ಅವರಿಗೆ ಸ್ಪರ್ಧಿಸಲು ಇಲ್ಲಿ ಅವಕಾಶ ಕಲ್ಪಿಸುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿಯೇ ಕೇಳಿ ಬರುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ